ಬೆಂಗಳೂರು: ಮುಡಾ ಹಗರಣಕ್ಕೆ (Muda Case) ಸಂಬಂಧಿಸಿದಂತೆ ರಾಜೀನಾಮೆ ಕೊಡಿ ಅಂತ ಸಿಎಂ ಸಿದ್ದರಾಮಯ್ಯ (Siddaramaiah)ಗೆ ಹೇಳಲ್ಲ ಕೊಡ್ತಾರೆ ಅಂತ ನಿರೀಕ್ಷೆಯನ್ನೂ ಮಾಡಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಸ್ಫೋಟಕ ಹೇಳಿಕೆ ನೀಡಿದ್ದಾರೆ.
Join Our Telegram: https://t.me/dcgkannada
ಹೆಚ್‌ಡಿಕೆ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿಲ್ಲ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅವರು, ನನ್ನ ಕೇಸಲ್ಲಿ ಯಾಕೆ ಪ್ರಾಸಿಕ್ಯೂಷನ್ ಬೇಕು? ಇವರು ಯಾಕೆ ಸುಪ್ರಿಂಕೋರ್ಟ್ ಮುಂದೆ ಹೋಗಿಲ್ಲ. ಕೋರ್ಟ್ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ತನ್ನಿ ಅಂತ ಹೇಳಿದೆಯಾ? ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: Heart attack: ಬೈಕ್‌ನಲ್ಲಿ ಹೋಗುತ್ತಿದ್ದಾಗ ಹೃದಯಾಘಾತ! ಯೋಧ ದುರ್ಮರಣ
ಇನ್ನು, “ನಾನು ರಾಜೀನಾಮೆ ಕೊಡಿ ಅಂತ ಹೇಳಿಲ್ಲ, ಕೊಡ್ತಾರೆ ಅಂತ ನಿರೀಕ್ಷಿಸಿಲ್ಲ. ನಮ್ಮ ಪಾದಯಾತ್ರೆಗೂ ಪ್ರಾಸಿಕ್ಯೂಷನ್‌ಗೂ ಸಂಬಂಧವಿಲ್ಲ. ಜನತೆಗೆ ಸಂದೇಶ ಕೊಡಲು ಪಾದಯಾತ್ರೆ ಮಾಡಿದ್ದೇವೆ” ಎಂದರು.
ಈ ಮೂಲಕ ಹೆಚ್‌ಡಿಕೆ ಯೂಟರ್ನ್ ಹೊಡೆದ್ರಾ (Muda case) ಎಂಬ ಪ್ರಶ್ನೆ ರಾಜ್ಯ ರಾಜಕಾರಣದಲ್ಲಿ ಮುನ್ನೆಗೆ ಬಂದಿದೆ.
ನನ್ನನ್ನು ಹೆದರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ.. HDK ಗಂಭೀರ ಆರೋಪ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಮಂತ್ರಿಗಳು ನನ್ನ ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಅದಕ್ಕೆಲ್ಲ ಜಗ್ಗುವ ಜಾಯಮಾನ ನನ್ನದಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು, ಯಾವುದೋ ಹಳೆಯ ಪ್ರಕರಣವನ್ನು ಕೆದಕಿ, ಸುಪ್ರೀಂ ಕೋರ್ಟ್ ನಲ್ಲಿರುವ ಪ್ರಕರಣ ಇಟ್ಟುಕೊಂಡು ರಾಜ್ಯಪಾಲರನ್ನು ಅಪಮಾನಿಸುವ, ನನ್ನನ್ನು ಬ್ಲಾಕ್ ಮೇಲ್ ಮಾಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇದಕ್ಕೆಲ್ಲಾ ಕೇರ್ ಮಾಡುವ ಪೈಕಿ ನಾನಲ್ಲ, ಈ ಸರ್ಕಾರಕ್ಕೂ ಅದು ಗೊತ್ತಿದೆ ಎಂದು ಕಿಡಿಕಾರಿದರು.
ರಾಜ್ಯಪಾಲರಿಗೆ ಸರ್ಕಾರದಿಂದ ಧಮ್ಕಿ:
ರಾಜ್ಯಪಾಲರು ಮೂಡಾ ಹಗರಣ ವಿಚಾರಣೆಗೆ ಅನುಮತಿ ನೀಡಿದಾಕ್ಷಣ ಇಡೀ ಸಚಿವರು, ಶಾಸಕರನ್ನು ಇಟ್ಟುಕೊಂಡು ರಾಜ್ಯಪಾಲರಿಗೆ ಧಮ್ಕಿ ಹಾಕುವ, ಜನರನ್ನು ಎತ್ತಿ ಕಟ್ಟುವ ಕೆಲಸವನ್ನು ಸಿದ್ದರಾಮಯ್ಯ ಅವರು ಮಾಡುತ್ತಿದ್ದಾರೆ. ನಾನು ಹೀಗೆಲ್ಲಾ ಮಾಡಿಲ್ಲ, ನನ್ನ ವಿರುದ್ಧ ಆರೋಪ ಕೇಳಿಬಂದಾಗ ಒಬ್ಬನೇ ಎದುರಿಸುತ್ತೇನೆ ಎಂದು ಹೇಳಿದ್ದೆ. ವಿಧಾನಸಭೆ ಕಲಾಪದಲ್ಲಿಯೂ ಹೇಳಿದ್ದೇನೆ. ಬೇಕಾದರೆ ಕಡತ ತೆಗೆದು ನೋಡಬಹುದು ಎಂದು ಹೇಳಿದರು ಕೇಂದ್ರ ಸಚಿವರು.
ನನ್ನ ವಿರುದ್ಧ 2006ರಲ್ಲಿ ಗಣಿ ಆರೋಪ ಮಾಡಿದಾಗ ನಾನೊಬ್ಬನೇ ಎದುರಿಸಿದೆ. ಶಾಸಕರು, ಸಚಿವರನ್ನು ಅಡ್ಡ ಇಟ್ಟುಕೊಂಡು ರಕ್ಷಣೆ ಪಡೆಯುವ ಕೆಲಸ ಮಾಡಲಿಲ್ಲ. ಹೇಡಿತನ ಪ್ರದರ್ಶಿಸಲಿಲ್ಲ, ಧೈರ್ಯವಾಗಿ ಒಬ್ಬನೇ ಎದುರಿಸಿದೆ ಎಂದರು