Man dies after tipper loaded with sand runs over

ಮರಳು ಹೇರಿದ್ದ ಟಿಪ್ಪರ್ ಹಾಯ್ದು ವ್ಯಕ್ತಿ ಸಾವು

ಮರಳು ಹೇರಿದ್ದ ಟಿಪ್ಪರ್ ಹಾಯ್ದು ವ್ಯಕ್ತಿ ಸಾವು

ನಾಲತವಾಡ : ಮರಳು ತುಂಬಿಕೊಂಡು ಹೋಗುತ್ತಿದ್ದ ಟಿಪ್ಪರ್ ಹಾಯ್ದು ಬೈಕ್ ಸವಾರ ಸ್ಥಳದಲ್ಲೇ ಅಸುನೀಗಿದ ಘಟನೆ ಸೋಮವಾರ ಪಟ್ಟಣದ ಕೆನರಾ ಬ್ಯಾಂಕ್ ಮುಂದುಗಡೆ ನಡೆದಿದೆ.

ಪಟ್ಟಣದ ನಿವಾಸಿ ವೀರೇಶ ಸಂ. ವಡ್ಡರ(35) ಮೃತಪಟ್ಟ ವ್ಯಕ್ತಿ. ಬೈಕ್ ಮೇಲೆ ಸಂಚರಿಸುತ್ತಿದ್ದ ಇನ್ನೋರ್ವ ಮಹಿಳೆ ದುರ್ಗಮ್ಮ ಬೈಕ್‌ನಿಂದ ರಸ್ತೆ ಪಕ್ಕದಲ್ಲಿ ಉರುಳಿ ಬಿದ್ದಿದ್ದು ಪ್ರಾಣಾಪಾಯದಿಂದ ಬದುಕುಳಿದಿದ್ದಾರೆ.

ತಾಳಿಕೋಟೆಯಿಂದ ಮರಳು ಹೇರಿಕೊಂಡು ಘಾಳಪೂಜಿ ಕಡೆಗೆ ಟಿಪ್ಪರ್ ಹೊರಟಿತ್ತು. ಘಟನೆ ನಡೆಯುತ್ತಲೇ ನೂರಾರು ಜನ ಜಮಾಯಿಸಿದ್ದರಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ಘಟನಾ ಸ್ಥಳಕ್ಕೆ ಸಿಪಿಐ ಮೊಹ್ಮದ ಫಸಿವುದ್ದೀನ, ತಾಳಿಕೋಟಿ ಪಿಎಸ್‌ಐ ರಾಮನಗೌಡ ಸಂಕನಾಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಟಿಪ್ಪರ್ ಚಾಲಕನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಇಳಕಲ್ಲ: ತಾಲೂಕಿನ ಗಡಿಸುಂಕಾಪುರ ಗ್ರಾಮದ ಹತ್ತಿರ ಇಳಕಲ್ ದತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿಯ ಜಾಗೆಯ ಕುರಿತು ಕಲಬುರ್ಗಿ ಉಚ್ಛ ನ್ಯಾಯಾಲಯ ಸರ್ವೆ ನಂ.98ಕ್ಕೆ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ ಪಟ್ಟಣದ ಶ್ರೀ ಅಭಿನವ ತಿರುಪತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ 11 ನೇ ರಾಜ್ಯ ಪೆಂಕಾಕ್ ಸಿಲಾಸ್ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಾದ ಶಕುಂತಲಾ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ )25 ರಿಂದ 30 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ವಿಕ್ರಾಂತ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ ) 20 ರಿಂದ 25 ಕೆಜಿ ವಿಭಾಗದಲ್ಲಿ ಕಂಚಿನ ಪದಕ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ