ಬೆಂಗಳೂರು: ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಾಗಿದ್ದು, ರಾಜಭವನವು ಬಿಜೆಪಿ ಕಚೇರಿಯಾಗಿದೆ. ಮುಡಾ ಹಗರಣದ ನೆವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಷಡ್ಯಂತ್ರದ ಒಂದು ಭಾಗವಾಗಿದೆ. ಇದಕ್ಕೆ ಬಿಜೆಪಿಯವರು ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ (MB Patil) ಕಿಡಿಕಾರಿದ್ದಾರೆ.
ಶನಿವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ಟಿ ಜೆ ಅಬ್ರಹಾಂ ಅವರು ಸಿಎಂ ವಿರುದ್ಧ ದೂರು ಕೊಟ್ಟಾಗಲೇ ಸರಕಾರದ ಮುಖ್ಯ ಕಾರ್ಯದರ್ಶಿಗಳು ರಾಜಭವನಕ್ಕೆ ಸಮರ್ಪಕ ಮಾಹಿತಿ ಕೊಟ್ಟಿದ್ದರು. ಆದರೂ ರಾಜ್ಯಪಾಲರು ತರಾತುರಿಯಲ್ಲಿ ಸಿದ್ದರಾಮಯ್ಯನವರಿಗೆ ನೋಟೀಸ್ ಕೊಟ್ಟರು. ಆಗಲೇ ಅವರ ಮೇಲೆ ಅನುಮಾನ ಬಂದಿತ್ತು. ಈಗಿನ ಅವರ ನಡೆ ಅನಪೇಕ್ಷಣೀಯವಾಗಿದೆ. ಇದನ್ನು ರಾಜ್ಯದ ಜನತೆ ಸಹಿಸಿಕೊಳ್ಳುವುದಿಲ್ಲ’ ಎಂದರು.
Join Our Telegram: https://t.me/dcgkannada
ಎಚ್ ಡಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ ಮುಂತಾದವರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿ ಎಂಟ್ಹತ್ತು ತಿಂಗಳಿನಿಂದಲೂ ರಾಜ್ಯಪಾಲರ ಮುಂದೆ ಕೋರಿಕೆಗಳಿವೆ. ಅವುಗಳನ್ನು ಉದಾಸೀನ ಮಾಡಿರುವ ಅವರು, ಯಾವ ಹುರುಳೂ ಇಲ್ಲದ ಮುಡಾ ಹಗರಣದ ಬಗ್ಗೆ ವಿಪರೀತ ಆಸಕ್ತಿ ತಾಳಿದ್ದಾರೆ ಎಂದು MB Patil ಆರೋಪಿಸಿದರು.
ಕೇಂದ್ರದ ಬಿಜೆಪಿ ಸರಕಾರವು ದೆಹಲಿ, ತಮಿಳುನಾಡು ಮುಂತಾದ ರಾಜ್ಯ ಸರ್ಕಾರಗಳ ವಿರುದ್ಧ ನಡೆಸುತ್ತಿರುವಂತಹ ಕೆಟ್ಟ ರಾಜಕಾರಣವನ್ನು ಈಗ ಕರ್ನಾಟಕದಲ್ಲೂ ಶುರು ಮಾಡಿದೆ. ಇದು ಭಾರೀ ಬಹುಮತದಿಂದ ಆರಿಸಿ ಬಂದಿರುವ ರಾಜ್ಯ ಸರ್ಕಾರದ ವಿರುದ್ಧ ತೋರಿಸುತ್ತಿರುವ ಅಸಹನೆಯಾಗಿದೆ ಎಂದು ಅವರು ಟೀಕಿಸಿದರು.
ಇದನ್ನೂ ಓದಿ: Cubbon park: ವೃದ್ಧನಿಂದ ಹೀನ ಕೃತ್ಯ.. ಕಬ್ಬನ್ ಪಾರ್ಕ್ ನಲ್ಲಿ ಮಹಿಳೆಯರ ಎದುರೇ ಹಸ್ತಮೈಥುನ.. (ವೈರಲ್ ವಿಡಿಯೋ ನೋಡಿ)
ಮುಡಾ ಹಗರಣದಲ್ಲಿ ತಪ್ಪು ಮಾಡಿರುವುದು ಆ ಸಂಸ್ಥೆ. ಸಿದ್ದರಾಮಯ್ಯನವರ ಕುಟುಂಬಕ್ಕೆ ಬದಲಿ ನಿವೇಶನಗಳನ್ನು ಕೊಟ್ಟಿದ್ದು ಬಿಜೆಪಿ ಸರಕಾರ. ಆಗ ಮುಡಾ ಸಭೆಯಲ್ಲಿ ಬಿಜೆಪಿ ನಾಯಕರೇ ಇದ್ದರು. ವಸ್ತುಸ್ಥಿತಿ ಹೀಗಿರುವಾಗ ಸಿದ್ದರಾಮಯ್ಯನವರನ್ನು ಬಲಿಪಶು ಮಾಡಲು ಸಂಚು ನಡೆಯುತ್ತಿರುವುದು ಖಂಡನೀಯ ಎಂದು ಅವರು ಪ್ರತಿಪಾದಿಸಿದರು.
Muda case: ಭಂಡತನ ಬಿಟ್ಟು ರಾಜೀನಾಮೆ ಕೊಡಿ: ಸಿಎಂ ಸಿದ್ದುಗೆ ವಿಜಯೇಂದ್ರ ಆಗ್ರಹ
ಬೆಂಗಳೂರು: ಮೈಸೂರು ಮುಡಾ (Muda case) ನಿವೇಶನ ಹಗರಣದ ದೂರಿನ ಸಂಬಂಧ ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನದತ್ತ ಅಧಿಕಾರ ಚಲಾಯಿಸಿ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭಂಡತನ ಬಿಟ್ಟು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ವಿಜಯೇಂದ್ರ ಅವರು ಪೋಸ್ಟ್ ಮಾಡಿದ್ದು, “ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನ ದತ್ತ ಅಧಿಕಾರ ಚಲಾಯಿಸಿ ಮುಖ್ಯಮಂತ್ರಿಗಳ ಮುಡಾ ಹಗರಣದ ದೂರಿಗೆ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ” ಎಂದು ಗಮನ ಸೆಳೆದಿದ್ದಾರೆ.
ಸಾಕಷ್ಟು ದಾಖಲೆ, ಪುರಾವೆಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರ ದಲ್ಲಿ ಭಾಗಿಯಾಗಿರುವುದರ ವಿರುದ್ಧ ಎಷ್ಟೇ ಹೋರಾಟ ನಡೆಸಿದರೂ ತಮ್ಮನ್ನು ಜಗ್ಗಿಸುವವರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಂಡತನ ಪ್ರದರ್ಶಿಸುತ್ತಿದ್ದರು.
ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಲು ಅನುವಾಗುವಂತೆ ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಮುಖ್ಯಮಂತ್ರಿ ಸ್ಥಾನದ ಘನತೆ ಉಳಿಸಲಿ ಎಂದು ಅವರು ಒತ್ತಾಯಿಸಿದ್ದಾರೆ.