ಬಿಜೆಪಿ-ಜೆಡಿಎಸ್‌ ಪಿತೂರಿಗೆ ಜಗ್ಗುವುದಿಲ್ಲ: ಕಾಂಗ್ರೆಸ್ ಹೈಕಮಾಂಡ್ ಖಡಕ್ ಸಂದೇಶ ರವಾನೆ

ಬಿಜೆಪಿ-ಜೆಡಿಎಸ್‌ ಪಿತೂರಿಗೆ ಜಗ್ಗುವುದಿಲ್ಲ: ಕಾಂಗ್ರೆಸ್ ಹೈಕಮಾಂಡ್ ಖಡಕ್ ಸಂದೇಶ ರವಾನೆ

ಬೆಂಗಳೂರು: ಬಿಜೆಪಿ–ಜೆಡಿಎಸ್‌ ಪಕ್ಷಗಳ ಪಿತೂರಿಗೆ ನಾವು ಜಗ್ಗುವುದಿಲ್ಲ. ನಾವು ಜನರ ಬಳಿಗೆ ಹೋಗುತ್ತೇವೆ. ಅವರಿಗೆ ವಾಸ್ತವಾಂಶ ವಿವರಿಸುತ್ತೇವೆ. ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರು ಸ್ಪಷ್ಟ ಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿಂದು ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಗಂಭೀರ ಬೆಳವಣಿಗೆಗಳ ಕುರಿತು ರಾಜ್ಯದ ಸಚಿವರೊಂದಿಗೆ ಚರ್ಚಿಸಲಾಯಿತು. ಕರ್ನಾಟಕ ರಾಜ್ಯ ಬಿಜೆಪಿಯು ಸರ್ಕಾರಗಳನ್ನು ಉರುಳಿಸುವ ಇತಿಹಾಸವನ್ನು ಹೊಂದಿದೆ ಎಂದರು.

2018ರಲ್ಲಿ ಕಾಂಗ್ರೆಸ್- ಜೆಡಿಎಸ್‌ ಮೈತ್ರಿ ಸರ್ಕಾರವನ್ನು ಉರುಳಿಸಿದ್ದೇ ಬಿಜೆಪಿ ಕೇಂದ್ರ ನಾಯಕತ್ವದ ಪಿತೂರಿಯಿಂದ. ಅದೇ ರೀತಿಯ ಸ್ಪಷ್ಟ ಉದ್ದೇಶದಿಂದ ಈಗಲೂ ಕರ್ನಾಟಕ ಕಾಂಗ್ರೆಸ್‌ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದಾರೆ.
ತಮ್ಮ ಪಕ್ಷವನ್ನು ಉಳಿಸಿಕೊಳ್ಳಲು ಈ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಪ್ರಜ್ವಲ್‌ ರೇವಣ್ಣ ಪ್ರಕರಣ ಬೆಳಕಿಗೆ ಬಂದಾಗಲೇ ಇಡೀ ದೇಶ ಕಾಂಗ್ರೆಸ್‌ ಸರ್ಕಾರದ ವಿರುದ್ಧದ ಪಿತೂರಿಯನ್ನು ಗಮನಿಸಿದೆ. ಬಿಜೆಪಿ ಹಾಗೂ ಜೆಡಿಎಸ್‌ ನ ಮುಖಂಡರು ತಮ್ಮ ಮಕ್ಕಳನ್ನು ಉಳಿಸಿಕೊಳ್ಳಲು ನಮ್ಮ ಚುನಾಯಿತ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದರು.

ಸಿದ್ದರಾಮಯ್ಯ ಅವರು ಬೆಳೆದು ಬಂದ ಹಾದಿ ಎಲ್ಲರಿಗೂ ತಿಳಿದಿದೆ: ಎಲ್ಲರಿಗೂ ಸಿದ್ದರಾಮಯ್ಯನವರ ಪ್ರಾಮಾಣಿಕತೆಯ ಅರಿವಿದೆ. ಅವರು ಮುಖ್ಯಮಂತ್ರಿ ಪದವಿಗೆ ಹೊಸಬರಲ್ಲ. ಅವರ ರಾಜಕೀಯ ಬದುಕು, ತತ್ವ ಸಿದ್ಧಾಂತ, ಹಿನ್ನೆಲೆ ಅವರು ಹಿಂದೆ ಹೇಗಿದ್ದರು, ಈಗ ಹೇಗಿದ್ದಾರೆ ಎಂಬುದು ಕರ್ನಾಟಕದ ಜನತೆಗೆ ಚೆನ್ನಾಗಿ ತಿಳಿದಿದೆ.

ಜನಪ್ರಿಯತೆ ಸಹಿಸದೆ ಸರ್ಕಾರ ಅಸ್ತಿರಗೊಳಿಸುವ ಹುನ್ನಾರ: ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಬಡವರಿಗಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಯಿತು. ಬಿಜೆಪಿ ಮತ್ತು ಜೆಡಿಎಸ್‌ ನವರಿಗೆ ಇದು ರಾಜಕೀಯವಾಗಿ ನಷ್ಟ ಉಂಟು ಮಾಡುವುದು ಹಾಗೂ ವಿವಿಧ ಪ್ರಕರಣಗಳ ತನಿಖೆಯಿಂದ ವೈಯಕ್ತಿಕವಾಗಿಯೂ ಅವರಿಗೆ ತೊಂದರೆಯಾಗಲಿದೆ ಎಂಬುದು ಅರಿವಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರ ವಿರುದ್ಧ ಕೆಲವು ಆರೋಪಗಳನ್ನು ಮಾಡುವ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ ನಡೆಸಿದ್ದಾರೆ.

ರಾಜ್ಯಪಾಲರ ಬಳಕೆ ದುರದೃಷ್ಟಕರ: ದುರದೃಷ್ಟವಶಾತ್‌ ರಾಜ್ಯದ ರಾಜ್ಯಪಾಲರು ಬಿಜೆಪಿ ಪಿತೂರಿಯ ಸಾಧನವಾಗಿದ್ದಾರೆ. ಮುಖ್ಯಮಂತ್ರಿಯವರಿಗೆ ಕಾರಣ ಕೇಳಿ ನೋಟೀಸ್‌ ನೀಡುವ ಮೂಲಕ ಸರ್ಕಾರ ಅಸ್ಥಿರಗೊಳ್ಳಲಿದೆ ಎಂಬ ಭಾವನೆ ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ. ಆದರೆ ಕಾಂಗ್ರೆಸ್‌ ಪಕ್ಷವು ಈ ಪಿತೂರಿ ವಿರುದ್ಧ ಹೋರಾಡಲು ತೀರ್ಮಾನಿಸಿದ್ದು, ಕರ್ನಾಟಕದ ಜನತೆಗೆ ವಾಸ್ತವಾಂಶದ ಅರಿವು ಮೂಡಿಸಲು ನಿರ್ಧರಿಸಿದೆ. ಸಚಿವರು, ಶಾಸಕರು ಜಿಲ್ಲೆಗಳು, ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡಿ ಜನರಿಗೆ ಸರ್ಕಾರದ ಸಾಧನೆಗಳನ್ನು ವಿವರಿಸಿ, ಗ್ಯಾರಂಟಿ ಯೋಜನೆಗಳನ್ನು ಮುಗಿಸುವ ಬಿಜೆಪಿ-ಜೆಡಿಎಸ್‌ ನ ಹುನ್ನಾರವನ್ನು ಬಯಲಿಗೆಳೆಯಲಾಗುವುದು.

ಇದಕ್ಕಾಗಿ ಇಂದು ಸಭೆ ನಡೆಸಿದ್ದು, ರಾಜ್ಯದ ಬಡ ಜನರ ಕುರಿತು ಕಾಂಗ್ರೆಸ್‌ ಸರ್ಕಾರಕ್ಕೆ ಅತೀವ ಕಾಳಜಿ ಇದ್ದು, ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಲಾಗುವುದು. ಈ ಯೋಜನೆಗಳ ಕುರಿತು ನಮಗೆ ಹೆಮ್ಮೆ ಇದೆ ಎಂದರು.

ಭ್ರಷ್ಟಾಚಾರ ಕುರಿತು ಬಿಜೆಪಿ ಮಾತಾಡುವುದು ಹಾಸ್ಯಾಸ್ಪದ: ಬಿಜೆಪಿ ಭ್ರಷ್ಟಾಚಾರದ ಕುರಿತು ಮಾತನಾಡುತ್ತಿರುವುದು ಅತ್ಯಂತ ಹಾಸ್ಯಾಸ್ಪದ. ವಿಜಯೇಂದ್ರ ಅವರ ಮೇಲೆ ಎಷ್ಟು ಆರೋಪಗಳಿವೆ?, ಪ್ರಜ್ವಲ್‌ ರೇವಣ್ಣ ವಿರುದ್ಧ ಎಷ್ಟು ಆರೋಪಗಳಿವೆ? ಅಂತವರು ತಾವೇ ಅತ್ಯಂತ ಸಭ್ಯರೆಂಬ ಸೋಗಿನಲ್ಲಿ ತಮ್ಮ ರಾಜಕೀಯ ಜೀವನದುದ್ದಕ್ಕೂ ಜನಪರ ಕಾಳಜಿ ಹೊಂದಿದ ರಾಜ್ಯದ ಮುಖ್ಯಮಂತ್ರಿ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ. ರಾಜ್ಯದ ಬಡ ಜನರ ಜೊತೆ ನಿಂತ ಮುಖ್ಯಮಂತ್ರಿಯವರನ್ನು ಮುಗಿಸಲು ಮುಂದಾಗಿದ್ದಾರೆ ಎಂದರು.

ಸಮಸ್ಯೆ ಇದ್ದರೆ ಕಾನೂನು ಕ್ರಮ ಕೈಗೊಳ್ಳಲಿ: ಆರೋಪಗಳ ಕುರಿತು ಕಾನೂನು ತನ್ನದೇ ಕ್ರಮ ವಹಿಸಲಿದೆ. ಈ ಬಗ್ಗೆ ನಮಗೆ ಯಾವುದೇ ಅಳುಕಿಲ್ಲ. ನಿಜವಾಗಿಯೂ ಸಮಸ್ಯೆ ಇದ್ದರೆ ಕಾನೂನಿನ ಮೊರೆ ಹೋಗಲಿ. ಅದರ ಬದಲಾಗಿ ಪ್ರತಿದಿನ ಸಿದ್ದರಾಮಯ್ಯ ಅವರ ವಿರುದ್ಧ ಪದೇ ಪದೇ ಭ್ರಷ್ಟಾಚಾರ ಆರೋಪ ಮಾಡುವುದು ಸರಿಯಲ್ಲ. ಅವರು ಗ್ಯಾರಂಟಿ ಯೋಜನೆಗಳು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡಿದ್ದಾರೆ.

ಕಾಂಗ್ರೆಸ್‌ ಬಡವರ ಪರವಾಗಿದೆ ಎಂದು ಅವರಿಗೂ ಗೊತ್ತಿದೆ. ಹಿಂದಿನ ಚುನಾವಣೆ ಕರ್ನಾಟಕದಲ್ಲಿ ಬಡವರು-ಶ್ರೀಮಂತರ ನಡುವೆ ಇತ್ತು. ಆದ್ದರಿಂದಲೇ 135 ಸೀಟುಗಳೊಂದಿಗೆ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದಿದ್ದೇವೆ. ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಾಡಿರುವ ತಾರತಮ್ಯ ಕುರಿತು ಯಾರೂ ಮಾತನಾಡುತ್ತಿಲ್ಲ. ನಿರ್ಮಲಾ ಸೀತಾರಾಮನ್‌ ಅವರು ಇಲ್ಲಿಂದಲೇ ಆಯ್ಕೆಯಾಗಿದ್ದರೂ ಯಾವುದೇ ನೆರವು ಒದಗಿಸಿಲ್ಲ.ಸೀಮಿತ ಸಂಪನ್ಮೂಲದೊಂದಿಗೆ ಸರ್ಕಾರ ಬಡವರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ. ಕೇಂದ್ರ ಸರ್ಕಾರ ಬೆಂಬಲ ನೀಡುವ ಬದಲಿಗೆ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ. ನಾವು ಇದರ ವಿರುದ್ಧ ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯ ಉಸ್ತುವಾರಿ ಸುರ್ಜೇವಾಲ ಅವರು ಉಪಸ್ಥಿತರಿದ್ದರು.

Latest News

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ರೈತಾಪಿ ಕುಟುಂಬದಲ್ಲಿ ಜನಿಸಿ ಗ್ರಾಮೀಣ ಪ್ರದೇಶದಲ್ಲಿ ಹಳ್ಳಿಯ ಮಕ್ಕಳಿಗೆ ಉತ್ತಮ ಶಿಕ್ಷಣ

ಮುದ್ದೇಬಿಹಾಳ : ನೀರಿನ ಹೊಂಡದಲ್ಲಿ ಜಾರಿ ಬಿದ್ದು ಬಾಲಕ ಸಾವು

ಮುದ್ದೇಬಿಹಾಳ : ನೀರಿನ ಹೊಂಡದಲ್ಲಿ ಜಾರಿ ಬಿದ್ದು ಬಾಲಕ ಸಾವು

ಮುದ್ದೇಬಿಹಾಳ : ಕುರಿಗಳಿಗೆ ನೀರು ಕುಡಿಸಲು ಹೋಗಿದ್ದ ಬಾಲಕನೊಬ್ಬ ಕಾಲು ಜಾರಿ ಹೊಂಡದಲ್ಲಿ ಬಿದ್ದು

ಶಿವಯೋಗಿಮಠ ಕುಟುಂಬದಿoದ ಆಯೋಜನೆ:                  ಮಾ.2 ರಂದು ಆರೋಗ್ಯ ಉಚಿತ  ತಪಾಸಣಾ ಶಿಬಿರ

ಶಿವಯೋಗಿಮಠ ಕುಟುಂಬದಿoದ ಆಯೋಜನೆ: ಮಾ.2 ರಂದು ಆರೋಗ್ಯ ಉಚಿತ ತಪಾಸಣಾ ಶಿಬಿರ

ಮುದ್ದೇಬಿಹಾಳ : ಶ್ರೀ ಫಕಿರೇಶ್ವರ ವಿವಿದೋದ್ಧೇಶ ಹಾಗೂ ಗ್ರಾಮೀಣಾಭಿವೃದ್ಧಿ ಸೇವಾ ಸಂಘ ಮತ್ತು ಸೇಂಟ್

ಮಾ.1 ರಂದು ಹುಲ್ಲೂರಿನಲ್ಲಿ ಎಸ್.ಎನ್.ಡಿ ಸಂಸ್ಕೃತಿ ಉತ್ಸವ,ಪ್ರತಿಭಾ ಪುರಸ್ಕಾರ

ಮಾ.1 ರಂದು ಹುಲ್ಲೂರಿನಲ್ಲಿ ಎಸ್.ಎನ್.ಡಿ ಸಂಸ್ಕೃತಿ ಉತ್ಸವ,ಪ್ರತಿಭಾ ಪುರಸ್ಕಾರ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರಿನಲ್ಲಿ ಎಸ್.ಎನ್.ಡಿ.ನ್ಯಾಶನಲ್ ಪಬ್ಲಿಕ್ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಮಾ.1 ರಂದು

ಸಿಂಚನಾ ಸಜ್ಜನ ಸೈನಿಕ ಶಾಲೆಗೆ ಆಯ್ಕೆ

ಸಿಂಚನಾ ಸಜ್ಜನ ಸೈನಿಕ ಶಾಲೆಗೆ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹಳ್ಳೂರ ಕ್ರಾಸ್ ನಲ್ಲಿರುವ ಹೊಸನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಸಿಂಚನಾ ಶಿವಪುತ್ರಪ್ಪ ಸಜ್ಜನ ಸನ್ 2026-27ನೇ ಸಾಲಿನ ಬೆಳಗಾವಿ ಜಿಲ್ಲೆ ಕಿತ್ತೂರ ರಾಣಿ ಚೆನ್ನಮ್ಮ ಸೈನಿಕ ವಸತಿ ಶಾಲೆಗೆ ಆಯ್ಕೆಯಾಗಿದ್ದಾಳೆ. ಸಿಂಚನಾ , ಬಿದರಕುಂದಿ ಗ್ರಾಮದ ಶಿಕ್ಷಕ ದಂಪತಿಯಾದ ಶಿವಪುತ್ರಪ್ಪ ಸಜ್ಜನ ಹಾಗೂ ಸುಮಲತಾ ಗಡಿಯಪ್ಪನವರ ಅವರ  ಪುತ್ರಿ.ವಿದ್ಯಾರ್ಥಿನಿ ಸಿಂಚನಾ ಸಾಧನೆಗೆ ಬಿದರಕುಂದಿ ಗ್ರಾಮಸ್ಥರು ಅಭಿನಂದಿಸಿದ್ದಾರೆ.

ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಮುದ್ದೇಬಿಹಾಳ : ಫಾಸ್ಟ್ ಫುಡ್,ಜಂಕ್ ಫುಡ್‌ನಿಂದ ದೇಹದ ಮೇಲಿನ ದುಷ್ಪರಿಣಾಮ ಬೀರುತ್ತದೆ.ಅಂತಹ ಆಹಾರ ಪದಾರ್ಥಗಳ ಸೇವನೆಯಿಂದ ದೂರ ಇರಬೇಕು ಎಂದು ವಿಬಿಸಿ ಹೈಸ್ಕೂಲ್‌ನ ಮುಖ್ಯಗುರು ವಿ.ಜಿ.ರಾಮಚಂದ್ರಯ್ಯ ಹೇಳಿದರು. ಪಟ್ಟಣದ ಕೆಬಿಎಂಪಿಎಸ್ ಶಾಲೆಯಲ್ಲಿ ಶುಕ್ರವಾರ ರಾಷ್ಟಿçÃಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಾವು ದೈನಂದಿನ ಬದುಕಿನಲ್ಲಿ ಸೇವಿಸುವ ಆಹಾರದಲ್ಲೂ ವಿಜ್ಞಾನ ಅಡಗಿದೆ.ಪ್ರತಿ ವಸ್ತುಗಳಲ್ಲೂ ವೈಜ್ಞಾನಿಕ ಅಂಶಗಳನ್ನು ಒಳಗೊಂಡಿದ್ದು ಯಾವ ಪದಾರ್ಥ ನಮ್ಮ ದೇಹಕ್ಕೆ ಅತ್ಯಂತ ಸೂಕ್ತ ಎಂಬುದನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದರು.