ಬೆಂಗಳೂರು : ಮುಡಾ ಪ್ರಕರಣ (Muda case)ದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ರಾಜೀನಾಮೆಗೆ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸುದ್ದಿಗೋಷ್ಠಿ ನಡೆಸಿ ಮಹತ್ವದ ಹೇಳಿಕೆ ನೀಡಿ, ಆದೇಶವೊಂದನ್ನು ಹೊರಡಿಸಿದ್ದಾರೆ.
Join Our Telegram: https://t.me/dcgkannada
ಮುಡಾ ಪ್ರಕರಣಕ್ಕೆ (Muda case) ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ಇಡೀ ರಾಜ್ಯದ್ಯಾಂತ ಕಾಂಗ್ರೆಸ್ ನ ಹೋರಾಟದ ಕಿಚ್ಚು ಭುಗಿಲೆದ್ದಿದೆ.
ಇನ್ನು, ರಾಜ್ಯಪಾಲರ ಈ ನಡೆಯನ್ನು ವಿರೋಧಿಸಿ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಆ.19ರಂದು ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವಂತೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ.
ರಾಜ್ಯಪಾಲರು ಬಿಜೆಪಿ ಪರ ಧೋರಣೆ ಅನುಸರಿಸಿದ್ದು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಅಗತ್ಯ ಇಲ್ಲ. ಕಾಂಗ್ರೆಸ್ ಹೈಕಮಾಂಡ್ ಮತ್ತು ಎಲ್ಲಾ ಶಾಸಕರೂ ಸಿಎಂಗೆ ಬೆಂಬಲವಾಗಿ ನಿಂತು ಹೋರಾಟ ಮಾಡುತ್ತೆವೆ. ಈ ನಿಟ್ಟಿನಲ್ಲಿ ಆ.19ರಂದು ಪ್ರತಿಭಟನೆಗೆ ಕರೆ ಕೆಪಿಸಿಸಿಯಿಂದ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: Suicide case: ಮೈಮೇಲೆ ಡೀಸೆಲ್ ಸುರಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣು
ಪ್ರಾಸಿಕ್ಯೂಷನ್ ವಿರೋಧಿಸಿ ಈಗಾಗಲೇ ಸಿಎಂ ಬೆನ್ನಿಗೆ ಇರುವುದಾಗಿ ಸಚಿವ ಸಂಪುಟ, ಶಾಸಕರು ಮಾತ್ರವಲ್ಲ ಹೈಕಮಾಂಡ್ ನಾಯಕರು ಅಭಯ ನೀಡಿದ್ದಾರೆ. ಅಲ್ಲದೇ ಕಾನೂನು ಪ್ರಕಾರ ಹೋರಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದ್ದಾರೆ.
CM Siddaramaiah ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ.. ದೂರುದಾರರ ಪರ ವಕೀಲೆ ಲಕ್ಷ್ಮೀ ಅಯ್ಯಂಗಾರ ಹೇಳಿದ್ದೇನು?
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ದೂರದಾರ ಮೈಸೂರು ಕೃಷ್ಣಮಯಿ ಅವರ ಪರ ವಕೀಲೆ ಲಕ್ಷ್ಮೀ ಅಯ್ಯಂಗಾರ ಅವರು ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಹಿನ್ನೆಲೆ ಪ್ರತಿಕ್ರಿಯೆ ನೀಡಿದ್ದಾರೆ.
“ರಾಜ್ಯಪಾಲರು ಸಿಎಂ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದಾರೆ. ನಮ್ಮ ಕೋರಿಕೆ ಇರುವುದು ಸಿಬಿಐ ತನಿಖೆಗೆ ಅಥವಾ ಸ್ವತಂತ್ರ ತನಿಖೆಗೆ ವಹಿಸಿ ಕ್ರಮ ಕೈಗೊಳ್ಳಬೇಕು ಎನ್ನುವುದು. ಈ ಕುರಿತು ಕೋರ್ಟ್ ಏನು ಆದೇಶ ನೀಡುತ್ತದೆ ಎಂಬುದು ಮುಖ್ಯ” ಎಂದಿದ್ದಾರೆ.
“ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈ ಪ್ರಕರಣ ಖಾಸಗಿ ದೂರಿನ ವಿಚಾರಣೆಯನ್ನು ಆ.20ಕ್ಕೆ ಮುಂದೂಡಿತ್ತು. ಈಗ ರಾಜ್ಯಪಾಲರೇ ತನಿಖೆಗೆ ಅನುಮತಿ ನೀಡಿರುವುದರಿಂದ ವಿಚಾರ ಅಗತ್ಯವಿಲ್ಲ. ಕೋರ್ಟ್ ಆದೇಶವನ್ನು ಮಾತ್ರ ಎದುರು ನೀಡುತ್ತಿದ್ದೆವೆ” ಎಂದು ಖಾಸಗಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
ಏತನ್ಮಧ್ಯೆ, ಸಿಎಂ ಸಿದ್ದರಾಮಯ್ಯ ಅವರ ತಂಡವೂ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ, ಹಿರಿಯ ಸಚಿವರು, ಸಿದ್ದರಾಮಯ್ಯ ಆಪ್ತರು ಚರ್ಚೆ ನಡೆಸುತ್ತಿದ್ದಾರೆ.