Massive protest by JDS party: Appeal to the governor to dismiss the Congress government

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಮುದ್ದೇಬಿಹಾಳ : ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು ಕೂಡಲೇ ಸರ್ಕಾರವನ್ನು ರಾಜ್ಯಪಾಲರು ವಜಾಗೊಳಿಸಬೇಕೆಂದು ಆಗ್ರಹಿಸಿ ಜೆಡಿಎಸ್ ಪಕ್ಷದಿಂದ ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಾಗಿ ತಹಸೀಲ್ದಾರ್ ಕಚೇರಿಗೆ ಆಗಮಿಸಿತು.

ಪಕ್ಷದ ಮುಖಂಡ ಬಸನಗೌಡ ಪಾಟೀಲ ಹಿರೇಮುರಾಳ ಮಾತನಾಡಿ, ಕಾಂಗ್ರೆಸ್ ಸರ್ಕಾರ ದುರಾಡಳಿತದಲ್ಲಿ ತೊಡಗಿದೆ. ದೈನಂದಿನ ವಸ್ತುಗಳ ಬೆಲೆ ಗಗನಕ್ಕೇರಿದ್ದು ಪ್ರತಿಯೊಂದಕ್ಕೂ ಲಂಚ ಕೊಡಬೇಕಾಗಿದೆ. ನೀರಾವರಿಗಾಗಿ ಒಂದು ನಯಾಪೈಸೆ ಅನುದಾನ ಈ ಸರ್ಕಾರದಿಂದ ಕೊಡಲು ಸಾಧ್ಯವಾಗಿಲ್ಲ ಎಂದು ದೂರಿದರು.

ಪಕ್ಷದ ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ ಮಾತನಾಡಿ, ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಹೆಸರಿನ ಮೇಲೆ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಾ ಸಾಗಿದೆ. ವಸತಿ ಹಗರಣ, ವಾಲ್ಮೀಕಿ ನಿಗಮದಲ್ಲಿ ಹಗರಣ, ಅಬಕಾರಿ ಇಲಾಖೆಯಲ್ಲಿ ಹಗರಣ ಸೇರಿದಂತೆ ಹಲವು ಹಗರಣಗಳಲ್ಲಿ ಸಿಲುಕಿ ಭ್ರಷ್ಟಾಚಾರದಲ್ಲಿ ತೊಡಗಿದ್ದು ಕೂಡಲೆ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ತಾಲ್ಲೂಕು ಅಧ್ಯಕ್ಷ ಪವಾಡೆಪ್ಪ ಹವಾಲ್ದಾರ ಮಾತನಾಡಿದರು. ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸೆಯ್ಯದ ಸಾತಿಹಾಳ, ಕಾರ್ಯದರ್ಶಿ ಅಜರುದ್ದೀನ್ ಮುಲ್ಲಾ, ಜಿಲ್ಲಾ ಉಪಾಧ್ಯಕ್ಷ ಬಸವಂತ್ರಾಯ ದೇಸಾಯಿ, ಲಾಳೇಮಶ್ಯಾಕ ನಾಯ್ಕೋಡಿ(ಬುಡ್ಡಾ), ತಾಲೂಕಾ ಪ್ರಧಾನ ಕಾರ್ಯದರ್ಶಿ ಮೋತಿಲಾಲ ಮ್ಯಾಗೇರಿ, ತಾಲೂಕಾ ವಿದ್ಯಾರ್ಥಿ ಘಟಕದ ಅಧ್ಯಕ್ಷ ಅಬ್ದುಲ್‌ ಮಜೀದ್ ಶಿರೋಳ, ಅನ್ವರಸಾಬ ಟಕ್ಕಳಕಿ, ತಾಲೂಕಾ ಕಾರ್ಯದರ್ಶಿ ಅಶೋಕ ಅಮರಣ್ಣವರ, ಸಂಗಣ್ಣ ದೇಸಾಯಿ (ಬಳಗಾನೂರ), ಶರಣಗೌಡ ಪಾಟೀಲ ಮೊದಲಾದವರು ಪಾಲ್ಗೊಂಡಿದ್ದರು.

ರಾಜ್ಯಪಾಲರಿಗೆ ಬರೆದ ಮನವಿಯನ್ನು ತಹಸೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಸಲ್ಲಿಸಲಾಯಿತು.

Latest News

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ