Muda case: Governor did not mean to put CM in jail: R. Ashoka Clarity

Muda case: ಸಿಎಂ‌ ಅವರನ್ನು ಜೈಲಿಗೆ ಹಾಕಿ ಎಂದಿಲ್ಲ: ಆರ್. ಅಶೋಕ ಕ್ಲಾರಿಟಿ

Muda case: ಸಿಎಂ‌ ಅವರನ್ನು ಜೈಲಿಗೆ ಹಾಕಿ ಎಂದಿಲ್ಲ: ಆರ್. ಅಶೋಕ ಕ್ಲಾರಿಟಿ

ಮಂಡ್ಯ: ಮುಡಾ ಹಗರಣ(Muda case)ದಲ್ಲಿ ಕೇವಲ 14 ನಿವೇಶನ ಅಲ್ಲ, ಸಾವಿರಾರು ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರು ಲೂಟಿ ಹೊಡೆದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashok) ಆರೋಪಿಸಿದರು‌.

Join Our Telegram: https://t.me/dcgkannada

ಮಂಡ್ಯದಲ್ಲಿ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಇದರ ಹಿಂದೆ ಇರುವ ದೊಡ್ಡ ತಿಮಿಂಗಿಲಗಳು ಹೊರಬರಲು ಸಿಬಿಐ(CBI) ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.

ಹಗರಣದಲ್ಲಿ ಸಿಲುಕಿದಾಗ ಮಾತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಾತಿ ನೆನಪಾಗುತ್ತದೆ. ಇವರು 14 ಸೈಟು ನುಂಗಿದ ಕೂಡಲೇ ಹಿಂಬಾಲಕರು ನೂರಾರು ಸೈಟುಗಳನ್ನು (Muda case) ನುಂಗಿದ್ದಾರೆ. ಇವರದ್ದೇ ಹಿಂಬಾಲಕರಾದ ಮರಿಗೌಡರೇ ಪತ್ರ ಬರೆದು ಅಕ್ರಮವಾಗಿದೆ ಎಂದು ಹೇಳಿದ್ದರು. ಅದನ್ನು ಸಾಮಾಜಿಕ ಕಾರ್ಯಕರ್ತರೊಬ್ಬರು ಆರ್‌ಟಿಐ ಮೂಲಕ ಹೊರತೆಗೆದಾಗ ಎಲ್ಲವೂ ಬಯಲಾಗಿದೆ. ಆದರೆ, ಸಿಎಂ ಸಿದ್ದರಾಮಯ್ಯ ಒಂದೂ ಸೈಟು ಅಕ್ರಮವಾಗಿ ಪಡೆದಿಲ್ಲ ಎಂದು ಹೇಳಿದ್ದಾರೆ ಎಂದರು.

ಈಗ ವೈಟ್‌ನರ್‌ ಅಕ್ರಮ ಬಯಲಾಗಿದೆ. ದಾಖಲೆಗಳಲ್ಲಿ ವೈಟ್‌ನರ್‌ ಹಾಕಿ ಕೆಲವು ಅಂಶಗಳನ್ನು ಮರೆಮಾಚಲಾಗಿದೆ. ಏನಾದರೂ ತಪ್ಪಾದಾಗ ಅದರ ಮೇಲೆ ಪೆನ್‌ನಲ್ಲಿ ಗೆರೆ ಎಳೆದರೆ ಸಾಕಿತ್ತು. ಆದರೆ ವಿಷಯವನ್ನು ಮುಚ್ಚಿಹಾಕಲು ವೈಟ್‌ನರ್‌ ಬಳಸಿದ್ದಾರೆ. ವಿಜಯನಗರದಲ್ಲೇ ನಿವೇಶನ ಬೇಕು ಎಂದು ಸಿಎಂ ಪತ್ನಿ ಬರೆದಿದ್ದಾರೆ. ಅದಕ್ಕೆ ವೈಟ್‌ನರ್‌ ಹಚ್ಚಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ದಾಖಲೆ ತಿದ್ದಿದ್ದಾರೆ ಎಂದು ದೂರಿದರು.

ಜೈಲಿಗೆ ಹಾಕಿ ಎಂದಿಲ್ಲ:

ರಾಜ್ಯಪಾಲರು ದೂರನ್ನು ಆಧರಿಸಿ ತನಿಖೆಗೆ ಅವಕಾಶ ನೀಡಿದ್ದಾರೆಯೇ ಹೊರತು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜೈಲಿಗೆ ಹಾಕಿಸಿಲ್ಲ. ತನಿಖೆ ಮಾಡಿ ಎಂದಿದ್ದಕ್ಕೆ ಕಾಂಗ್ರೆಸ್‌ ನಾಯಕರು ಬಾಯಿ ಬಡಿದುಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯನವರಿಗೆ ಪ್ರಮಾಣ ವಚನ ಬೋಧಿಸಿದ್ದೇ ರಾಜ್ಯಪಾಲರು. ಅಂತಹವರು ತನಿಖೆ ಮಾಡಿ ಎಂದಿದ್ದನ್ನು ವಿರೋಧಿಸಿದರೆ ಅದು ಸರ್ವಾಧಿಕಾರಿ ಧೋರಣೆಯಾಗುತ್ತದೆ. ಅದು ತುಘಲಕ್‌ ದರ್ಬಾರ್‌ ಆಗುತ್ತದೆ. ಸಾಂವಿಧಾನಿಕವಾಗಿ ದೊಡ್ಡ ಹುದ್ದೆಯಲ್ಲಿರುವವರಿಗೆ ಕೀಳು ಮಾತುಗಳಿಂದ ನಿಂದಿಸುವುದು ಅಕ್ಷಮ್ಯ ಅಪರಾಧ. ಇದು ದಲಿತರಿಗೆ ಮಾಡುವ ಅಪಮಾನ. ಇದಕ್ಕಾಗಿ ಕಾಂಗ್ರೆಸ್‌ ಕ್ಷಮೆ ಯಾಚಿಸಬೇಕು ಎಂದರು.

ಇದನ್ನೂ ಓದಿ: Viral video: ಹೆಂಗಸಿನ ಮೇಲೆ ವ್ಯಾಮೋಹವಿದ್ದರೆ ನಮ್ಮ ಬಳಿ ಬನ್ನಿ: ರೆಡ್ ಲೈಟ್ ಏರಿಯಾ ಮಹಿಳೆಯ ಆಕ್ರೋಶ..!

ಬಿಜೆಪಿ ಸರ್ಕಾರ 40% ಕಮಿಷನ್‌ ಪಡೆದಿದೆ ಎಂದು ಕಾಂಗ್ರೆಸ್‌ ಸುಳ್ಳು ಆರೋಪ ಮಾಡಿತ್ತು. ಅದಕ್ಕಾಗಿ ಪ್ರಕರಣ ದಾಖಲಿಸಿದ್ದು, ಅದರ ಜಾಮೀನಿನ ಮೇಲೆ ಕಾಂಗ್ರೆಸ್‌ ನಾಯಕರು ಹೊರಗೆ ಓಡಾಡುತ್ತಿದ್ದಾರೆ ಎಂದರು.

Latest News

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಕೋಲ್ಕತ್ತ: ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಚೆನ್ನೈ ವಿರುದ್ಧ ಸೋಲುವ ಮೂಲಕ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ: ಕೆಎಸ್ಆರ್.ಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ಆರೇಶಂಕರ ಕ್ರಾಸ್

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಮುದ್ದೇಬಿಹಾಳ : ಪಟ್ಟಣದ ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಮುದ್ದೇಬಿಹಾಳ, ಕೋಳೂರು, ಅಡವಿ

ನಿರ್ಲಕ್ಷ್ಯದ ವಿರುದ್ಧ ಆಕ್ರೋಶ : ಜಾತಿ ಗಣತಿಗೆ ಅಧಿಕಾರಿಗಳ ಅನಾದರ-ಆರೋಪ

ನಿರ್ಲಕ್ಷ್ಯದ ವಿರುದ್ಧ ಆಕ್ರೋಶ : ಜಾತಿ ಗಣತಿಗೆ ಅಧಿಕಾರಿಗಳ ಅನಾದರ-ಆರೋಪ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಒಳಮೀಸಲಾತಿ ಕಲ್ಪಿಸಲು ಆರಂಭಿಸಿರುವ ಜಾತಿ ಗಣತಿಗೆ ಮುದ್ದೇಬಿಹಾಳ ತಾಲ್ಲೂಕಿನಲ್ಲಿ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಲಿಂಗಸಗೂರು: ತಾಲ್ಲೂಕಿನ ಚಿತ್ತಾಪೂರ ಗ್ರಾಮದಲ್ಲಿ ಬೋರವೇಲ್ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಗ್ರಾಮದ ಜನರಿಗೆ ಯೋಗ್ಯವಾದ ಕೃಷ್ಣ ನದಿಯ ನೀರನ್ನು ಒದಗಿಸಬೇಕು ಎಂದು ಸಹಾಯಕ ಆಯುಕ್ತರಿಗೆಅಂಬೇಡ್ಕರ ಸೇನೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು. ಕಳೆದ ವರ್ಷ ಬೇಸಿಗೆಯಲ್ಲಿ ಚಿತ್ತಾಪೂರ ಗ್ರಾಮದ ಸಂಪೂರ್ಣ ಜನರಿಗೆ ವಾಂತಿ ಬೇಧಿಯಿಂದ ಸಾರ್ವಜನಿಕರು ತತ್ತರಿಸಿ ಹೋಗಿದ್ದರು. ಇಡೀ ರಾಜ್ಯಾದ್ಯಂತ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿತ್ತು. ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳು ಬೇಟಿ ನೀಡಿ, ಹತೋಟಿಗೆ ತರುವ

ಅಕ್ರಮ ಗಣಿಗಾರಿಕೆ ಗಾಲಿ ಜನಾರ್ಧನ್ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ

ಅಕ್ರಮ ಗಣಿಗಾರಿಕೆ ಗಾಲಿ ಜನಾರ್ಧನ್ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ

ದೆಹಲಿ: ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಇದೀಗ ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಅಪರಾಧಿ ಎಂದು ತೀರ್ಪು ಪ್ರಕಟಿಸಿದೆ. ಇದರ ಬೆನ್ನಲ್ಲೇ ಕೋರ್ಟ್ ಶಿಕ್ಷೆ ಪ್ರಕಟಿಸಿದ್ದು ಶಾಸಕ ಜನಾರ್ಧನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಓಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ