ಬೆಂಗಳೂರು: ಮೈಸೂರು ಮುಡಾ (Muda case) ನಿವೇಶನ ಹಗರಣದ ದೂರಿನ ಸಂಬಂಧ ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನದತ್ತ ಅಧಿಕಾರ ಚಲಾಯಿಸಿ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಭಂಡತನ ಬಿಟ್ಟು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ಆಗ್ರಹಿಸಿದ್ದಾರೆ.
Join Our Telegram: https://t.me/dcgkannada
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ವಿಜಯೇಂದ್ರ ಅವರು ಪೋಸ್ಟ್ ಮಾಡಿದ್ದು, “ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನ ದತ್ತ ಅಧಿಕಾರ ಚಲಾಯಿಸಿ ಮುಖ್ಯಮಂತ್ರಿಗಳ ಮುಡಾ ಹಗರಣದ ದೂರಿಗೆ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ” ಎಂದು ಗಮನ ಸೆಳೆದಿದ್ದಾರೆ.
ಸಾಕಷ್ಟು ದಾಖಲೆ, ಪುರಾವೆಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರ ದಲ್ಲಿ ಭಾಗಿಯಾಗಿರುವುದರ ವಿರುದ್ಧ ಎಷ್ಟೇ ಹೋರಾಟ ನಡೆಸಿದರೂ ತಮ್ಮನ್ನು ಜಗ್ಗಿಸುವವರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಂಡತನ ಪ್ರದರ್ಶಿಸುತ್ತಿದ್ದರು.
ಇದನ್ನೂ ಓದಿ: Cubbon park: ವೃದ್ಧನಿಂದ ಹೀನ ಕೃತ್ಯ.. ಕಬ್ಬನ್ ಪಾರ್ಕ್ ನಲ್ಲಿ ಮಹಿಳೆಯರ ಎದುರೇ ಹಸ್ತಮೈಥುನ.. (ವೈರಲ್ ವಿಡಿಯೋ ನೋಡಿ)
ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಲು ಅನುವಾಗುವಂತೆ ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಮುಖ್ಯಮಂತ್ರಿ ಸ್ಥಾನದ ಘನತೆ ಉಳಿಸಲಿ ಎಂದು ಅವರು ಒತ್ತಾಯಿಸಿದ್ದಾರೆ.
Muda case: ಕರ್ನಾಟಕಕ್ಕೆ ಬಂದ AICC ಅಧ್ಯಕ್ಷ ಖರ್ಗೆ.. ಸಿಎಂ ಸಿದ್ದು ಬೆನ್ನಿಗೆ ನಿಲ್ಲುತ್ತಾರಾ?
ಬೆಂಗಳೂರು: ಬೃಹತ್ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಕಡತಕ್ಕೆ (Muda case) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (Muda case) ಅಡಿಯಲ್ಲಿ ಅವರ ಪತ್ನಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ನಡುವೆ ಹೈಕಮಾಂಡ್ ಸಿಎಂ ಸಿದ್ದರಾಮಯ್ಯಗೆ ಅಭಯ ನೀಡಿದ್ದು, ಎಐಸಿಸಿ ನಾಯಕರಾದ ರಣದೀಪ್ ಸುರ್ಜೆವಾಲಾ ಹಾಗೂ ಕೆ.ಸಿ. ವೇಣುಗೋಪಾಲ್ ಕರೆ ಮಾಡಿ ಸಿಎಂ ಸಿದ್ದರಾಮಯ್ಯಗೆ ಧೈರ್ಯ ತುಂಬಿದ್ದಾರೆ.
ನಿಮ್ಮ ಜೊತೆಗೆ ನಾವು ಇದ್ದೇವೆ ನೀವು ಧೈರ್ಯವಾಗಿರಿ, ಏನೇ ಆದರೂ ಕಾನೂನು ಹೋರಾಟ ಮಾಡೋಣ ಎಂದಿದ್ದಾರೆ. ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಲೂ ಸೂಚಿಸಿದ್ದಾರೆ ಎನ್ನಲಾಗಿದೆ.
ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಆಗಮಿಸಿದ್ದು, ಪ್ರಸ್ತುತ ರಾಜ್ಯ ರಾಜಕೀಯ ಬೆಳವಣಿಗೆ ಹಾಗೂ ಮುಂದಿನ ಹೋರಾಟಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.
ದೂರದಾರ ಟಿ.ಜೆ. ಅಬ್ರಾಹಂಗೆ ರಾಜ್ಯಪಾಲರ ಕಚೇರಿಗೆ ಆಗಮಿಸಿ ದಾಖಲೆ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಟಿ.ಜೆ. ಅಬ್ರಾಹಂ ಮತ್ತಷ್ಟು ದಾಖಲೆಗಳನ್ನು ತೆಗೆದುಕೊಂಡು ರಾಜ್ಯಪಾಲರ ಕಚೇರಿ ತಲುಪಲಿದ್ದಾರೆ ಎಂದು ತಿಳಿದು ಬಂದಿದೆ.