
ಬೆಂಗಳೂರು : ಸಚಿದ್ವಯರ ಮೇಲೆ ಹನಿ ಟ್ರ್ಯಾಪ್ ಕುರಿತು ಸಚಿವ ಸತೀಶ್ ಜಾರಕಿಹೊಳಿ ಸ್ಫೋಟಕ ಬಾಂಬ್ ಸಿಡಿಸಿದ್ದಾರೆ.

ಸದ್ಯಕ್ಕೆ ರಾಜ್ಯದಲ್ಲಿ ರಾಜಕಾರಣಿಗಳ ಮೇಲೆ ಹನಿಟ್ರ್ಯಾಪ್ ಆರೋಪ ಕೇಳಿ ಬರುತ್ತಿದ್ದು, ಇದಕ್ಕೆ ಪುಷ್ಠಿ ನೀಡುವಂತೆ ಇದೀಗ ಲೋಕೋಪಯೋಗಿ ಇಲಾಖೆಯ ಸಚಿವರಾದಂತಹ ಸತೀಶ್ ಜಾರಕಿಹೊಳಿಯವರು ಸಚಿವರೊಬ್ಬರ ಮೇಲೆ ಎರಡು ಬಾರಿ ಹನಿಟ್ರ್ಯಾಪ್ ಆಗಿದೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ.
ಸಚಿವರಿಬ್ಬರ ಹನಿ ಟ್ರ್ಯಾಪ್ ಆಗಿರುವುದು ಸತ್ಯ. ಈ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ ಜೊತೆಗೆ ಚೆರ್ಚಿಸುವೆ ಎಂದಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಗೂ ಈ ಕುರಿತು ದೂರು ಸಲ್ಲಿಕೆಯಾಗಿದೆ ಎಂಬುದು ಗಮನಾರ್ಹ. ಹನಿ ಟ್ರ್ಯಾಪ್ ಮಾಡಿಸಿದರ ಹೆಸರನ್ನು ಯಾರೂ ಬಹಿರಂಗವಾಗಿ ಹೇಳುತ್ತಿಲ್ಲ. ಕೈ ಹೈಕಮಾಂಡ್ ಏನು ಕ್ರಮ ಕೈಗೊಳ್ಳುತ್ತದೆ ಎಂಬುದು ಕುತೂಹಲ ಮೂಡಿಸಿದೆ.