Many schemes have been implemented for the welfare of unorganized workers

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ಹಲವು ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ಹಲವು ಯೋಜನೆ ಜಾರಿ

ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳ ಉದ್ಘಾಟನೆ ಸಮಾರಂಭದಲ್ಲಿ ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್

ಚಾಮರಾಜನಗರ, ಆಗಸ್ಟ್ 06: ವಿವಿಧ ಅಸಂಘಟಿತ ವಲಯದ ಕಾರ್ಮಿಕರ ಅಭಿವೃದ್ಧಿಗೆ ಪೂರಕವಾಗಿ ರಾಜ್ಯಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್‌ ಅವರು ತಿಳಿಸಿದರು.

ಚಾಮರಾಜನಗರ ತಾಲೂಕಿನ ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ‘ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳ ಉದ್ಘಾಟನೆ ಹಾಗೂ ಜಿಲ್ಲೆಯ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಅರಿವು ಕಾರ್ಯಕ್ರಮ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‌ 91 ರಷ್ಟು ಅಸಂಘಟಿತ ವಲಯದ ಕಾರ್ಮಿಕರನ್ನು ಗುರುತಿಸಲಾಗಿದ್ದು, ಅವರ ಜೀವನ ಭದ್ರತೆಗೆ ನೆರವಾಗುವಂತಹ ಹತ್ತು ಹಲವು ಯೋಜನೆ, ಕಾರ್ಯಕ್ರಮಗಳನ್ನು ರಾಜ್ಯಸರ್ಕಾರ ರೂಪಿಸಿದೆ. ಗಿಗ್ ಬಿಲ್, ಸಿನಿ ಬಿಲ್, ಸಾರಿಗೆ ಬಿಲ್, ಆಶಾದೀಪ ಯೋಜನೆ, ಡಾ. ಬಿ.ಆರ್. ಅಂಬೇಡ್ಕರ್ ಸಹಾಯ ಹಸ್ತ ಯೋಜನೆ, ಹೊರಗುತ್ತಿಗೆ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ಪ್ರಮುಖ ಯೋಜನೆಗಳಾಗಿವೆ. ಅಸಂಘಟಿತ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಸ್ಮಾರ್ಟ್ ಕಾರ್ಡ್‍ಗಳನ್ನು ವಿತರಿಸಲಾಗುತ್ತಿದೆ. ಸರ್ಕಾರದ ನೂತನ ಯೋಜನೆಗಳ ಬಗ್ಗೆ ಅಸಂಘಟಿತ ಕಾರ್ಮಿಕರು ಹೆಚ್ಚಿನ ಅರಿವು ಹೊಂದಬೇಕು ಎಂದರು.

ಜೀವನೋಪಾಯಕ್ಕಾಗಿ ಇತರೆಡೆಯಿಂದ ವಲಸೆ ಬರುವ ಕಾರ್ಮಿಕರ ಅನುಕೂಲಕ್ಕಾಗಿ ವಸತಿ ಸಮುಚ್ಚಯಗಳನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ನಿರ್ಮಿಸಲಾಗುತ್ತಿದೆ. ಈಗಾಗಲೇ 10 ಜಿಲ್ಲೆಗಳಲ್ಲಿ ತಾತ್ಕಾಲಿಕ ವಸತಿ ಸಮುಚ್ಚಯಗಳನ್ನು ತೆರೆಯಲಾಗಿದ್ದು, ಸಮುಚ್ಚಯದಲ್ಲಿ ಎಲ್ಲಾ ಮೂಲಸೌಕರ್ಯದೊಂದಿಗೆ 7 ಸಾವಿರ ಜನ ಉಳಿದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ನೇತೃತ್ವದ ರಾಜ್ಯಸರ್ಕಾರವು ಸಂಘಟಿತ, ಅಸಂಘಟಿತ ಕಾರ್ಮಿಕರ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಸಚಿವರು ಹೇಳಿದರು.

ಜೀಮ್ಯಾಟೋ, ಸ್ವಿಗ್ಗಿ, ಅಮೇಜಾನ್ ನಂತಹ ಸಂಸ್ಥೆಗಳಲ್ಲಿ ಕೆಲಸಗಾರರಿಗೆ ದುಡಿಯುತ್ತಿರುವವರಿಗೆ ನೆರವಾಗಲು ಗಿಗ್ ಬಿಲ್ (ಮಸೂದೆ), ಸಿನಿಮಾ ಪರದೆಯ ಹಿಂದೆ ಕೆಲಸ ಮಾಡುವ ಮೇಕಪ್ ಕಲಾವಿದರು, ಕ್ಯಾಮೆರಾಮನ್‍ಗಳು, ಸಹಾಯಕ ನೃತ್ಯಗಾರರಿಗೆ ಅನುಕೂಲ ಕಲ್ಪಿಸಲು ಸಿನಿ ಬಿಲ್ (ಮಸೂದೆ) ಹಾಗೂ ಬಸ್, ಆಟೋ ಚಾಲಕರು, ಕ್ಲೀನರ್, ಮೆಕಾನಿಕ್‍ಗಳು ಸೇರಿದಂತೆ ಇತರರ ಕಲ್ಯಾಣಕ್ಕಾಗಿ ಸಾರಿಗೆ ಬಿಲ್ (ಮಸೂದೆ)ಗಳು ಪೂರಕವಾಗಿವೆ ಎಂದು ತಿಳಿಸಿದರು.

ರಾಜ್ಯಸರ್ಕಾರ 2 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ರಾಜ್ಯದ ಮೂಲೆಮೂಲೆಗೂ ತಲುಪುತ್ತಿವೆ. ಗ್ಯಾರಂಟಿ ಯೋಜನೆಗಳಿಗಾಗಿ ವರ್ಷಕ್ಕೆ 60 ಸಾವಿರ ಕೋಟಿ ರೂ. ವೆಚ್ಚವಾಗಲಿದ್ದು, 5 ವರ್ಷಗಳಿಗೆ 3 ಲಕ್ಷ ಕೋಟಿ ರೂಪಾಯಿ ವ್ಯಯವಾಗಲಿದೆ. ಶಕ್ತಿ ಯೋಜನೆಯಡಿ ರಾಜ್ಯದಲ್ಲಿ 500 ಕೋಟಿ ಮಹಿಳಾ ಪ್ರಯಾಣಿಕರು ಸರ್ಕಾರಿ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಉಳಿದ ಯೋಜನೆಗಳಲ್ಲಿಯೂ ರಾಜ್ಯ ಸಹ ನಿರೀಕ್ಷಿತ ಪ್ರಗತಿ ಸಾಧಿಸಿದೆ. ತಲಾ ಆದಾಯ, ಜಿಡಿಪಿ ಯಲ್ಲಿ ರಾಜ್ಯ ಅಗ್ರಸ್ಥಾನದಲ್ಲಿದೆ. ಜಿ.ಎಸ್.ಟಿ ಸಂಗ್ರಹದಲ್ಲಿ ದೇಶದಲ್ಲಿಯೇ ರಾಜ್ಯ ಎರಡನೇ ಸ್ಥಾನದಲ್ಲಿದೆ ಎಂದು ಸಚಿವರಾದ ಸಂತೋಷ್ ಲಾಡ್ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಹಾಗೂ ಗುಂಡ್ಲುಪೇಟೆ ಶಾಸಕರಾದ ಎಚ್.ಎಂ. ಗಣೇಶ್ ಪ್ರಸಾದ್ ಅವರು ಮಾತನಾಡಿದರು.

ಲಿಡ್ಕರ್ ಸಂಸ್ಥೆಯ ಅಧ್ಯಕ್ಷ ಮುಂಡರಗಿ ನಾಗರಾಜು, ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಚುಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ಬದನಗುಪ್ಪೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಲ್ಲೇಶ್, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸದಸ್ಯರಾದ ಎಚ್.ಜಿ. ರಮೇಶ್, ಕೆ.ಪಿ. ಜಾನಿ, ಬಸಪ್ಪ, ಕಾರ್ಮಿಕ ಇಲಾಖೆ ಆಯುಕ್ತರಾದ ಡಾ. ಎಚ್.ಎನ್. ಗೋಪಾಲಕೃಷ್ಣ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿ ಜಂಟಿ ಕಾರ್ಯದರ್ಶಿ ಡಾ. ಎಸ್.ಬಿ. ರವಿಕುಮಾರ್,‌ ಮಂಡಳಿಯ ಕಾರ್ಯದರ್ಶಿ ಹಾಗೂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಿ. ಭಾರತಿ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ