ನವದೆಹಲಿ : ಕರ್ನಾಟಕದಲ್ಲಿ 2024-25ರ ಮುಂಗಾರು ಹಂಗಾಮಿಗೆ ಬೆಂಬಲ ಬೆಲೆ ಯೋಜನೆಯಡಿ (MSP) ಉದ್ದು ಮತ್ತು ಸೋಯಾಬೀನ್ ಖರೀದಿಗೆ ಭಾರತ ಸರ್ಕಾರ ಅನುಮತಿ ನೀಡಿದೆ.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada
ಮುಕ್ತ ಮಾರುಕಟ್ಟೆಯಲ್ಲಿ ಸೋಯಾಬೀನ್ ಮತ್ತು ಉದ್ದು ಬೆಳೆಗಳಿಗೆ ಬೆಲೆ ಕಡಿಮೆ ಇರುವುದರಿಂದ MSP ಅಡಿಯಲ್ಲಿ ಸರ್ಕಾರ ಖರೀದಿಗೆ ಮುಂದಾಗಿದೆ. ಉದ್ದು ಮತ್ತು ಸೋಯಾಬೀನ್ ಗಳಿಗೆ ಪ್ರತೀ ಕ್ವಿಂಟಾಲ್ ಗೆ ಕ್ರಮವಾಗಿ ₹7,400 ಮತ್ತು ₹4,892 ಮೌಲ್ಯದಲ್ಲಿ ಖರೀದಿಸಿ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಹೊಂದಿದೆ.
ರಾಜ್ಯದ ರೈತರು ಬೆಳೆದ 19,760 MT ಉದ್ದಿನ ಬೇಳೆ ಹಾಗೂ 1,03,315 MT ಸೋಯಾಬೀನ್ ಖರೀದಿ ಮಾಡಲು ರಾಜ್ಯ ಸರ್ಕಾರಕ್ಕೆ ಕೇಂದ್ರವು ಸೂಚನೆ ನೀಡಿದೆ. ಈ ಮೂಲಕ ರಾಜ್ಯದ ರೈತರ ಈ ಬೆಳೆಗಳನ್ನು ಬೆಲೆ ಬೆಂಬಲ ಯೋಜನೆ (PSS) ಅಡಿ ಖರೀದಿಗೆ ಅನುಮತಿ ನೀಡಿದೆ.
ಇದನ್ನೂ ಓದಿ: Green gram: ಇಂದಿನಿಂದ ಹೆಸರು ಕಾಳು ಖರೀದಿ ಆರಂಭ
ರಾಜ್ಯ ಸರ್ಕಾರವು ತಕ್ಷಣವೇ ರಾಜ್ಯಾದ್ಯಂತ ಖರೀದಿ ಕೇಂದ್ರ ಆರಂಭಿಸಬೇಕೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನವಿ ಮಾಡಿದ್ದಾರೆ.