Money only if your name is in this list of Grahalaxmi Yojane!

Good News: Gruha Lakshmi ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವೆ Lakshmi Hebbalkar ​​

Good News: Gruha Lakshmi ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವೆ Lakshmi Hebbalkar ​​

ಬೆಳಗಾವಿ: ಗೃಹಲಕ್ಷ್ಮೀ ಯೋಜನೆಯ (Gruha Lakshmi) ಹಣ ಬಿಡುಗಡೆ ವಿಚಾರವಾಗಿ ಇತ್ತೀಚೆಗೆ ಅಧಿವೇಶನದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಆಗುತ್ತದೆ ಎಂದು ಕಾಯುತ್ತಿರುವ ಮಹಿಳೆಯರಿಗೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಗುಡ್​ನ್ಯೂಸ್​​ ನೀಡಿದ್ದಾರೆ.

ಸೋಮವಾರದಿಂದ ಶನಿವಾರದ ಒಳಗಡೆ 24ನೇ ಕಂತು ಬಿಡುಗಡೆ ಆಗುತ್ತೆ ಎಂದು ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​, ಈಗಾಗಲೇ 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಒಪ್ಪಿದೆ. ಮುಂದಿನ ವಾರ ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆ ಆಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಸತ್ತವರ ಖಾತೆ​​ಗೂ ಗೃಹಲಕ್ಷ್ಮೀ ಯೋಜನೆ ಹಣಕ್ಕೆ ಬ್ರೇಕ್​​!

ಇನ್ನು ಸತ್ತವರ ಖಾತೆ​​ಗೂ ಗೃಹಲಕ್ಷ್ಮೀ ಯೋಜನೆ ಹಣ ಸಂದಾಯ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಸಿಎಸ್​ ನೇತೃತ್ವದಲ್ಲಿ ಎರಡು ಬಾರಿ ಸಭೆ ಮಾಡಲಾಗಿದೆ. ಸತ್ತವರ ಅಕೌಂಟ್​​ಗೆ ಹಣ ಸಂದಾಯವಾದರೆ ತಕ್ಷಣ ಗೊತ್ತಾಗಲ್ಲ. ಈಗ ಸಾಫ್ಟ್​ವೇರ್​​​ ಅಭಿವೃದ್ಧಿ ಅಳವಡಿಕೆ ಮಾಡಿದ್ದೇವೆ. ಮರಣ ಪ್ರಮಾಣ ಪತ್ರಗಳನ್ನು ಅಂಗನವಾಡಿ ಕಾರ್ಯಕರ್ತರು ಪರಿಶೀಲನೆ ಮಾಡುತ್ತಾರೆ. ಹೀಗಾಗಿ ಅದನ್ನ ಸದ್ಯಕ್ಕೆ ತಡೆಹಿಡಿದಿದ್ದೇವೆ. ತಪ್ಪಾಗಿ ಸಂದಾಯವಾಗಿರುವ ಹಣವನ್ನು ವಾಪಸ್ ಪಡೆಯುವ ಹೊಣೆಗಾರಿಕೆಯನ್ನು ಕೆಲ ಬ್ಯಾಂಕ್​​ಗೆ ಸೂಚನೆ ಕೊಟ್ಟಿದ್ದೇವೆ. ಸಿಎಸ್ ಬ್ಯಾಂಕ್​​ಗೆ ನೋಟಿಸ್ ಕೊಟ್ಟಿದ್ದಾರೆ, ಲೇಟರ್ ಬರೆದಿದ್ದಾರೆ ಎಂದರು.

ಬೆಳಗಾವಿ ಜಿಲ್ಲೆಯಲ್ಲಿ 19 ತಾಲೂಕುಗಳು ಆಗುವ ಸಾಧ್ಯತೆ

ಬೆಳಗಾವಿ ಜಿಲ್ಲಾ ವಿಭಜನೆ ಕೂಗು ತಣ್ಣಗಾಯಿತಾ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಸಿಎಂ ಮನಸ್ಸಿನಲ್ಲಿ ಜಿಲ್ಲೆ ವಿಭಜನೆ ಮಾಡಬೇಕು ಅನ್ನೋದು ಇದೆ. ಆಡಳಿತಾತ್ಮಕ, ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲೆ ವಿಭಜನೆ ಆಗಬೇಕಿದೆ. ಬೆಳಗಾವಿ ತಾಲೂಕಿನಲ್ಲಿ ಹನ್ನೊಂದೂವರೆ ಲಕ್ಷ ಜನಸಂಖ್ಯೆ ಇದೆ. ಇಷ್ಟು ಜನಸಂಖ್ಯೆಗೆ ಒಬ್ಬ ತಹಶೀಲ್ದಾರ್​, ಬಹಳ ತೊಂದರೆ ಆಗುತ್ತೆ ಎಂದರು.

ಬೆಳಗಾವಿ ಜಿಲ್ಲೆಯಲ್ಲಿ 19 ತಾಲೂಕುಗಳು ಆಗುವ ಸಾಧ್ಯತೆ ಇದೆ. ಜಿಲ್ಲೆ ವಿಭಜನೆ ಘೋಷಣೆ ಮಾಡುವ ಮನಸ್ಸಿನಿಂದಲೇ ಸಿಎಂ ಬಂದಿದ್ದರು. ಬಹಳಷ್ಟು ಜನರು ನಿಯೋಗ ಬಂದಿದ್ದರಿಂದ ಚಿಂತನೆ ಮಾಡಿಲ್ಲ ಎಂದಿದ್ದಾರೆ.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು