ಮುದ್ದೇಬಿಹಾಳ : ರಸ್ತೆ ಕ್ರಾಸ್ ಮಾಡುತ್ತಿದ್ದ ವೇಳೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ನೇಬಗೇರಿ ಗ್ರಾಮದ ಬಳಿ ಶುಕ್ರವಾರ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಯರಗಲ್ ಗ್ರಾಮದ ರೇವಣಸಿದ್ದಪ್ಪ ಶಿವಪ್ಪ ಬೆಣಕಣ್ಣವರ(36)ಎಂದು ಗುರುತಿಸಲಾಗಿದೆ. ಮುದ್ದೇಬಿಹಾಳದಿಂದ ಹುನಗುಂದ ಕಡೆಗೆ ಬೈಕ್ ನಂ.ಕೆಎ-33, ಇಇ-6348ರ ಸವಾರ ಅತೀ ವೇಗವಾಗಿ ನಿರ್ಲಕ್ಷದಿಂದ ಬೈಕ್ ಚಲಾಯಿಸಿಕೊಂಡು ಹೊರಟು ರಸ್ತೆ ಕ್ರಾಸ್ ಮಾಡುತ್ತಿದ್ದ ರೇವಣಸಿದ್ದಪ್ಪನಿಗೆ ಡಿಕ್ಕಿ ಹೊಡೆಸಿದ್ದಾನೆ.ಇದರಿಂದ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ರೇವಣಸಿದ್ದಪ್ಪ ಮೃತಪಟ್ಟಿದ್ದಾನೆ.
ಘಟನೆ ನಡೆದ ತಕ್ಷಣ ಆರೋಪಿ ಬೈಕ್ ಸವಾರ ಸ್ಥಳದಿಂದ ಪರಾರಿಯಾಗಿದ್ದಾನೆ.ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಮೃತನ ಪತ್ನಿ ಮಹಾದೇವಿ ಬೆಣಕಣ್ಣವರ ಪ್ರಕರಣ ದಾಖಲಿಸಿದ್ದಾರೆ.







