ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ ತಾಲ್ಲೂಕು ಅಧ್ಯಕ್ಷ ಅಮರೇಶ ಕೆ. ಗೂಳಿ(ಆಲೂರು) ಅವರಿಗೆ ಸನ್ಮಾನ ಮಾಡಲಾಗುತ್ತದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಸ್ಕಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷರಾದ ಸಿ.ಬಿ.ಅಸ್ಕಿ ವಹಿಸುವರು.
ಆನಂದಗೌಡ ಗೆಳೆಯರ ಅಭಿಮಾನಿ ಬಳಗದವರು, ಹಸಿರು ತೋರಣ ಗೆಳೆಯರ ಬಳಗದ ಸದಸ್ಯರು,ಫೌಂಡೇಶನ್ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅಸ್ಕಿ ಫೌಂಡೇಶನ್ ಉಪಾಧ್ಯಕ್ಷ ವಿರೇಶಗೌಡ ಅಸ್ಕಿ, ಅಸ್ಕಿ ಫೌಂಡೇಶನ್ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಶ್ರೀಧರ ಬಿರಾದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





