ಇದೇ 14ರಂದು MGVC ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ; ಈಗಲೇ ಹೆಸರು ನೋಂದಾಯಿಸಿಕೊಳ್ಳಲು ಹೀಗೆ ಮಾಡಿ..

ಇದೇ 14ರಂದು MGVC ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ; ಈಗಲೇ ಹೆಸರು ನೋಂದಾಯಿಸಿಕೊಳ್ಳಲು ಹೀಗೆ ಮಾಡಿ..

ಮುದ್ದೇಬಿಹಾಳ : ಎಂ.ಜಿ.ವಿ.ಸಿ ಕಾಲೇಜು ಹಾಗೂ ಧಾರವಾಡದ ಲಾಜಿಕ್ ಕಂಪ್ಯೂಟರ್ ಸೆಂಟರ್ ಸಹಯೋಗದಲ್ಲಿ ಆ.14 ರಂದು ಎಂ.ಜಿ.ವಿ.ಸಿ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ (job fair) ಹಮ್ಮಿಕೊಳ್ಳಲಾಗಿದೆ ಎಂದು ಮೇಳದ ಜಂಟಿ ಆಯೋಜಕ ಧಾರವಾಡದ ಮಹೇಶ ಭಟ್ ಹೇಳಿದರು.

ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನಲ್ಲಿ ಗುರುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮೇಳದ ಮಾಹಿತಿ ನೀಡಿದರು.

Join Our Telegram: https://t.me/dcgkannada

ಬೆಂಗಳೂರು, ಮೈಸೂರು ಮೊದಲಾದ ಮಹಾನಗರಗಳಲ್ಲಿ ಆಯಾ ಕಾಲೇಜು, ಶಿಕ್ಷಣ ಸಂಸ್ಥೆಗಳು ತಮ್ಮ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾತ್ರ ಉದ್ಯೋಗ ಮೇಳಗಳನ್ನು ಆಯೋಜಿಸುತ್ತಿವೆ. ಆದರೆ ಅವುಗಳು ಉತ್ತರ ಕರ್ನಾಟಕ ಭಾಗದಲ್ಲಿರುವ ಕಾಲೇಜುಗಳಲ್ಲಿ ಮೇಳಗಳನ್ನು ಆಯೋಜಿಸುವುದಿಲ್ಲ. ಇದನ್ನು ಮನಗಂಡು ನಮ್ಮ ಭಾಗದ ವಿದ್ಯಾರ್ಥಿಗಳಿಗೂ ಉತ್ತಮ ಕೆಲಸ ದೊರೆಯಬೇಕು ಎಂಬ ಉದ್ದೇಶದಿಂದ ಈ ಮೇಳವನ್ನು (job fair) ಆಯೋಜಿಸಲಾಗಿದೆ ಎಂದು ತಿಳಿಸಿದರು.

ಗ್ರಾಮೀಣ ಭಾಗದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ಪದವಿ,ಸ್ನಾತಕೋತ್ತರ ಪದವಿ ಪಡೆದಿರುವ ನಿರುದ್ಯೋಗಿ ವಿದ್ಯಾವಂತ ಯುವಕ/ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಯೋಜನೆ ರೂಪಿಸಲಾಗಿದೆ.ದೇಶದ ಪ್ರಮುಖ ಕಂಪನಿಗಳಾದ ಟಾಟಾ, ಹೋಂಡಾ, ಮಾರ್ಕಪೋಲೋ, ಟೋಯೋಟಾ ಸೇರಿದಂತೆ 25ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗಲಿವೆ ಎಂದು ತಿಳಿಸಿದರು.

ವಿವಿಧ ಕಂಪನಿಗಳಲ್ಲಿ ಖಾಲಿ ಇರುವ ಸುಮಾರು 1500 ಉದ್ಯೋಗಗಳು ಖಾಲಿ ಇದ್ದು ಅವುಗಳ ಭರ್ತಿಗೆ ಮೇಳದಲ್ಲಿ ಮಾನವ ಸಂಪನ್ಮೂಲ ವಿಭಾಗದ ಅಧಿಕಾರಿಗಳು ಸಂದರ್ಶನ, ಆಯ್ಕೆಯಾದವರಿಗೆ ಉದ್ಯೋಗಪತ್ರ ವಿತರಿಸಲಿದ್ದಾರೆ. ಈಗಾಗಲೇ ರಾಜ್ಯದ 110 ಸ್ಥಳಗಳಲ್ಲಿ ಉದ್ಯೋಗ ಮೇಳ ನಡೆಸಲಾಗಿದ್ದು 40 ಸಾವಿರಕ್ಕೂ ಅಧಿಕ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲಾಗಿದೆ. ಮುದ್ದೇಬಿಹಾಳದ ಮೇಳಕ್ಕೆ (job fair) 300ಕ್ಕೂ ಹೆಚ್ಚು ಜನ ಹೆಸರು ನೋಂದಾಯಿಸಿದ್ದಾರೆ ಎಂದರು.

ಇದನ್ನೂ ಓದಿ: Suicide: ನಾಗರ ಪಂಚಮಿಯಂದು ದುರಂತ.. ನೇಣಿಗೆ ಶರಣಾದ ಪ್ರೇಮಿಗಳು!

ಎಸ್.ಜಿ.ವಿ.ಸಿ ಟ್ರಸ್ಟ್ ಕಾರ್ಯದರ್ಶಿ ಅಶೋಕ ತಡಸದ ಮಾತನಾಡಿ, ಎಂ.ಜಿ.ವಿ.ಸಿ ಕಾಲೇಜಿನ ಆವರಣದಲ್ಲಿ ಅತೀ ದೊಡ್ಡ ಉದ್ಯೋಗ ಮೇಳ ಇದಾಗಿದ್ದು ಗಂಗಮ್ಮನವರ ಆಶೀರ್ವಾದದಿಂದ ಇಂದು ಸಾವಿರಾರು ವಿದ್ಯಾರ್ಥಿಗಳು ದೇಶದ ಹಲವು ಕಡೆಗಳಲ್ಲಿ ಒಳ್ಳೆಯ ಉದ್ಯೋಗಗಳಲ್ಲಿದ್ದಾರೆ. ಉದ್ಯೋಗ ಮೇಳಕ್ಕೆ 3000ಕ್ಕೂ ಅಧಿಕ ಜನ ಬರುವ ಸಾಧ್ಯತೆ ಇದೆ ಎಂದರು.

ಮೇಳದಲ್ಲಿ ಭಾಗವಹಿಸಲು ಇಚ್ಛಿಸುವರು ಮೊ.7829529043, ಪ್ರಾಚಾರ್ಯ ಎಸ್.ಎನ್.ಪೊಲೇಶಿ 9035103184ನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಪ್ರಮುಖರಾದ ಶಿವರಾಜ ತಡಸದ,ಆಡಳಿತಾಧಿಕಾರಿ ಎ.ಬಿ.ಕುಲಕರ್ಣಿ, ಪ್ರೊ.ಎಂ.ಆಯ್.ಬಿರಾದಾರ,ಎ.ಎ.ಮುಲ್ಲಾ, ರಹೀಂ ಮುಲ್ಲಾ, ಶ್ರೀಶೈಲ ಹತ್ತಿ, ಎ.ಎಸ್.ಬಾಗವಾನ, ಎಸ್.ಎಂ.ನಿಂಬಲಗುಂದಿ, ಮೊದಲಾದವರು ಇದ್ದರು.

ಈಗಾಗಲೇ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಗಿನ ಕ್ಯೂ ಆರ್ ಕೋಡ್ ಬಳಸಿ…

ಉದ್ಘಾಟನೆ :ಉದ್ಯೋಗ ಮೇಳದ ಉದ್ಘಾಟನೆ ಆ.14 ರಂದು ಬೆಳಗ್ಗೆ 9.30ಕ್ಕೆ ಕಾಲೇಜಿನ ಆವರಣದಲ್ಲಿ ಮೇಳದ ಉದ್ಘಾಟನೆ ಹಮ್ಮಿಕೊಳ್ಳಲಾಗಿದ್ದು, ಇಲಕಲ್ ಚಿತ್ತರಗಿ ಸಂಸ್ಥಾನ ಮಠದ ಗುರುಮಹಾಂತ ಶ್ರೀ ದಿವ್ಯ ಸಾನಿಧ್ಯ ವಹಿಸುವರು. ಶಾಸಕ, ಕೆ.ಎಸ್.ಡಿ.ಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ ಅಪ್ಪಾಜಿ ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಎಸ್.ಜಿ.ವಿ.ಸಿ ಟ್ರಸ್ಟ್ ಅಧ್ಯಕ್ಷ ಸತೀಶ ಜಿಗಜಿನ್ನಿ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಎಸ್.ಜಿ.ವಿ.ಸಿ ಟ್ರಸ್ಟ್ ಕಾರ್ಯದರ್ಶಿ ಅಶೋಕ ತಡಸದ,ಟ್ರಸ್ಟ್ ಸದಸ್ಯರಾದ ಜಯಲಕ್ಷ್ಮಿ ಬಗಲಿ, ಎಲ್.ಸಿ.ಸಿ ನಿರ್ದೇಶಕ ಮಹೇಶ ಭಟ್, ಆಡಳಿತಾಧಿಕಾರಿ ಎ.ಬಿ.ಕುಲಕರ್ಣಿ ಉಪಸ್ಥಿತರಿರುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ