Minister Santhosh Lad launched mobile health units

ಸಂಚಾರಿ ಆರೋಗ್ಯ ಘಟಕಗಳಿಗೆ ಸಚಿವ ಸಂತೋಷ್‌ ಲಾಡ್‌ ಚಾಲನೆ

ಸಂಚಾರಿ ಆರೋಗ್ಯ ಘಟಕಗಳಿಗೆ ಸಚಿವ ಸಂತೋಷ್‌ ಲಾಡ್‌ ಚಾಲನೆ

ಧಾರವಾಡ, ಮೇ 27: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ಸೇವೆ ಒದಗಿಸುವ ಸಂಚಾರಿ ಆರೋಗ್ಯ ಘಟಕಗಳಿಗೆ ಧಾರವಾಡದ ಸರ್ಕಿಟ್‌ ಹೌಸ್‌ನಲ್ಲಿ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಕಟ್ಟಡ ಕಾರ್ಮಿಕರ ಆರೋಗ್ಯ, ಸುರಕ್ಷತೆ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆಯಿಂದ ಪ್ರತಿ ಜಿಲ್ಲೆಗೆ ಸಂಚಾರಿ ಆರೋಗ್ಯ ಘಟಕಗಳನ್ನು ನೀಡಲಾಗಿದೆ. ನೋಂದಾಯಿತ ಕಾರ್ಮಿಕರು ಮತ್ತು ಅವರ ಮಕ್ಕಳು ಆರೋಗ್ಯವಾಗಿ ಇರಬೇಕೆಂಬ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿ ಕಾರ್ಮಿಕರು ಕೆಲಸ ಮಾಡುವ ಸ್ಥಳಗಳಿಗೆ ಹೋಗಿ ಆರೋಗ್ಯ ತಪಾಸಣೆ ಮಾಡಲಾಗುತ್ತದೆ ಎಂದು ಹೇಳಿದರು.

ಕಟ್ಟಡ ನಿರ್ಮಾಣ ಪ್ರದೇಶಗಳಿಗೆ ಹೋಗಿ, ಜ್ವರ, ಕೆಮ್ಮು, ಮಧುಮೇಹ, ರಕ್ತದೊತ್ತಡ, ರಕ್ತ ಪರೀಕ್ಷೆ ಸೇರಿದಂತೆ ಸುಮಾರು 20 ರೀತಿಯ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ತಪಾಸಣೆ ಕುರಿತ ಅವರ ದಾಖಲೆಗಳು ಆನ್ ಲೈನ್ ಮೂಲಕ ನೇರವಾಗಿ ಕಾರ್ಮಿಕ ಇಲಾಖೆಯ ಮುಖ್ಯ ಕಚೇರಿಗೆ ತಲುಪುತ್ತದೆ. ಕಾರ್ಮಿಕರ ಅಧಿಕೃತ ದಾಖಲೆಗಳನ್ನು ಅಂತರ್ಜಾಲದ ಮೂಲಕ ದೃಢ ಪಡಿಸಿಕೊಳ್ಳಲಾಗುತ್ತದೆ ಎಂದರು.

ಕಾರ್ಯಾದೇಶ ಪಡೆದಿರುವ ಸಂಸ್ಥೆಗಳು ಪ್ರತಿ ತಿಂಗಳು ಸಂಚಾರಿ ಆರೋಗ್ಯ ಕ್ಲಿನಿಕ್ ಸಂಚರಿಸುವ ಮಾರ್ಗ, ಸ್ಥಳದ ಬಗ್ಗೆ ರೂಟ್ ಮ್ಯಾಪ್ ಸಿದ್ಧಪಡಿಸಿ, ಖಾತರಿಪಡಿಸಿಕೊಳ್ಳಬೇಕು. ಪ್ರತಿ ತಿಂಗಳ ರೂಟ್ ಮ್ಯಾಪ್‍ಗಳನ್ನು ಕನಿಷ್ಠ 15 ದಿನಗಳ ಮುಂಚಿತವಾಗಿ ಸಿದ್ದಪಡಿಸಿ, ವಾಹನಗಳು ಸಂಚರಿಸುವ ಮಾರ್ಗದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಲು ಪ್ರಚಾರ ಮಾಡಬೇಕು ಎಂದರು.

ರೂಟ್ ಮ್ಯಾಪ್ ತಯಾರಿಸುವಾಗ ಸಂಸ್ಥೆಯು ಎಲ್ಲಾ ತಾಲ್ಲೂಕುಗಳು ಮತ್ತು ತಾಲ್ಲೂಕಿನ ಎಲ್ಲಾ ಪ್ರದೇಶಗಳು (ಗ್ರಾಮ, ವಾರ್ಡ್, ಹೋಬಳಿ) ಒಳಪಡುವ ರೀತಿ ಕ್ರಮವಹಿಸಿ ಹಾಗೂ ಎಲ್ಲಾ ವಿಧಾನಸಭಾ ಕ್ಷೇತ್ರಗಳು ಒಳಪಡುವ ರೀತಿಯಲ್ಲಿ ರೂಟ್ ಮ್ಯಾಪ್‍ನ್ನು ಸಿದ್ದಪಡಿಸುತ್ತಾರೆ. ರೂಟ್ ಮ್ಯಾಪ್‍ನ್ನು ಸಿದ್ದಪಡಿಸುವಾಗ ಪ್ರಯಾಣದ ಸಮಯವು ಅತ್ಯಂತ ಕಡಿಮೆ ಇರುವಂತೆ ಹಾಗೂ ನಿಗದಿತ ಸ್ಥಳದಲ್ಲಿ ಸಂಚಾರಿ ಆರೋಗ್ಯ ಘಟಕಗಳು ಕನಿಷ್ಠ 04 ಗಂಟೆಗಳಾದರೂ ಕಾರ್ಯನಿರ್ವಹಿಸುವುದನ್ನು ಖಾತರಿಪಡಿಸಿಕೊಳ್ಳಲಾಗುತ್ತದೆ ಎಂದು ಅವರು ಹೇಳಿದರು.

ಶಾಸಕರಾದ ಅರವಿಂದ ಬೆಲ್ಲದ, ಎನ್. ಎಚ್. ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಸಿಇಓ ಭುವನೇಶ ಪಾಟೀಲ, ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಎಂ. ಬ್ಯಾಕೋಡ್, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ಡಾ. ರುದ್ರೇಶ ಘಾಳಿ, ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕಿರ್ ಸನದಿ ಹಾಗೂ ಕಾರ್ಮಿಕ ಇಲಾಖೆ ಸಹಾಯಕ ಆಯುಕ್ತ ಸಚೀನ್, ಜಿಲ್ಲಾ ಕಾರ್ಮಿಕ ಅಧಿಕಾರಿಗಳು, ಹಿರಿಯ ಕಾರ್ಮಿಕ ನಿರೀಕ್ಷಕರು ಇತರರು ಉಪಸ್ಥಿತರಿದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು