ಬೆಂಗಳೂರು: ಬೃಹತ್ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಕಡತಕ್ಕೆ (Muda case) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿದೆ.
Join Our telegram: https://t.me/dcgkannada
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (Muda case) ಅಡಿಯಲ್ಲಿ ಅವರ ಪತ್ನಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ನಡುವೆ ಹೈಕಮಾಂಡ್ ಸಿಎಂ ಸಿದ್ದರಾಮಯ್ಯಗೆ ಅಭಯ ನೀಡಿದ್ದು, ಎಐಸಿಸಿ ನಾಯಕರಾದ ರಣದೀಪ್ ಸುರ್ಜೆವಾಲಾ ಹಾಗೂ ಕೆ.ಸಿ. ವೇಣುಗೋಪಾಲ್ ಕರೆ ಮಾಡಿ ಸಿಎಂ ಸಿದ್ದರಾಮಯ್ಯಗೆ ಧೈರ್ಯ ತುಂಬಿದ್ದಾರೆ.
ನಿಮ್ಮ ಜೊತೆಗೆ ನಾವು ಇದ್ದೇವೆ ನೀವು ಧೈರ್ಯವಾಗಿರಿ, ಏನೇ ಆದರೂ ಕಾನೂನು ಹೋರಾಟ ಮಾಡೋಣ ಎಂದಿದ್ದಾರೆ. ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಲೂ ಸೂಚಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: Cubbon park: ವೃದ್ಧನಿಂದ ಹೀನ ಕೃತ್ಯ.. ಕಬ್ಬನ್ ಪಾರ್ಕ್ ನಲ್ಲಿ ಮಹಿಳೆಯರ ಎದುರೇ ಹಸ್ತಮೈಥುನ.. (ವೈರಲ್ ವಿಡಿಯೋ ನೋಡಿ)
ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಆಗಮಿಸಿದ್ದು, ಪ್ರಸ್ತುತ ರಾಜ್ಯ ರಾಜಕೀಯ ಬೆಳವಣಿಗೆ ಹಾಗೂ ಮುಂದಿನ ಹೋರಾಟಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.
ದೂರದಾರ ಟಿ.ಜೆ. ಅಬ್ರಾಹಂಗೆ ರಾಜ್ಯಪಾಲರ ಕಚೇರಿಗೆ ಆಗಮಿಸಿ ದಾಖಲೆ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಟಿ.ಜೆ. ಅಬ್ರಾಹಂ ಮತ್ತಷ್ಟು ದಾಖಲೆಗಳನ್ನು ತೆಗೆದುಕೊಂಡು ರಾಜ್ಯಪಾಲರ ಕಚೇರಿ ತಲುಪಲಿದ್ದಾರೆ ಎಂದು ತಿಳಿದು ಬಂದಿದೆ.
ದೂರುದಾರರ ಪರ ವಕೀಲೆ ಲಕ್ಷ್ಮೀ ಅಯ್ಯಂಗಾರ ಹೇಳಿದ್ದೇನು?
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ದೂರದಾರ ಮೈಸೂರು ಕೃಷ್ಣಮಯಿ ಅವರ ಪರ ವಕೀಲೆ ಲಕ್ಷ್ಮೀ ಅಯ್ಯಂಗಾರ ಅವರು ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಹಿನ್ನೆಲೆ ಪ್ರತಿಕ್ರಿಯೆ ನೀಡಿದ್ದಾರೆ.
“ರಾಜ್ಯಪಾಲರು ಸಿಎಂ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದಾರೆ. ನಮ್ಮ ಕೋರಿಕೆ ಇರುವುದು ಸಿಬಿಐ ತನಿಖೆಗೆ ಅಥವಾ ಸ್ವತಂತ್ರ ತನಿಖೆಗೆ ವಹಿಸಿ ಕ್ರಮ ಕೈಗೊಳ್ಳಬೇಕು ಎನ್ನುವುದು. ಈ ಕುರಿತು ಕೋರ್ಟ್ ಏನು ಆದೇಶ ನೀಡುತ್ತದೆ ಎಂಬುದು ಮುಖ್ಯ” ಎಂದಿದ್ದಾರೆ.
“ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈ ಪ್ರಕರಣ ಖಾಸಗಿ ದೂರಿನ ವಿಚಾರಣೆಯನ್ನು ಆ.20ಕ್ಕೆ ಮುಂದೂಡಿತ್ತು. ಈಗ ರಾಜ್ಯಪಾಲರೇ ತನಿಖೆಗೆ ಅನುಮತಿ ನೀಡಿರುವುದರಿಂದ ವಿಚಾರ ಅಗತ್ಯವಿಲ್ಲ. ಕೋರ್ಟ್ ಆದೇಶವನ್ನು ಮಾತ್ರ ಎದುರು ನೀಡುತ್ತಿದ್ದೆವೆ” ಎಂದು ಖಾಸಗಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
ಏತನ್ಮಧ್ಯೆ, ಸಿಎಂ ಸಿದ್ದರಾಮಯ್ಯ ಅವರ ತಂಡವೂ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ, ಹಿರಿಯ ಸಚಿವರು, ಸಿದ್ದರಾಮಯ್ಯ ಆಪ್ತರು ಚರ್ಚೆ ನಡೆಸುತ್ತಿದ್ದಾರೆ.