ಮುದ್ದೇಬಿಹಾಳ : ಮಾ.15 ರಂದು ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್

ಮುದ್ದೇಬಿಹಾಳ : ಮಾ.15 ರಂದು ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್

ಮುದ್ದೇಬಿಹಾಳ : ಪಟ್ಟಣದ ವಿದ್ಯಾನಗರದ ಶಿರವಾಳ ಲೇಔಟ್‌ದಲ್ಲಿರುವ ಪ್ರಗತಿ ಜೆಸಿ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಚಿನ್ಮಯ ಜೆಸಿ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಇದೇ ಪ್ರಥಮ ಬಾರಿಗೆ ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ-2026-27 ಹಮ್ಮಿಕೊಳ್ಳಲಾಗಿದೆ ಎಂದು ಶಾಲೆಯ ಅಧ್ಯಕ್ಷ ಡಾ.ವೀರೇಶ ಪಾಟೀಲ ಹೇಳಿದರು.

ಪಟ್ಟಣದ ಚಿನ್ಮಯ ಜೆಸಿ ಶಾಲೆಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.4-9 ತರಗತಿ ಮಕ್ಕಳಿಗಾಗಿ ಮಾ.15 ರಂದು ಬೆಳಗ್ಗೆ 11 ರಿಂದ 12.30ರವರೆಗೆ ಪರೀಕ್ಷೆ ನಡೆಯಲಿದೆ.ಮಾ.14 ಹೆಸರು ನೋಂದಾಯಿಸಿಕೊಳ್ಳಲು ಕಡೆಯ ದಿನವಾಗಿದೆ ಎಂದು ತಿಳಿಸಿದರು.

ಪರೀಕ್ಷೆಯಲ್ಲಿ ಆಆಯ್ಕೆಯಾಗುವ ಮೊದಲ ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಒಂದು ವರ್ಷದ ಉಚಿತ ಶಿಕ್ಷಣ ನೀಡಲಾಗುತ್ತದೆ.ಎರಡನೇ ಸ್ಥಾನ ಪಡೆಯುವ ವಿದ್ಯಾರ್ಥಿಗಳಿಗೆ ಶೇ.50ರಷ್ಟು ಶುಲ್ಕದಲ್ಲಿ ರಿಯಾಯಿತಿ , ಮೂರನೇ ಸ್ಥಾನ ಪಡೆಯುವ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಶುಲ್ಕದಲ್ಲಿ ರಿಯಾಯಿತಿ ನೀಡಲಾಗುತ್ತದೆ.4,5 ಹಾಗೂ ಆರನೇ ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಕ್ರಮವಾಗಿ 2000,1000 ಹಾಗೂ 500 ರೂ.ನಗದು ಬಹುಮಾನ ನೀಡಲಾಗುತ್ತದೆ ಎಂದು ತಿಳಿಸಿದರು.

ಸಂಸ್ಥೆಯ ನಿರ್ದೇಶಕ ಸತೀಶ ಓಸ್ವಾಲ್ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಇತರೆ ಸಂಸ್ಥೆಗಳAತೆ ನಾವೂ ಪೈಪೋಟಿ ನಡೆಸಬೇಕಾಗಿದೆ.ಅದಕ್ಕಾಗಿಯೇ ಈ ಬಾರಿ ಸಾರ್ವಜನಿಕವಾಗಿ ಸ್ಪರ್ಧಾತ್ಮಕ ಪರೀಕ್ಷೆ ಆಯೋಜಿಸಲಾಗಿದೆ.ಸಮಾನ ಮನಸ್ಕ ಗೆಳೆಯರ ಬಳಗದವರು ಸೇರಿಕೊಂಡು ಮುದ್ದೇಬಿಹಾಳದಲ್ಲಿ ಜೆಸಿ ಶಾಲೆಯನ್ನು ಆರಂಭಿಸಿದ್ದೇವೆ.ಗುಣಮಟ್ಟದ ಶಿಕ್ಷಣ ನಮ್ಮ ಮಕ್ಕಳಿಗೆ ದೊರೆಯಬೇಕು ಎಂಬ ಉದ್ದೇಶದಿಂದ ಆರಂಭಿಸಿರುವ ನಮ್ಮ ಸಂಸ್ಥೆ ಮಕ್ಕಳು ಕಳೆದ ಹತ್ತು ವರ್ಷಗಳಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಪಡೆದುಕೊಳ್ಳುತ್ತಾ ಬರುತ್ತಿದ್ದಾರೆ ಎಂದು ಹೇಳಿದರು.

ಶಾಲೆಯ ಮುಖ್ಯಗುರು ಆನಂದ ಓಗಿ ಮಾತನಾಡಿ, ಪರೀಕ್ಷೆಯ ಸ್ವರೂಪ 60 ಅಂಕಗಳದ್ದಾಗಿದ್ದು ಇಂಗ್ಲಿಷ್, ಗಣಿತ,ವಿಜ್ಞಾನ,ಮಾನಸಿಕ ಸಾಮರ್ಥ್ಯ ಹಾಗೂ ಸಾಮಾನ್ಯ ಜ್ಞಾನದ್ದಾಗಿರುತ್ತದೆ.ಪ್ರತಿ ಪ್ರಶ್ನೆಯ ಸರಿ ಉತ್ತರಕ್ಕೆ ನಾಲ್ಕು ಅಂಕ, ಪ್ರತಿ ತಪ್ಪು ಉತ್ತರಕ್ಕೆ ಒಂದು ಅಂಕ ಕಡಿತಗೊಳಿಸಲಾಗುತ್ತದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ನಿರ್ದೇಶಕರಾದ ಶ್ರೀನಿವಾಸ ಇಲ್ಲೂರ,ಪ್ರಭುದೇವ ಕಲ್ಬುರ್ಗಿ,ನೀಲಕಂಠರಾವ ನಾಡಗೌಡ್ರ,ಮುರಳೀಕೃಷ್ಣ ಬುಡ್ಡೋಡಿ,ರವಿ ತಡಸದ,ಸುನೀಲ ಇಲ್ಲೂರ,ವಿಲಾಸರಾವ ದೇಶಪಾಂಡೆ ,ಮುಖ್ಯಗುರುಮಾತೆ ಸಿಸ್ಟರ್ ಸ್ಟೆಲ್ಲಾ ಇದ್ದರು.
ಪರೀಕ್ಷೆಗೆ ಹೆಸರು ನೋಂದಾಯಿಸಲು ಮೊಬೈಲ್ ಸಂಖ್ಯೆ: 9481748268, 9731173194, 9448302128, 9449154555 ಸಂಪರ್ಕಿಸಬಹುದಾಗಿದೆ.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ