MLA Pradeep Eshwar with Megastar Chiranjeevi

ಮೆಗಾಸ್ಟಾರ್ ಚಿರಂಜೀವಿ ಜತೆಗೆ ಶಾಸಕ ಪ್ರದೀಪ್ ಈಶ್ವರ್ ಗೆ ಇದನ್ನು ಮಾಡುವ ಆಸೆಯಂತೆ (ವಿಡಿಯೋ ನೋಡಿ)

ಮೆಗಾಸ್ಟಾರ್ ಚಿರಂಜೀವಿ ಜತೆಗೆ ಶಾಸಕ ಪ್ರದೀಪ್ ಈಶ್ವರ್ ಗೆ ಇದನ್ನು ಮಾಡುವ ಆಸೆಯಂತೆ (ವಿಡಿಯೋ ನೋಡಿ)

ಚಿಕ್ಕಬಳ್ಳಾಪುರ: ‘ರಾಜ್ಯ ರಾಜಕಾರಣದಲ್ಲಿ ಕೆಲವರನ್ನು ನಾನು ಡ್ಯಾನ್ಸ್ ಮಾಡಿಸಿದ್ದೇನೆ. ನನ್ನ ನೆಚ್ಚಿನ ನಾಯಕ ಮೆಗಾಸ್ಟಾರ್ ಚಿರಂಜೀವಿ ಜತೆಗೆ ಡ್ಯಾನ್ಸ್ ಮಾಡಬೇಕು ಎಂಬುದು ಬಹುಕಾಲದ ನನ್ನ ಹೆಬ್ಬಯಕೆಯಾಗಿದೆ. ಇಂತಹ ಅವಕಾಶ ದೊರೆತರೆ ನನ್ನ ಜೀವನದ ಬಹುದೊಡ್ಡ ಸೌಭಾಗ್ಯವಾಗಲಿದೆ’ ಎಂದು ಶಾಸಕ ಪ್ರದೀಪ್ ಈಶ್ವರ್ ಅವರು ಬಣ್ಣದ ಲೋಕಕ್ಕೆ ಎಂಟ್ರಿ ಕೊಡುವ ಕುರಿತು ಪ್ರತಿಕ್ರಿಯಿಸಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: Crime news: ಪತ್ನಿಯನ್ನೇ 2 ತಿಂಗಳಿನಿಂದ ಶೆಡ್‌ನಲ್ಲಿ ಕೂಡಿ ಹಾಕಿದ ಪೊಲೀಸಪ್ಪ.. ಸಾಲದಕ್ಕೆ ಬೇರೆಯವರೊಂದಿಗೆ ಓಡಿ ಹೋಗಿದ್ದಾಳೆ ದೂರು ಕೊಟ್ಟ..!

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿಶೇಷ ಚೇತನರಿಗೆ ತ್ರಿಚಕ್ರವಾಹನ ವಿತರಿಸಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಚಿರಂಜೀವಿ ಚಿತ್ರದಲ್ಲಿ ಅಭಿನಯ:

ತೆಲುಗು ಚಿತ್ರರಂಗದ ಹೆಸರಾಂತ ನಟ ಮೆಗಾಸ್ಟಾರ್ ಚಿರಂಜೀವಿ ಅವರು ಸದ್ಯ ವಿಶ್ವಂಬರ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇದಾದ ನಂತರ ಸೆಟ್ಟೇರಲಿರುವ ಅವರ ಮುಂದಿನ ಚಿತ್ರದಲ್ಲಿ ತಾವು ನಟಿಸುವ ಅವಕಾಶದ ಬಗ್ಗೆ ಚರ್ಚೆ ನಡೆದಿದೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು.

ನಾನು ಮೆಗಾಸ್ಟಾ‌ರ್ ಚಿರಂಜೀವಿ ಅವರ ಬಹು ದೊಡ್ಡ ಅಭಿಮಾನಿ ಅವರಿಗೆ ನನ್ನ ಮೇಲೆ ವಿಶೇಷವಾದ ಪ್ರೀತಿ ಇದೆ. ಕಾರಣ ನಾನು ಅವರ ಸಮುದಾಯದ ಹುಡುಗ ಎಂಬುದೇ ಆಗಿದೆ.ನಾನು ಶಾಸಕನಾದಾಗಲೂ ಹೈದರಾಬಾದ್‌ನ ಮನೆಗೆ ಕರೆಸಿದ್ದರು. ಅವರ ಸಹೋದರ ಪವನ್ ಕಲ್ಯಾಣ್ ಅವರು ಗೆದ್ದಾಗ ನಾನು ಕೂಡ ಫೋನ್ ಮಾಡಿ ಶುಭಾಶಯ ಹೇಳಿದ್ದೆ. ಅವರ ತೆಲುಗು ಸಿನಿಮಾದಲ್ಲಿ ನಟನೆಯ ಅವಕಾಶದ ಬಗ್ಗೆ ಚರ್ಚೆ ನಡೆದಿರುವುದು ನಿಜ ಎಂದರು.

ಇದನ್ನೂ ಓದಿ: Crime news: ಪತ್ನಿಯನ್ನೇ 2 ತಿಂಗಳಿನಿಂದ ಶೆಡ್‌ನಲ್ಲಿ ಕೂಡಿ ಹಾಕಿದ ಪೊಲೀಸಪ್ಪ.. ಸಾಲದಕ್ಕೆ ಬೇರೆಯವರೊಂದಿಗೆ ಓಡಿ ಹೋಗಿದ್ದಾಳೆ ದೂರು ಕೊಟ್ಟ..!

ನನಗೆ ಚಿರಂಜೀವಿ ಅವರ ಜೊತೆ ಡ್ಯಾನ್ಸ್ ಮಾಡಬೇಕು ಎಂಬುದು ಆಸೆ. ಒಂದು ಸಣ್ಣ ಸ್ಟೆಪ್ ಹಾಕಲು ಅವಕಾಶ ಸಿಕ್ರೂ ಅದು ನನ್ನ ಸೌಭಾಗ್ಯ. ನಾನು ರಾಜಕಾರಣದಲ್ಲಿ ಕೆಲವರನ್ನ ಡ್ಯಾನ್ಸ್ ಮಾಡಿಸಿದ್ದೀನಿ. ಆದರೆ ಚಿರಂಜೀವಿ ಅವರ ಜೊತೆ ‘ಡ್ಯಾನ್ಸ್ ಮಾಡಿದ್ರೆ ಅದ ಅದು ನನಗೆ ಖುಷಿ ಅಂತಾ ಪರೋಕ್ಷವಾಗಿ ಸಂಸದ ಸುಧಾಕರ್‌ಗೆ ಟಾಂಗ್ ಕೊಟ್ಟರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು