ಪದಕ ಗೆದ್ದು ಬನ್ನಿ ಎಂದು ಶುಭ ಹಾರೈಸಿದ ಶಾಸಕ ಕಾಶಪ್ಪನವರ್

ಪದಕ ಗೆದ್ದು ಬನ್ನಿ ಎಂದು ಶುಭ ಹಾರೈಸಿದ ಶಾಸಕ ಕಾಶಪ್ಪನವರ್

ಇಳಕಲ್: ಫ್ರಾನ್ಸ್‌ ದೇಶದ
ಫ್ಯಾರೀಸ್‌ನ ಒಲಂಪಿಕ್ಸ್ ಕ್ರೀಡಾಕೂಟಕ್ಕೆ ತೆರಳಿರುವ ಭಾರತದ ಕ್ರೀಡಾಪಟ್ಟುಗಳು ಹೆಚ್ಚಿನ ಪದಕ ಗೆದ್ದು ದೇಶದ ಕೀರ್ತಿ ಪತಾಕೆಯನ್ನು ಹಾರಿಸುವಂತೆ ವೀರಶೈವ ಲಿಂಗಾಯಿತ ಅಭಿವೃದ್ದಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಂಪ್ಪನವರ್ ಹಾರೈಸಿದ್ದಾರೆ.

ಶತಕೋಟಿ ಭಾರತೀಯರು ನೀವು ಪದಕ ಗೆಲ್ಲುವ ಐತಿಹಾಸಿಕ ಕ್ಷಣವನ್ನು ಚಾತಕಪಕ್ಷಿಯಂತೆ ಎದುರು ನೋಡುತ್ತಿದ್ದಾರೆ. ಇತ್ತೀಚೆಗೆ ಐಸಿಸಿ ಟಿ-೨೦ ವಿಶ್ವಕಪ್‌ನಲ್ಲಿ ಭಾರತ ಹೇಗೆ ವಿಶ್ವ ಚಾಂಪಿಯನ್ ಆಗಿ ಹೊಮ್ಮಿತೊ ಅದೇ ರೀತಿ ಪ್ರತಿಯೊಬ್ಬ ಕ್ರೀಡಾಪಟುಗಳು ಪದಕಗಳನ್ನು ಗೆದ್ದು ಬನ್ನಿ ಎಂದು ಆಶಿಸಿದ್ದಾರೆ.

ಭಾರತೀಯರು ನಿಮ್ಮನ್ನು ಪದಕದೊಂದಿಗೆ ಸ್ವಾಗತಿಸಲು ಎದುರು ನೋಡುತ್ತಿದ್ದಾರೆ. ದೇಶದ ಧ್ವಜವನ್ನು ಮನಸಿನಲ್ಲಿಟ್ಟುಕೊಂಡು ಗುರಿ ಸಾಧಿಸಬೇಕು. ಹಿಂದಿನವರ ಪರಿಶ್ರಮ ನಿಮಗೆ ಮಾದರಿಯಾಗಲಿ. ಯಶಸ್ಸು ಯಾರೊಬ್ಬರ ಸ್ವತ್ತಲ್ಲ. ಕಠಿಣ ಪರಿಶ್ರಮಪಟ್ಟರೆ ಅಸಾಧ್ಯವಾದುದನ್ನು ಸಾಧ್ಯವಾಗಿಸಬಹುದೆಂದು ಅವರು ಹೇಳಿದ್ದಾರೆ.

ಜಾವಲಿನ್ ಥ್ರೋ ಪಟು ನೀರಜ್ ಚೋಪ್ರಾ ಈ ಬಾರಿಯೂ ಚಿನ್ನ ಪದಕ ಗೆದ್ದು ಭಾರತಕ್ಕೆ ಕೀರ್ತಿ ತರಲಿ. ಅಲ್ಲದೆ, ಬ್ಯಾಡ್ಮಿಂಟನ್, ಹಾಕಿ, ರೆಸ್ಲಿಂಗ್, ಶೂಟಿಂಗ್, ಬಾಕ್ಸಿಂಗ್ ನಲ್ಲಿ ಪದಕಗಳನ್ನು ನಿರೀಕ್ಷಿಸಲಾಗಿದೆ. ಪ್ಯಾರಿಸ್‌ನಲ್ಲಿ ಹೆಚ್ಚು ಪದಕಗಳನ್ನು ಭಾರತೀಯ ಕ್ರೀಡಾಪಟುಗಳು ಜಯಿಸಲಿ ಅನ್ನೋದೆ ನನ್ನ ಕನಸಾಗಿದೆ ಎಂದು ಕಾಶಪ್ಪನವರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು