ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ ಈ ಕುರಿತು ತೀರ್ಮಾನ ಕೈಗೊಂಡು ರೈತರಿಗೆ ಪರಿಹಾರ ನೀಡಬೇಕು. ಇಲ್ಲವಾದರೆ ರೈತರನ್ನು ಪಕ್ಷಾತೀತವಾಗಿ ಒಗ್ಗೂಡಿಸಿ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಎಚ್ಚರಿಸಿದರು.

ಮುದ್ದೇಬಿಹಾಳದಲ್ಲಿ ಬರ ಘೋಷಣೆಗೆ ಆಗ್ರಹಿಸಿ ತಹಶೀಲ್ದಾರ್ ಕಚೇರಿ ಮುಂದೆ ಸೋಮವಾರದಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಮಗ್ಗಲ ಮುಳ್ಳಾಗಿ ಚುಚ್ಚುವ ಕೆಲಸ ಮಾಡಬೇಕು. ರೈತರು ಸ್ವಯಂಪ್ರೇರಣೆಯಿAದ ಧರಣಿ ಸತ್ಯಾಗ್ರಹಕ್ಕೆ ಬೆಂಬಲ ನೀಡಿ ಸರ್ಕಾರದ ಗಮನ ಸೆಳೆಯಬೇಕು ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬರದ ವಿಚಾರವಾಗಿ ಪಾದಯಾತ್ರೆ ಆರಂಭವಾಗಿದೆ. ಸರ್ಕಾರ ರೈತರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಮುದ್ದೇಬಿಹಾಳ ಸೇರಿದಂತೆ ವಿಜಯಪುರ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಇಲ್ಲವಾದರೆ ರೈತರ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ನಡಹಳ್ಳಿ ಎಚ್ಚರಿಸಿದರು.
ವಿಜಯಪುರ ಜಿಲ್ಲೆಯಲ್ಲಿ ಶೇ.46ರಷ್ಟು ಮಳೆ ಕೊರತೆಯಿದ್ದರೂ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿಲ್ಲ. ಮೊದಲ ಪಟ್ಟಿಯಲ್ಲಿ ಮೂರು ಹಾಗೂ ಎರಡನೇ ಪಟ್ಟಿಯಲ್ಲಿ ಮೂರು ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದೆ. ಆದರೆ ಮುದ್ದೇಬಿಹಾಳ ಕ್ಷೇತ್ರವನ್ನು ಕೈಬಿಡಲಾಗಿದೆ. ಇದು ರೈತರಿಗೆ ಮಾಡಿರುವ ಅನ್ಯಾಯ ಎಂದು ನಡಹಳ್ಳಿ ಆರೋಪಿಸಿದರು.

ನಾಡಗೌಡರ ನಾಟಕ ಇನ್ನೂ ನಿಂತಿಲ್ಲ:
ಶಾಸಕ ಸಿ.ಎಸ್. ನಾಡಗೌಡರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ನಡಹಳ್ಳಿ, ‘30 ವರ್ಷಗಳಿಂದ ನಾಟಕ ಮಾಡುತ್ತಿದ್ದೀರಿ. ಇನ್ನೂ ನಿಮ್ಮ ನಾಟಕ ನಿಂತಿಲ್ಲ. ತಾಲ್ಲೂಕಿನ ಜನ ಮುಗ್ಧರು, ದೇವರಂತಹವರು. ಆದರೆ ಈಗ ಜನ ಎಚ್ಚೆತ್ತುಕೊಂಡಿದ್ದಾರೆ’* ಎಂದು ಟೀಕಿಸಿದರು.
‘ಚಮಚಾಗಿರಿ ರಾಜಕಾರಣವನ್ನು ನಾನು ಎಂದಿಗೂ ಮಾಡಿಲ್ಲ. ರೈತರ ಪರವಾಗಿ ಚುಚ್ಚುವ ರಾಜಕಾರಣ ಮಾಡುತ್ತೇನೆ. ರೈತರ ಸಮಸ್ಯೆಗಳನ್ನು ಮುಂದಿಟ್ಟುಕೊAಡು ಸರ್ಕಾರವನ್ನು ಪ್ರಶ್ನಿಸುತ್ತೇನೆ. ಎಂ.ಬಿ. ಪಾಟೀಲರ ಹೆಸರು ಹೇಳಿಕೊಂಡು ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ನಾಟಕ ಮಾಡುವುದನ್ನು ಬಿಟ್ಟು ಬರ ಘೋಷಣೆ ಮಾಡಿಸಿ’ ಎಂದು ನಾಡಗೌಡರಿಗೆ ತಿರುಗೇಟು ನೀಡಿದರು.
ಕ್ಷೇತ್ರದ ಜನರು ಮತ ಹಾಕಿ 30 ವರ್ಷಗಳಿಂದ ಪ್ರತಿನಿಧಿಯನ್ನು ಆಯ್ಕೆ ಮಾಡಿ ಕಳುಹಿಸಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ನೈತಿಕ ಜವಾಬ್ದಾರಿ ಶಾಸಕರ ಮೇಲಿದೆ. ಹೀಗಾಗಿ ಇನ್ನೊಬ್ಬರ ಮೇಲೆ ಜವಾಬ್ದಾರಿ ಹೊರಿಸುವ ಬದಲು ರೈತರ ಪರವಾಗಿ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಹೇಳಿದರು.

ಆಡಳಿತ ಪಕ್ಷದ ಶಾಸಕರು ಏಕೆ ಮೌನ : ವಿಜಯಪುರ ಜಿಲ್ಲೆಯಲ್ಲಿ ಆಡಳಿತ ಪಕ್ಷದ ಆರು ಶಾಸಕರಿದ್ದು, ಜಿಲ್ಲಾ ಉಸ್ತುವಾರಿ ಸಚಿವರಿಗೆ ಗುರುತರವಾದ ಜವಾಬ್ದಾರಿ ಇದೆ. ಒಂದೇ ಪಕ್ಷದ ಸರ್ಕಾರವಿರುವಾಗ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಜಿಲ್ಲೆಯ ಬರ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು. ಆದರೆ ಇದುವರೆಗೆ ಪರಿಣಾಮಕಾರಿ ಪ್ರಯತ್ನ ನಡೆದಿಲ್ಲ ಎಂದು ನಡಹಳ್ಳಿ ಆರೋಪಿಸಿದರು.ಮುಖ್ಯಮಂತ್ರಿ ಸೂಚನೆ ನೀಡಿದ್ದರೂ ಉಸ್ತುವಾರಿ ಸಚಿವರು ಕ್ಷೇತ್ರಕ್ಕೆ ಭೇಟಿ ನೀಡಿಲ್ಲ. ಶಾಸಕರು ಅಧಿಕಾರಿಗಳನ್ನು ಕರೆದುಕೊಂಡು ಹಳ್ಳಿಗಳಿಗೆ ತೆರಳಿ ಬೆಳೆ ಹಾನಿ ಹಾಗೂ ಮಳೆಯ ಕೊರತೆಯ ವಾಸ್ತವ ಸ್ಥಿತಿಯ ಸರ್ವೆ ಮಾಡಬೇಕಿತ್ತು. ವಾಸ್ತವ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದರೆ ರೈತರು ಹೋರಾಟಕ್ಕೆ ಇಳಿಯುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದರು.

ಹೊಲದಲ್ಲಿ ಬೆಳೆ ಒಣಗಿದೆ, ಫೋಟೊಶೂಟ್ ಬೇಡ’:

ಕೃಷಿ ಅಧಿಕಾರಿಗಳಾದ ಶರಣಗೌಡ, ಸುರೇಶ ಭಾವಿಕಟ್ಟಿ ಹಾಗೂ ಮುತ್ತಣ್ಣ ಹಳ್ಳೂರ ಅವರ ಹೊಲದಲ್ಲಿ ಸಜ್ಜೆ ಬೆಳೆ ಪರಿಶೀಲನೆ ನಡೆಸಿದಾಗ ಬೆಳೆ ಒಣಗಿರುವುದು ಕಂಡುಬAದಿದೆ. ಸಜ್ಜೆ ಬರುವುದಿಲ್ಲ ಎಂದು ರೈತರು ಹೇಳಿದರೂ ಮಳೆ ಬಂದರೆ ಚಿಗುರುತ್ತದೆ ಎಂಬ ರೀತಿಯಲ್ಲಿ ಹೇಳಲಾಗುತ್ತಿದೆ. ರೈತರ ಹೊಲದ ವಾಸ್ತವ ಸ್ಥಿತಿ ಅರಿಯದೆ ಫೋಟೊಶೂಟ್ ಮಾಡಿಸುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ನಡಹಳ್ಳಿ ಟೀಕಿಸಿದರು.

‘ರೈತರಿಗೆ ₹25 ಸಾವಿರ ಪರಿಹಾರ ನೀಡಿ’: ರಾಜ್ಯದಲ್ಲಿ 190 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಿ, 79 ಲಕ್ಷ ರೈತರಿಗೆ ತಲಾ ₹25 ಸಾವಿರ ಪರಿಹಾರ ನೀಡಬೇಕು. ರೈತರ ಸಂಕಷ್ಟಕ್ಕೆ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಆಗ್ರಹಿಸಿದರು.ಇಂಡಿ, ದೇವರಹಿಪ್ಪರಗಿ ಹಾಗೂ ತಾಳಿಕೋಟಿ ಭಾಗಗಳಲ್ಲಿ ರೈತ ಸಂಘಟನೆಗಳ ನೇತೃತ್ವದಲ್ಲಿ ಹೋರಾಟ ನಡೆದಿದೆ. ಅದೇ ರೀತಿಯಲ್ಲಿ ಮುದ್ದೇಬಿಹಾಳ ಕ್ಷೇತ್ರದ ರೈತರೂ ಪಕ್ಷಾತೀತವಾಗಿ ಒಂದಾಗಿ ಹೋರಾಟಕ್ಕೆ ಇಳಿಯಬೇಕು. ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
ಸರ್ವೆ ಮಾಡಲು ಬಿಡಲಿಲ್ಲ; ತಪ್ಪು ಯಾರದ್ದು? ; ಜಿಲ್ಲಾಮಟ್ಟದ ಅಧಿಕಾರಿಗಳನ್ನು ಕರೆದುಕೊಂಡು ಬಂದು ವಾಸ್ತವ ವರದಿ ತಯಾರಿಸಲು ಮುಂದಾದಾಗ ಅವಕಾಶ ನೀಡಲಿಲ್ಲ. ಸರ್ವೆ ಮಾಡಲು ಬಿಡಲಿಲ್ಲ ಎಂಬ ಆರೋಪಗಳಿವೆ.‘ಹಾಗಾದರೆ ತಪ್ಪು ಯಾರದ್ದು? ಏಕೆ ಸರ್ವೆ ಬೇಡ ಎಂದಿರಿ? ಇದರ ಹಿಂದಿನ ಉದ್ದೇಶ ಏನು?’ ಎಂದು ನಡಹಳ್ಳಿ ಪ್ರಶ್ನಿಸಿದರು.
ಧರಣಿಯಲ್ಲಿ ಮುಖಂಡರಾದ ಹೇಮರಡ್ಡಿ ಮೇಟಿ,ಮಲಕೇಂದ್ರಗೌಡ ಪಾಟೀಲ,ಗುರುನಾಥಗೌಡ ಬಿರಾದಾರ,ಸೋಮನಗೌಡ ಬಿರಾದಾರ,ವೆಂಕನಗೌಡ ಪಾಟೀಲ,ಜಗದೀಶ ಪಂಪಣ್ಣವರ,ಬಸವರಾಜ ಚಿತ್ತರಗಿ,ಲಕ್ಷö್ಮಣ ಬಿಜ್ಜೂರ,ಸಂಗಮೇಶ ಹತ್ತಿ,ಶಂಕರಗೌಡ ಶಿವಣಗಿ ಸೇರಿದಂತೆ ನೂರಾರು ರೈತರು ಪಾಲ್ಗೊಂಡಿದ್ದರು.

Latest News

ಬರಪೀಡಿತ ಪಟ್ಟಿಯಿಂದ ಮುದ್ದೇಬಿಹಾಳ ಮತಕ್ಷೇತ್ರ ಔಟ್: ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಶಾಸಕ ನಾಡಗೌಡರ ತೀವ್ರ ವಾಗ್ದಾಳಿ

ಬರಪೀಡಿತ ಪಟ್ಟಿಯಿಂದ ಮುದ್ದೇಬಿಹಾಳ ಮತಕ್ಷೇತ್ರ ಔಟ್: ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಶಾಸಕ ನಾಡಗೌಡರ ತೀವ್ರ ವಾಗ್ದಾಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ

ಎರಡು ಅಂಬ್ಯುಲೆನ್ಸ್ ಜನಸೇವೆಗೆ ಲೋಕಾರ್ಪಣೆ:                     70 ಸಾವಿರ ಹುದ್ದೆಗಳ ಭರ್ತಿಗೆ ಕಾನೂನು ತೊಡಕು-ಶಾಸಕ ನಾಡಗೌಡ

ಎರಡು ಅಂಬ್ಯುಲೆನ್ಸ್ ಜನಸೇವೆಗೆ ಲೋಕಾರ್ಪಣೆ: 70 ಸಾವಿರ ಹುದ್ದೆಗಳ ಭರ್ತಿಗೆ ಕಾನೂನು ತೊಡಕು-ಶಾಸಕ ನಾಡಗೌಡ

ಮುದ್ದೇಬಿಹಾಳ : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಸಿಎಸ್‌ಆರ್ ಅನುದಾನದಲ್ಲಿ ಮುದ್ದೇಬಿಹಾಳ ಹಾಗೂ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ ವಕ್ಭ್ ನಿಯಮಗಳು 2017ರ ನಿಯಮ 25ರ ಅನ್ವಯ ವಿಜಯಪುರ ಜಿಲ್ಲಾ ವಕ್ಭ್ ಅಧಿಕಾರಿಗಳು ಅಂಜುಮನ್ ಕಮೀಟಿಯ ನೂತನ ಆಡಳಿತ ಮಂಡಳಿಯ ಅಧ್ಯಕ್ಷರು,ಉಪಾಧ್ಯಕ್ಷರು,ಕಾರ್ಯದರ್ಶಿಗಳು ಹಾಗೂ ಖಜಾಂಚಿಯ ಆಯ್ಕೆಗೆ ಹೊರಡಿಸಿರುವ ನೋಟಿಸ್ ಇದೀಗ ವಿವಾದಕ್ಕೆ ಕಾರಣವಾಗಿದೆ. ಆಯ್ಕೆಯಾದ ಸದಸ್ಯರಿಗೆ ಅದ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ನಡೆಸುವ ಸಭೆಯನ್ನು ನಡೆಸಲು ನೋಟಿಸ್‌ನ್ನು ನೋಂದಾಯಿತ ಅಂಚೆ ಮೂಲಕ ಒಂದು ವಾರದ ಕಾಲಾವಕಾಶದಲ್ಲಿ ಕಳಿಸಬೇಕು

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಈಡೇರಿಸುವುದಾಗಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ತಿಳಿಸಿದ್ದಾರೆ. ವಿಜಯಪುರ ನಗರದ ಜಿಲ್ಲಾ ಗುತ್ತಿಗೆದಾರರ ಸಂಘದ ನೂತನ ಕಟ್ಟಡ ಭೂಮಿ ಪೂಜೆ ಸಮಾರಂಭಕ್ಕೆ ಆಗಮಿಸಿದ ಸಂದರ್ಭದಲ್ಲಿ ಅವರನ್ನು ಭೇಟಿಯಾದ ವೇಳೆ ಮುದ್ದೇಬಿಹಾಳ ಮತಕ್ಷೇತ್ರದ ಕೊಣ್ಣೂರ ಗ್ರಾಮದ ಸಿಸಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿಗಾಗಿ ಸುಮಾರು ೨ಕೋಟಿ