Muda case DCM DK Shivakumar press meet in Bengaluru

Muda case : ಸಿಎಂ ರಾಜೀನಾಮೆ.. ಡಿಕೆಶಿ ಮಹತ್ವದ ಹೇಳಿಕೆ..

Muda case : ಸಿಎಂ ರಾಜೀನಾಮೆ.. ಡಿಕೆಶಿ ಮಹತ್ವದ ಹೇಳಿಕೆ..

ಬೆಂಗಳೂರು : ಮುಡಾ ಪ್ರಕರಣ (Muda case)ದಲ್ಲಿ ಸಿಎಂ ಸಿದ್ದರಾಮಯ್ಯ‌ (Siddaramaiah) ರಾಜೀನಾಮೆಗೆ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸುದ್ದಿಗೋಷ್ಠಿ ನಡೆಸಿ ಮಹತ್ವದ ಹೇಳಿಕೆ ನೀಡಿ, ಆದೇಶವೊಂದನ್ನು ಹೊರಡಿಸಿದ್ದಾರೆ.

Join Our Telegram: https://t.me/dcgkannada

ಮುಡಾ ಪ್ರಕರಣಕ್ಕೆ (Muda case) ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ಇಡೀ ರಾಜ್ಯದ್ಯಾಂತ ಕಾಂಗ್ರೆಸ್‌ ನ ಹೋರಾಟದ ಕಿಚ್ಚು ಭುಗಿಲೆದ್ದಿದೆ.

ಇನ್ನು, ರಾಜ್ಯಪಾಲರ ಈ ನಡೆಯನ್ನು ವಿರೋಧಿಸಿ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಆ.19ರಂದು ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳುವಂತೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾ‌ರ್ ಕರೆ ನೀಡಿದ್ದಾರೆ.

ರಾಜ್ಯಪಾಲರು ಬಿಜೆಪಿ ಪರ ಧೋರಣೆ ಅನುಸರಿಸಿದ್ದು, ಸಿಎಂ ಸಿದ್ದರಾಮಯ್ಯ‌ ರಾಜೀನಾಮೆ ನೀಡುವ ಅಗತ್ಯ ಇಲ್ಲ. ಕಾಂಗ್ರೆಸ್ ಹೈಕಮಾಂಡ್ ಮತ್ತು ಎಲ್ಲಾ ಶಾಸಕರೂ ಸಿಎಂಗೆ ಬೆಂಬಲವಾಗಿ ನಿಂತು ಹೋರಾಟ ಮಾಡುತ್ತೆವೆ. ಈ ನಿಟ್ಟಿನಲ್ಲಿ ಆ.19ರಂದು ಪ್ರತಿಭಟನೆಗೆ ಕರೆ ಕೆಪಿಸಿಸಿಯಿಂದ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Suicide case: ಮೈಮೇಲೆ ಡೀಸೆಲ್‌ ಸುರಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣು

ಪ್ರಾಸಿಕ್ಯೂಷನ್ ವಿರೋಧಿಸಿ ಈಗಾಗಲೇ ಸಿಎಂ ಬೆನ್ನಿಗೆ ಇರುವುದಾಗಿ ಸಚಿವ ಸಂಪುಟ, ಶಾಸಕರು ಮಾತ್ರವಲ್ಲ ಹೈಕಮಾಂಡ್ ನಾಯಕರು ಅಭಯ ನೀಡಿದ್ದಾರೆ. ಅಲ್ಲದೇ ಕಾನೂನು ಪ್ರಕಾರ ಹೋರಾಡಲು ರಾಜ್ಯ ಕಾಂಗ್ರೆಸ್‌ ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

CM Siddaramaiah ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ.. ದೂರುದಾರರ ಪರ ವಕೀಲೆ ಲಕ್ಷ್ಮೀ ಅಯ್ಯಂಗಾರ ಹೇಳಿದ್ದೇನು?

ಬೆಂಗಳೂರು: ಸಿಎಂ ಸಿದ್ದರಾಮಯ್ಯ‌ ವಿರುದ್ಧದ ದೂರದಾರ ಮೈಸೂರು ಕೃಷ್ಣಮಯಿ ಅವರ ಪರ ವಕೀಲೆ ಲಕ್ಷ್ಮೀ ಅಯ್ಯಂಗಾರ ಅವರು ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಹಿನ್ನೆಲೆ ಪ್ರತಿಕ್ರಿಯೆ ನೀಡಿದ್ದಾರೆ.

“ರಾಜ್ಯಪಾಲರು ಸಿಎಂ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದಾರೆ. ನಮ್ಮ ಕೋರಿಕೆ ಇರುವುದು ಸಿಬಿಐ ತನಿಖೆಗೆ ಅಥವಾ ಸ್ವತಂತ್ರ ತನಿಖೆಗೆ ವಹಿಸಿ ಕ್ರಮ ಕೈಗೊಳ್ಳಬೇಕು ಎನ್ನುವುದು. ಈ ಕುರಿತು ಕೋರ್ಟ್ ಏನು ಆದೇಶ ನೀಡುತ್ತದೆ ಎಂಬುದು ಮುಖ್ಯ” ಎಂದಿದ್ದಾರೆ.

“ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈ ಪ್ರಕರಣ ಖಾಸಗಿ ದೂರಿನ ವಿಚಾರಣೆಯನ್ನು ಆ.20ಕ್ಕೆ ಮುಂದೂಡಿತ್ತು. ಈಗ ರಾಜ್ಯಪಾಲರೇ ತನಿಖೆಗೆ ಅನುಮತಿ ನೀಡಿರುವುದರಿಂದ ವಿಚಾರ ಅಗತ್ಯವಿಲ್ಲ. ಕೋರ್ಟ್ ಆದೇಶವನ್ನು ಮಾತ್ರ ಎದುರು ನೀಡುತ್ತಿದ್ದೆವೆ” ಎಂದು ಖಾಸಗಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.

ಏತನ್ಮಧ್ಯೆ, ಸಿಎಂ ಸಿದ್ದರಾಮಯ್ಯ‌ ಅವರ ತಂಡವೂ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ, ಹಿರಿಯ ಸಚಿವರು, ಸಿದ್ದರಾಮಯ್ಯ‌ ಆಪ್ತರು ಚರ್ಚೆ ನಡೆಸುತ್ತಿದ್ದಾರೆ.

Latest News

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಕೋಲ್ಕತ್ತ: ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಚೆನ್ನೈ ವಿರುದ್ಧ ಸೋಲುವ ಮೂಲಕ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ: ಕೆಎಸ್ಆರ್.ಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ಆರೇಶಂಕರ ಕ್ರಾಸ್

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಮುದ್ದೇಬಿಹಾಳ : ಪಟ್ಟಣದ ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಮುದ್ದೇಬಿಹಾಳ, ಕೋಳೂರು, ಅಡವಿ

ನಿರ್ಲಕ್ಷ್ಯದ ವಿರುದ್ಧ ಆಕ್ರೋಶ : ಜಾತಿ ಗಣತಿಗೆ ಅಧಿಕಾರಿಗಳ ಅನಾದರ-ಆರೋಪ

ನಿರ್ಲಕ್ಷ್ಯದ ವಿರುದ್ಧ ಆಕ್ರೋಶ : ಜಾತಿ ಗಣತಿಗೆ ಅಧಿಕಾರಿಗಳ ಅನಾದರ-ಆರೋಪ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಒಳಮೀಸಲಾತಿ ಕಲ್ಪಿಸಲು ಆರಂಭಿಸಿರುವ ಜಾತಿ ಗಣತಿಗೆ ಮುದ್ದೇಬಿಹಾಳ ತಾಲ್ಲೂಕಿನಲ್ಲಿ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಲಿಂಗಸಗೂರು: ತಾಲ್ಲೂಕಿನ ಚಿತ್ತಾಪೂರ ಗ್ರಾಮದಲ್ಲಿ ಬೋರವೇಲ್ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಗ್ರಾಮದ ಜನರಿಗೆ ಯೋಗ್ಯವಾದ ಕೃಷ್ಣ ನದಿಯ ನೀರನ್ನು ಒದಗಿಸಬೇಕು ಎಂದು ಸಹಾಯಕ ಆಯುಕ್ತರಿಗೆಅಂಬೇಡ್ಕರ ಸೇನೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು. ಕಳೆದ ವರ್ಷ ಬೇಸಿಗೆಯಲ್ಲಿ ಚಿತ್ತಾಪೂರ ಗ್ರಾಮದ ಸಂಪೂರ್ಣ ಜನರಿಗೆ ವಾಂತಿ ಬೇಧಿಯಿಂದ ಸಾರ್ವಜನಿಕರು ತತ್ತರಿಸಿ ಹೋಗಿದ್ದರು. ಇಡೀ ರಾಜ್ಯಾದ್ಯಂತ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿತ್ತು. ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳು ಬೇಟಿ ನೀಡಿ, ಹತೋಟಿಗೆ ತರುವ

ಅಕ್ರಮ ಗಣಿಗಾರಿಕೆ ಗಾಲಿ ಜನಾರ್ಧನ್ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ

ಅಕ್ರಮ ಗಣಿಗಾರಿಕೆ ಗಾಲಿ ಜನಾರ್ಧನ್ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ

ದೆಹಲಿ: ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಇದೀಗ ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಅಪರಾಧಿ ಎಂದು ತೀರ್ಪು ಪ್ರಕಟಿಸಿದೆ. ಇದರ ಬೆನ್ನಲ್ಲೇ ಕೋರ್ಟ್ ಶಿಕ್ಷೆ ಪ್ರಕಟಿಸಿದ್ದು ಶಾಸಕ ಜನಾರ್ಧನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಓಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ