Menstrual leave with pay in the state too

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ – 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಂಕಿತ ದೊರೆತಿದೆ. ಇದರೊಂದಿಗೆ ನಾಡಿನ ಉದ್ಯೋಗಸ್ಥ ಮಹಿಳೆಯರಿಗೆ ಋತುಚಕ್ರದ ರಜೆ ಕೊಡಿಸಲು ಮಾನ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ನಡೆಸಿದ ಸತತ ಪ್ರಯತ್ನಕ್ಕೆ ಫಲ ದೊರೆತಿದೆ‌.

ಈ ನೀತಿಯ ಜಾರಿಯೊಂದಿಗೆ ಪ್ರತಿತಿಂಗಳು ಋತು ಚಕ್ರದ ಅವಧಿಯಲ್ಲಿ ವೇತನ ಸಹಿತ ಒಂದು ದಿನದ ರಜೆ ಎಲ್ಲ ಸರ್ಕಾರಿ ಹಾಗೂ ಖಾಸಗಿ ವಲಯಗಳಲ್ಲಿ‌ ಕೆಲಸ ಮಾಡುತ್ತಿರುವ ರಾಜ್ಯದ ಮಹಿಳೆಯರಿಗೆ ಸಿಗಲಿದೆ. ಈ ಮೂಲಕ ವರ್ಷಕ್ಕೆ 12 ವೇತನ ಸಹಿತ ರಜೆ ಸಿಕ್ಕಂತಾಗುತ್ತದೆ.

ಮೊದಲಿಂದಲೂ ಕೆಲಸ ಮಾಡುವ ಮಹಿಳೆಯರಿಗೆ, ಮಹಿಳಾ ಕಾರ್ಮಿಕರಿಗೆ ನೆರವಾಗುವ ಹಲವು ಯೋಜನೆಗಳನ್ನು ಕಾರ್ಮಿಕ ಇಲಾಖೆಯ ಮೂಲಕ ರೂಪಿಸುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಹಿರಿಮೆಗೆ ಮತ್ತೊಂದು ಗರಿ ಮೂಡಿದೆ. ಇಂದು ಈ ಪ್ರಸ್ತಾವನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿರುವುದರ ಹಿಂದೆ ಸಚಿವ ಸಂತೋಷ್ ಲಾಡ್ ಅವರ ಅಪಾರ ಶ್ರಮವಿದೆ.

ಬೇರೆ ಬೇರೆ ರಾಜ್ಯಗಳಲ್ಲಿ, ದೇಶಗಳಲ್ಲಿ ಈ ವಿಷಯದಲ್ಲಿರುವ ರಜೆ ನೀತಿಗಳನ್ನೆಲ್ಲ ಕೂಲಂಕುಷವಾಗಿ ಅಧ್ಯಯನ ನಡೆಸಿರುವ ಸಂತೋಷ್ ಲಾಡ್ ಅವರು ಕರ್ನಾಟಕದಲ್ಲೂ ಈ ನೀತಿ ಸಮರ್ಪಕವಾಗಿ ಜಾರಿಗೆ ಬರುವಂತೆ ನೋಡಿಕೊಂಡಿದ್ದಾರೆ. ಸರ್ಕಾರಿ ವಲಯದಷ್ಟೇ ಅಲ್ಲದೇ ಖಾಸಗಿ ವಲಯದ ಮಹಿಳಾ ಉದ್ಯೋಗಿಗಳಿಗೂ ಈ ನೀತಿಯ ಲಾಭ ಸಿಗಲಿದೆ. ಈಗಾಗಲೇ ಖಾಸಗಿ ವಲಯದ ಹಲವು ಸಂಸ್ಥೆಗಳು ರಾಜ್ಯ ಸರ್ಕಾರದ ಈ ನೂತನ ನೀತಿಗೆ ಒಮ್ಮತ ತೋರಿವೆ. ಇನ್ನಷ್ಟು ಸಂಸ್ಥೆಗಳಿಗೆ ಈ ಬಗ್ಗೆ ಕ್ರಮ ವಹಿಸುವಂತೆ ಮಾತುಕತೆ ನಡೆಸಲಾಗುತ್ತಿದೆ‌.

ಒಟ್ಟಿನಲ್ಲಿ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ತಮ್ಮ ಇಲಾಖೆಯ ಮೂಲಕ ಮಹಿಳಾ ಸಬಲೀಕರಣದ ಜೊತೆ ಅವರ ರಕ್ಷಣೆ, ಸುರಕ್ಷತೆ, ಗೌರವವನ್ನು ಸಹ ಕಾಪಾಡಲು ದೃಢ ಹೆಜ್ಜೆ ಇರಿಸಿರುವುದು ವ್ಯಾಪಕ ಶ್ಲಾಘನೆಗೆ ಪಾತ್ರವಾಗುತ್ತಿದೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ