ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಗುರುವಾರ ಶಾಸಕ ಸಿ.ಎಸ್.ನಾಡಗೌಡ ಕುಂಟೋಜಿ ಗ್ರಾಮದ ರೈತನ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ರೈತರು ಧೃತಿಗೆಡದೇ ತಪ್ಪು ನಿರ್ಧಾರ ತೆಗೆದುಕೊಳ್ಳಬಾರದು. ಸಂಕಷ್ಟದ ಸಮಯದಲ್ಲಿ ಸರ್ಕಾರ, ತಾಲ್ಲೂಕು ಆಡಳಿತ ನಿಮ್ಮೊಂದಿಗೆ ನಿಲ್ಲಲಿದೆ. ನ್ಯಾಯಬದ್ದವಾಗಿ ಬರುವ ಪರಿಹಾರವನ್ನು ಆದಷ್ಟು ತ್ವರಿತವಾಗಿ ನಿಮಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮುಖಂಡ ಸಂಗನಗೌಡ ಪಾಟೀಲ, ಸಂಗನಗೌಡ ಬಿರಾದಾರ, ಅಪ್ಪುಗೌಡ ಮಾಡಗಿ, ಮಹೆಬೂಬ ದಖನಿ ಹಾಗೂ ಗೌಡರ ಕುಟುಂಬದ ಸದಸ್ಯರು ಇದ್ದರು.