ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ತು ಚುನಾವಣೆಯಲ್ಲಿ ಸತತ ಎರಡನೇ ಬಾರಿಗೆ ಹಿರಿಯ ಕಾರ್ಮಿಕ ನಿರೀಕ್ಷಕ ಮೋಹನ ಕುಮಾರ್ ಎಂ.ಆರ್ ಜಯಗಳಿಸಿದ್ದಾರೆ.
ಇತ್ತೀಚೆಗೆ ನಡೆದ ಚುನಾವಣೆಯಲ್ಲಿ 47 ಮತಗಳ ಅಂತರದಿಂದ ಕಾರ್ಮಿಕ ಇಲಾಖೆ ವತಿಯಿಂದ ಸ್ಪರ್ಧಿಸಿ ಗೆಲುವಿನ ನಗೆ ಬೀರಿದ್ದಾರೆ.
ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿಗಳು, ಸಹೋದ್ಯೋಗಿಗಳು ಇದ್ದರು.