Modi government collapse in four months: kj jarg in kolara

ನಾಲ್ಕು ತಿಂಗಳಲ್ಲಿ ಮೋದಿ ಸರ್ಕಾರ ಪತನ.. 15 ವರ್ಷ ರಾಹುಲ್ ಗೆ ಅಧಿಕಾರ..! ಸ್ಫೋಟಕ ಬಾಂಬ್ ಸಿಡಿಸಿದ ಸಚಿವ

ನಾಲ್ಕು ತಿಂಗಳಲ್ಲಿ ಮೋದಿ ಸರ್ಕಾರ ಪತನ.. 15 ವರ್ಷ ರಾಹುಲ್ ಗೆ ಅಧಿಕಾರ..! ಸ್ಫೋಟಕ ಬಾಂಬ್ ಸಿಡಿಸಿದ ಸಚಿವ

ಕೋಲಾರ: ಬಿಜೆಪಿ ಪಕ್ಷವು ನೂರು ಸುಳ್ಳುಗಳನ್ನು ಹೇಳಿ ಒಂದು ಸತ್ಯ ಮಾಡಲು ಹೊರಟಿದ್ದಾರೆ ಈಗಾಗಲೇ ಮೋದಿಯವರ ವರ್ಚಸ್ಸು ಮುಗಿದಿದೆ ಇನ್ನೂ ನಾಲ್ಕು ತಿಂಗಳಲ್ಲಿ ಕೇಂದ್ರ ಸರಕಾರವು ಪತನವಾಗಿ ಮೋದಿಯವರು ಅಧಿಕಾರ ಕಳೆದುಕೊಳ್ಳಲಿದ್ದು ದೇಶದಲ್ಲಿ ಮುಂದಿನ 15 ವರ್ಷ ರಾಹುಲ್ ಗಾಂಧಿಗೆ ಒಳ್ಳಯ ಕಾಲ ಬರಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಶುಕ್ರವಾರ ಭೇಟಿ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ದೇಶದ ಜನತೆ ಬಿಜೆಪಿಗೆ ಬುದ್ದಿಕಲಿಸಿದ್ದಾರೆ. ಜನರು ಕಾಂಗ್ರೆಸ್ ಪಕ್ಷದ ಪರವಾಗಿದ್ದಾರೆ ಎಂಬುದನ್ನು ತೋರಿಸಿದ್ದಾರೆ. ಒಳ್ಳೆಯ ಕಾರ್ಯಕ್ರಮಗಳನ್ನು ಕೊಟ್ಟಿದ್ದೇವೆ ಎಂದುರು.

ಬಿಜೆಪಿಯಂತೆ ಕೋಮುಭಾವನೆ ಹಾಗೂ ಜಾತಿ ಧರ್ಮಗಳ ಗಲಾಟೆಯ ಮೂಲಕ ರಾಜಕಾರಣ ಮಾಡಲ್ಲ ಜಾಸ್ತಿ ದಿನವು ಅಂತಹ ರಾಜಕಾರಣ ಉಳಿಯಲ್ಲ ಜನರ ಆಶೀರ್ವಾದವು ಕಾಂಗ್ರೆಸ್ ಪಕ್ಷಕ್ಕೆ ಇದ್ದು ಕಾರ್ಯಕರ್ತರಿಗೂ ಒಳ್ಳೆಯ ಅವಕಾಶ ಸಿಗಲಿದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷವು ಸ್ವಾತಂತ್ರ್ಯ ಪೂರ್ವದಿಂದಲೂ ಜಾತಿ ಧರ್ಮ, ಭಾಷೆಯ ಭೇಧವಿಲ್ಲದ ಪಕ್ಷವಾಗಿದೆ ಎಲ್ಲಾ ವರ್ಗಗಳ ವಿಶ್ವಾಸದಿಂದ ಬಡವರ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ರೂಪಿಸಲಾಗಿದೆ ಸುಮಾರು 70 ವರ್ಷಗಳ ಅಧಿಕಾರದ ಅವಧಿಯಲ್ಲಿ ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಕಾಣಿಕೆ ಅಪಾರವಾಗಿದೆ ಬಿಜೆಪಿಯಂತೆ ನೇರವಾಗಿ ಅಧಿಕಾರಕ್ಕೆ ಬಂದಿಲ್ಲ ಮುಂದೆ ಸಹ ಕಾಂಗ್ರೆಸ್ ಪಕ್ಷದೊಂದಿಗೆ ಜನರ ವಿಶ್ವಾಸ ಇದ್ದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಸರ್ಕಾರ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದಿದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳವಾಗಿದ್ದು ಕಾರ್ಯಕರ್ತರಿಂದ ನಾವು ಎಲ್ಲರೂ ನಾಯಕರಾಗಿದ್ದೇವೆ ಇಲ್ಲಿಗೆ ಬಂದಿದ್ದೇನೆ. ಪಕ್ಷಕ್ಕಾಗಿ ದುಡಿದವರಿಗೆ ಹಂತಹಂತವಾಗಿ ಅವಕಾಶಗಳು ಸಿಗಲಿದೆ ಅಧಿಕಾರಕ್ಕಾಗಿ ಪಕ್ಷ ಅಲ್ಲ ಅನ್ನೋದು ತಿಳಿಯಬೇಕು ಜನರ ಹಿತಕ್ಕಾಗಿ ಪಕ್ಷವಾಗಬೇಕು ತಾಳ್ಮೆಯಿಂದ ಇದ್ದರೆ ಖಂಡಿತವಾಗಿಯೂ ಅವಕಾಶಗಳು ಸಿಗಲಿದೆ ಎಂದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಮಾತನಾಡಿ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತರಾಗಿದ್ದರೆ ಒಂದಲ್ಲ ಒಂದು ದಿನ ಅವಕಾಶಗಳು ಸಿಗಲಿದೆ ಎಂಬುದಕ್ಕೆ ಸಚಿವ ಕೆ.ಜೆ ಚಾರ್ಜ್ ಅವರು ಉದಾಹರಣೆ ಯುವ ಕಾಂಗ್ರೆಸ್ ಬ್ಲಾಕ್ ಮಟ್ಟದಿಂದ ರಾಷ್ಟ್ರೀಯ ಮಟ್ಟದಲ್ಲಿ ಕೆಲಸ ಮಾಡಿದ್ದು ಅವರಿಗೆ ಅವಕಾಶಗಳು ಬಂದಿವೆ. ದೇಶದಲ್ಲಿ ಇಂದಿರಾಗಾಂಧಿ ಹಾಗೂ ರಾಜೀವ್ ಗಾಂಧಿ ಅವರ ಜನಪರ ಕಾರ್ಯಕ್ರಮಗಳನ್ನು ನೋಡಿ ಸಾಕಷ್ಟು ನಾಯಕರು ಕಾಂಗ್ರೆಸ್ ಪಕ್ಷ ಸೇರಲು ಪ್ತಮುಖ ಕಾರಣವಾಗಿ ಅಧಿಕಾರವಿರಲಿ ಇಲ್ಲದಿರಲಿ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ ಎಂದರು.

ಸಭೆಯಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, ಕೋಲಾರ ಜಿಲ್ಲೆಯ ವಿದ್ಯುತ್‌ ಸಮಸ್ಯೆಗಳ ಪರಿಹಾರಕ್ಕೆ ಗಮನ ಹರಿಸಲು ಸಚಿವರನ್ನು ಕರೆಸಲಾಗಿದೆ ಜಿಲ್ಲೆಯಲ್ಲಿ ಹೊಸದಾಗಿ ಪವರ್ ಕೇಂದ್ರಗಳ ಸ್ಥಾಪನೆಗೆ ಒತ್ತು ನೀಡಿ ರೈತರ ಕಷ್ಟಗಳಿಗೆ ಪರಿಹಾರ ಕಂಡುಕೊಳ್ಳಲಾಗುತ್ತದೆ ಎಂದರು.

ಮಾಲೂರು ಶಾಸಕ ಕೆ.ವೈ ನಂಜೇಗೌಡ ಮಾತನಾಡಿ ಕಾಂಗ್ರೆಸ್ ಪಕ್ಷದಲ್ಲಿ ವೇಗವಾಗಿ ನಾಯಕ ಅಂತ ಗುರುತಿಸಿಕೊಂಡು ಅವಕಾಶಗಳಿಗಾಗಿ ಬರತ್ತಾರೆ ಪಕ್ಷದ ನಾಯಕನು ಎನಿಸಿಕೊಂಡವರಿಗೆ ಪಕ್ಷದ ಬಗ್ಗೆ ನಿಷ್ಠೆ ತಾಳ್ಮೆ ಇರಬೇಕು ಕಾಂಗ್ರೆಸ್ ಸರಕಾರವಿದೆ ಒಳ್ಳೆಯ ದಿನಗಳು ಬಂದಿವೆ ಅವಕಾಶಗಳು ಎಲ್ಲರಿಗೂ ಸಿಗುತ್ತವೆ ಎಂದರು.

ಇದನ್ನೂ ಓದಿ: Actor Darshan: ಕರ್ನಾಟಕದಲ್ಲಿ ‘ಕರಿಯ’ನ ಆರ್ಭಟ ಆರಂಭ.. ದರ್ಶನ್ ಅಭಿಮಾನಿಗಳಿಗೆ ಹಬ್ಬದೂಟ..! (ವಿಡಿಯೋ ನೋಡಿ)

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಕೆ.ವಿ ಗೌತಮ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸಾದ್ ಬಾಬು, ಸೀಸಂದ್ರ ಗೋಪಾಲಗೌಡ, ಪದವೀಧರ ಘಟಕದ ಜಿಲ್ಲಾ ಅಧ್ಯಕ್ಷ ಪಿ.ಎಸ್ ಸುಧೀರ್, ಮುಖಂಡರಾದ ಜಯದೇವ್, ರವಿರಾಮಸ್ವಾಮಿ, ಒಬಿಸಿ ಮಂಜುನಾಥ್, ರತ್ನಮ್ಮ, ಮೈಲಾಂಡಹಳ್ಳಿ ಮುರಳಿ, ಅಶ್ವಥ್ ರೆಡ್ಡಿ, ರಾಮಯ್ಯ, ಮುಂತಾದವರು ಇದ್ದರು.

Latest News

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

BREAKING : ಕ್ರಿಸ್ ಮಸ್ ದಿನವೇ ರಾಜ್ಯದಲ್ಲಿ ಘೋರ ದುರಂತ : ಭೀಕರ ಅಪಘಾತದಲ್ಲಿ 17 ಕ್ಕೂ ಹೆಚ್ಚು ಮಂದಿ ದುರ್ಮರಣ

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ:                  ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ: ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ತಾಳಿಕೋಟೆ : ಮಕ್ಕಳಲ್ಲಿ ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಅರಿವು ಮೂಡಿಸುವ ಕಾರ್ಯ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು. ತಾಲ್ಲೂಕಿನ ಮೈಲೇಶ್ವರದ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಆರಂಭಗೊAಡ ಎರಡು ದಿನಗಳ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಬ್ರಿಲಿಯಂಟ್ ಶಾಲೆ ನಮ್ಮ ಶೈಕ್ಷಣಿಕ ವಲಯದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅತ್ಯುತ್ತಮ ಸಾಧನೆ ತೋರುತ್ತಿದೆ.