Minister Santosh Lad visited the families of farmers who died due to debt

ಸಾಲಭಾದೆಯಿಂದ ಮೃತರಾದ ರೈತ ಕುಟುಂಬಗಳಿಗೆ ಸಚಿವ ಸಂತೋಷ್ ಲಾಡ್ ಭೇಟಿ

ಸಾಲಭಾದೆಯಿಂದ ಮೃತರಾದ ರೈತ ಕುಟುಂಬಗಳಿಗೆ ಸಚಿವ ಸಂತೋಷ್ ಲಾಡ್ ಭೇಟಿ

ಹುಬ್ಬಳ್ಳಿ̧ ಜುಲೈ 14: ಕುಂದಗೋಳ ತಾಲೂಕಿನ ಭರದ್ವಾಡ ಗ್ರಾಮದಲ್ಲಿ ಸಾಲಬಾಧೆಯಿಂದ ಇಬ್ಬರೂ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ತುಂಬಾ ದುಃಖದ ಸಂಗತಿ. ಈ ರೀತಿಯ ಘಟನೆ ನಡೆಯಬಾರದಿತ್ತು. ರೈತರ ಕುಟುಂಬಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು. ರೂ.ಐದು ಲಕ್ಷ ಪರಿಹಾರ ಮತ್ತು ರಾಜ್ಯ ಸರ್ಕಾರದಿಂದ ಅಗತ್ಯ ನೆರವು ಒದಗಿಸಲು ಕ್ರಮ ವಹಿಸಲಾಗುವುದು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಹೇಳಿದರು.

ಭರದ್ವಾಡ ಗ್ರಾಮಕ್ಕೆ ಭೇಟಿ ನೀಡಿ, ಇತ್ತೀಚೆಗೆ ಮೃತರಾದ ರೈತರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಭರದ್ವಾಡ ಗ್ರಾಮದ ರೈತರಾದ ರವಿರಾಜ ಬಸವರಾಜ ಜಾಡರ ಹಾಗೂ ಬಸನಗೌಡ ಶಿವನಗೌಡ ಪಾಟೀಲ ಅವರ ಕುಟುಂಬಸ್ಥರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು. ಸರ್ಕಾರದ ವತಿಯಿಂದ ಅವರ ಕುಟುಂಬಸ್ಥರಿಗೆ ಮನೆ, ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.

ರವಿರಾಜ ಜಾಡರ ಅವರ ಕೆನರಾ ಬ್ಯಾಂಕ್ ಸಾಲವನ್ನು ನಮ್ಮ ಫೌಂಡೇಶನ್ ವತಿಯಿಂದ ಭರಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಬೆಳೆ ವಿಮೆ ಪರಿಹಾರವನ್ನು ಹಂತ ಹಂತವಾಗಿ ಹಾಗೂ ವ್ಯವಸ್ಥಿತ ರೀತಿಯಲ್ಲಿ ವಿತರಣೆ ಮಾಡಲಾಗುವುದು. ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ವಿಳಂಬವಾಗದಂತೆ ಅಗತ್ಯ ಕ್ರಮ ವಹಿಸಲಾಗುವುದು ಎಂದರು.

ಹುಬ್ಬಳ್ಳಿ ಧಾರವಾಡ ನಡುವೆ ಇಆರ್‌‌ಟಿ ಸಾರಿಗೆ:
ಹುಬ್ಬಳ್ಳಿ ಧಾರವಾಡ ನಡುವೆ ಓಡಾಡುತ್ತಿರುವ ಬಿಆರ್‌‌ಟಿಎಸ್ (ತ್ವರಿತ ಬಸ್ ಸಾರಿಗೆ ವ್ಯವಸ್ಥೆ) ಬದಲಿಗೆ ಇಆರ್‌‌ಟಿ ಸಾರಿಗೆ ವ್ಯವಸ್ಥೆ ಜಾರಿಗೊಳಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ‌. ಅದರ ಸಾಧಕ ಬಾಧಕಗಳ ಕುರಿತು ಸರ್ಕಾರ ಮಟ್ಟದಲ್ಲಿ ಚರ್ಚಿಸಲಾಗುವುದು. ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಾರಿಗೆ ವ್ಯವಸ್ಥೆಯನ್ನು ನೀಡುವುದು ಸರ್ಕಾರದ ಮೂಲ ಧ್ಯೇಯವಾಗಿದೆ. ಮುಂದಿನ ಒಂದು ತಿಂಗಳಲ್ಲಿ ಡಿಪಿಆರ್ (ವಿಸ್ತೃತ ಯೋಜನಾ ವರದಿ) ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕಿ ಕುಸುಮಾವತಿ ಶಿವಳ್ಳಿ, ಎಂ.ಎಸ್.ಅಕ್ಕಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ. ಆರ್.ಜೆ., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ್ ಬ್ಯಾಕೋಡ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ತಹಶೀಲ್ದಾರ ರಾಜು ಮಾವರಕರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ