Minister Santhosh Lad launched our Nagar, Swachh Nagar special campaign

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ʼನಮ್ಮ ನಗರ; ಸ್ವಚ್ಛ ನಗರʼ ವಿಶೇಷ ಸ್ವಚ್ಛತಾ ಅಭಿಯಾನದ ಅಂಗವಾಗಿ ಮಾಳಮಡ್ಡಿ ಸುತ್ತಮುತ್ತಲಿನ ಪ್ರದೇಶ, ರೈಲು ನಿಲ್ದಾಣ ರಸ್ತೆ ಸಮೀಪ ಹಾಗೂ ಮಹಿಷಿ ರಸ್ತೆ ಹತ್ತಿರ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸ್ವಚ್ಛತಾ ಅಭಿಯಾನಕ್ಕೆ ಸಾರ್ವಜನಿಕರಾದ ನೀವು ಕೈ ಜೋಡಿಸಿ ನಮ್ಮ ನಗರ, ಸ್ವಚ್ಛ ನಗರ ಎಂಬ ಅಭಿಮಾನ ಪ್ರಜ್ಞೆ ನಗರದ ಪ್ರತಿ ನಾಗರಿಕರಲ್ಲಿ ಇರಬೇಕು. ಅಂದಾಗ ಮಾತ್ರ ನಗರದ ಸೌಂದರ್ಯ ಹೆಚ್ಚಿಸಲು ಮತ್ತು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಮಹಾನಗರ ಪಾಲಿಕೆಯಿಂದ ಆರಂಭಿಸಿರುವ ಸ್ವಚ್ಛತಾ ಅಭಿಯಾನಕ್ಕೆ ಎಲ್ಲರೂ ಕೈ ಜೋಡಿಸಿ ಹಾಗೂ ನಗರ ನಿವಾಸಿಗಳು ಸಕ್ರಿಯವಾಗಿ ಭಾಗವಹಿಸಿದರೆ, ನಗರ ಸ್ವಚ್ಛತೆ ಕಾಪಾಡಬಹುದು ಎಂದು ಸಾರ್ವಜನಿಕರಿಗೆ ತಿಳಿಸಿದರು.

ಮಹಾನಗರ ಪಾಲಿಕೆಯಿಂದ ಈ ಸ್ವಚ್ಛತಾ ಅಭಿಯಾನವನ್ನು ಪ್ರತಿವಾರ ನಡೆಸಬೇಕು. ಅವಳಿನಗರದ ನಾಗರಿಕರಲ್ಲಿ ಹೆಚ್ಚೆಚ್ಚು ಸಿವಿಕ್ ಸೆನ್ಸ್ ಬಳಸಬೇಕು. ಪ್ರತಿಯೊಬ್ಬರು ಪೌರ ಕಾರ್ಮಿಕರಂತೆ ತಮ್ಮ ಮನೆ ಹಾಗೂ ತಮ್ಮ ಮನೆ ಸುತ್ತಮುತ್ತಲಿನ ಪ್ರದೇಶವನ್ನು ತಾವೇ ಪ್ರತಿದಿನ ಸ್ವಚ್ಛವಾಗಿ ಇಡಬೇಕು. ತಮ್ಮ ಮನೆಯ ಹಿಂದೆ ಮುಂದೆ ಸರಕಾರಿ ಜಮೀನು, ರಸ್ತೆ ಇದ್ದರೂ ಅದು ತಮ್ಮದೆಂದು ತಿಳಿದು ಕ್ಲೀನ್ ಮಾಡಿ ಇಟ್ಟಕೊಳ್ಳಬೇಕು. ಇದು ನಮ್ಮ ನಗರ ಎಂಬ ಹೆಮ್ಮೆ ಮತ್ತು ಇದು ನನ್ನ ಕೆಲಸ ಎಂಬ ಭಾವನೆ ಇದ್ದಾಗ ಮಾತ್ರ ನಗರ ಸುಂದರ, ಹಸಿರು ಆಗಲು ಸಾಧ್ಯವೆಂದು ಸಚಿವರು ತಿಳಿಸಿದರು.

ಧಾರವಾಡ ನಗರದಲ್ಲಿ ರೈಲ್ವೆ ಸ್ಟೇಶನ್, ಮಾಳ ಮಡ್ಡಿ, ವನವಾಸಿ ರಾಮಮಂದಿರ, ಕಬ್ಬೂರ ರಸ್ತೆ ಮತ್ತು ರಾಮನಗೌಡ ಆಸ್ಪತ್ರೆ, ಮಾಳಾಪುರ ಲಾಸ್ಟ್ ಬಸ್ ನಿಲ್ದಾಣ, ಮತ್ತು ಶಿವಾಜಿ ಸರ್ಕಲ್, ಹೆಬ್ಬಳ್ಳಿ ಅಗಸಿ, ಚರಂತಿಮಠ ಗಾರ್ಡನ್, ಹೊಸಯಲ್ಲಾಪುರ ರಸ್ತೆ ಮತ್ತು ಪೌಲ್ ಕ್ಯಾಂಟಿನ್, ಸರಸಗಂಗಾ ಶಾಲೆ, ಜನ್ನತನಗರ ಪ್ರದೇಶಗಳಿಗೆ ಭೇಟಿ ನೀಡಿ, ಪೌರಕಾರ್ಮಿಕರೊಂದಿಗೆ ಸ್ವಚ್ಛತಾ ಕಾರ್ಯಕ್ಕೆ ಕೈ ಜೋಡಿಸಿ, ಸಲಿಕೆಯಿಂದ ತ್ಯಾಜ್ಯ ಸಂಗ್ರಹಿಸಿದರು, ಬುಟ್ಟಿ ತುಂಬಿ ಕಸದ ಟ್ರ್ಯಾಕ್ಟರಿಗೆ ಸ್ವತಃ ಕಸ ಹಾಕಿದರು. ಕಸಬರಿಗೆಯಿಂದ ಕಸಗೂಡಿಸಿದರು. ಸಚಿವರು, ಜಿಲ್ಲಾಧಿಕಾರಿಗಳು ಬುಟ್ಟಿ, ಕಸಬರಿಗೆ ಹಿಡಿದು ಸ್ವಚ್ಛತೆಗೆ ಕೈ ಜೋಡಿಸಿದ್ದರಿಂದ, ಪೌರಕಾರ್ಮಿಕರ ಆತ್ಮಸ್ಥೈರ್ಯ ಹೆಚ್ಚಿ, ಅವರ ಅಭಿಮಾನ, ಗೌರವ, ಹೆಮ್ಮೆಯಿಂದ ಇನ್ನಷ್ಟು ಕೆಲಸ ಮಾಡಲು ಸ್ಫೂರ್ತಿ ದೊರೆಯಿತು.

ಅಭಿಯಾನದಲ್ಲಿ ಜಿ.ಪಂ. ಸಿಇಓ ಭುವನೇಶ ಪಾಟೀಲ, ಎಸ್.ಪಿ. ಡಾ.ಗೋಪಾಲ ಬ್ಯಾಕೋಡ, ಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ ಆದಿಯಾಗಿ ಜಿಲ್ಲೆಯ ಎಲ್ಲ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳು ತಮ್ಮ ಇಲಾಖೆ, ಕಚೇರಿ ಸಿಬ್ಬಂದಿಗಳೊಂದಿಗೆ ಭಾಗವಹಿಸಿ, ಸಚಿವರ ಕನಸಿನ ಸ್ವಚ್ಛನಗರ ಅಭಿಯಾನಕ್ಕೆ ಕೈ ಜೋಡಿಸಿ, ಕಸಕಡ್ಡಿ, ಚರಂಡಿ ತ್ಯಾಜ್ಯ ತೆಗೆದರು.

ಕೊಳೆತ ಕಸಕಡ್ಡಿ ಚಲ್ಲಬೇಡಿ: ಚರಂಡಿ ಸ್ವಚ್ಛಗೊಳಿಸುವುದು, ತ್ಯಾಜ್ಯದ ಕಸ ತುಂಬುವುದು, ಪರಿಕರಗಳಿಂದ ತ್ಯಾಜ್ಯ ತುಂಬುವುದರ ಮೂಲಕ ಅವರು ಎಲ್ಲೆಂದರಲ್ಲಿ ಕಸ, ಮುಸುರೆ, ತ್ಯಾಜ್ಯ ಚೆಲ್ಲದಂತೆ ಹಾಗೂ ಅಲ್ಲಿಯೇ ತರಕಾರಿ ಮಾರುವವರಿಗೆ ಬೇಡವಾದ, ಕೊಳೆತ ತಪ್ಪಲು, ತರಕಾರಿಯನ್ನು ಎಲ್ಲಿ ಬೇಕಂದರಲ್ಲಿ ಎಸೆಯದಂತೆ ಸಚಿವರು ವಿನಂತಿಸಿದರು.

ಹೂಳು ತುಂಬಿದ ಚರಂಡಿ ಕ್ಲೀನ್: ಧಾರವಾಡ ರೈಲ್ವೆ ಸ್ಟೇಷನ್ ರಸ್ತೆ ಹತ್ತಿರ ಹುಳು ತುಂಬಿದ ಗಟಾರು ಸ್ವತಃ ಅವರೇ ಸ್ವಚ್ಛಗೊಳಿಸಿದರು, ಕಸಚಲ್ಲಿದ ಬ್ಲ್ಯಾಕ್ ಸ್ಪಾಟ್ ಗಳನ್ನು ಎಲ್ಲಾ ಅಧಿಕಾರಿಗಳು ಸೇರಿಕೊಂಡು ಸ್ವಚ್ಛತೆ ಕಾರ್ಯ ಮಾಡಿದರು. ಮನೆಯ ಕಾಂಪೌಂಡಿಗೆ ಹಚ್ಚಿ ಫುಟಪಾತ್ ಮೇಲೆ ಮಣ್ಣಿನ ರಾಶಿ ಬಿದ್ದಿರುವುದನ್ನು ಕಂಡು ತಕ್ಷಣವೇ ಜೆಸಿಬಿ ಮುಖಾಂತರ ತೆರವುಗೊಳಿಸಿದರು. ರಸ್ತೆಯಿಂದ ಮೇಲಿರುವ ಮತ್ತು ಕೆಳಗಿರುವ ಮ್ಯಾನ್ ಹೋಲ್ ಮುಚ್ಚಳಗಳು, ಕಸ ತುಂಬಿದ ಖಾಲಿ ಸೈಟ್‍ಗಳನ್ನು ಪರಿಶೀಲಿಸಿ, ತಕ್ಷಣ ಸಂಬಂಧಿಸಿದವರ ಮೇಲೆ ಕ್ರಮಕೈಗೊಳ್ಳಲು ಸೂಚಿಸಿದರು.

ಸ್ವಚ್ಛತಾ ಅಭಿಯಾನದಲ್ಲಿ ಐಎಎಸ್ ಪ್ರೊಬೇಷನರಿ ಅಧಿಕಾರಿ ರಿತಿಕಾ ವರ್ಮಾ, ಮಹಾನಗರಪಾಲಿಕೆ ಮಹಾಪೌರ ರಾಮಪ್ಪ ಬಡಿಗೇರ, ಉಪ ಪೊಲೀಸ್ ಆಯುಕ್ತ ಮಾನಿಂಗ ನಂದಗಾವಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ ಸಂತೋಷ ಬಿರಾದಾರ, ಶಾಲಾ ಮತ್ತು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್. ಎಸ್. ಕೆಳದಿಮಠ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ಮಹಾನಗರಪಾಲಿಕೆಯ ಸದಸ್ಯರು, ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಅಧ್ಯಾಪಕರು, ಶಿಕ್ಷಕರು, ಇತರ ವಿವಿಧ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು, ಸಿಬ್ಬಂದಿಗಳು, ಸಾರ್ವಜನಿಕರು, ಪೌರಕಾರ್ಮಿಕರು ಭಾಗವಹಿಸಿದ್ದರು.

Latest News

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಹಳೇ ಸರಕಾರಿ

ಬಾಕಿ ಬಿಲ್ ಪಾವತಿಗೆ ಆಗ್ರಹ :                                             ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಬಾಕಿ ಬಿಲ್ ಪಾವತಿಗೆ ಆಗ್ರಹ : ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಮುದ್ದೇಬಿಹಾಳ : ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದೆರಡೂವರೆ ವರ್ಷಗಳಿಂದ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸದೇ ಇರುವ ಕಾರಣದಿಂದ ಗುತ್ತಿಗೆದಾರರ ಕುಟುಂಬಗಳು ತೀವ್ರ ಸಂಕಷ್ಟದಲ್ಲಿವೆ ಎಂದು ಗುತ್ತಿಗೆದಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಯ್.ಎಂ.ಪಟ್ಟಣಶೆಟ್ಟಿ ಹೇಳಿದರು. ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಸಭಾಭವನದಲ್ಲಿ ಭಾನುವಾರ ತಾಲ್ಲೂಕು ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರದಲ್ಲಿ 30 ಸಾವಿರ ಕೋಟಿಗೂ ಅಧಿಕ ಬಿಲ್ ಪಾವತಿಸುವುದು ಬಾಕಿ ಉಳಿಸಿಕೊಂಡಿರುವುದರಿAದ ಎಲ್ಲ ಹಂತದ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ರೈತಾಪಿ ಕುಟುಂಬದಲ್ಲಿ ಜನಿಸಿ ಗ್ರಾಮೀಣ ಪ್ರದೇಶದಲ್ಲಿ ಹಳ್ಳಿಯ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಎಂ.ಎಸ್.ಕೊಪ್ಪ ಅವರು ಆರಂಭಿಸಿರುವ ಶಾಲೆ ಬಡವರ ಮಕ್ಕಳಿಗೆ ಶಿಕ್ಷಣ ನೀಡುವ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸುತ್ತಿದೆ ಎಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು. ಮುದ್ದೇಬಿಹಾಳ ತಾಲ್ಲೂಕು ಇಂದು ಶಿಕ್ಷಣಕ್ಕೆ ಒಳ್ಳೆಯ ಹೆಸರು ಮಾಡಿದೆ.ಬಿಎಎಸ್ ಶಾಲೆ, ಅಂಜುಮನ್ ಸಂಸ್ಥೆ,ಅಹಿಲ್ಯಾದೇವಿ ಶಿಕ್ಷಣ ಸಂಸ್ಥೆ,ನಾಗರಬೆಟ್ಟ ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ