Muddebihal: ಕಾಂಗ್ರೆಸ್ಸಿಗರಿಗೇ ಪುರಸಭೆ ಪಟ್ಟ.. ಮಹೆಬೂಬ ಗೊಳಸಂಗಿ ಅಧ್ಯಕ್ಷ, ಪ್ರೀತಿ ದೇಗಿನಾಳ ಉಪಾಧ್ಯಕ್ಷೆ

Muddebihal: ಕಾಂಗ್ರೆಸ್ಸಿಗರಿಗೇ ಪುರಸಭೆ ಪಟ್ಟ.. ಮಹೆಬೂಬ ಗೊಳಸಂಗಿ ಅಧ್ಯಕ್ಷ, ಪ್ರೀತಿ ದೇಗಿನಾಳ ಉಪಾಧ್ಯಕ್ಷೆ

ಮುದ್ದೇಬಿಹಾಳ : ತೀವ್ರ ಪೈಪೋಟಿಯಿಂದ ಕೂಡಿದ್ದ ಇಲ್ಲಿನ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಲ್ಲಿ ಸ್ವಪಕ್ಷೀಯರನ್ನೇ ಗದ್ದುಗೆಗೆ ಕೂಡಿಸುವ ಮೂಲಕ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ವಿರೋಧ ಪಕ್ಷದ ಮುಖಂಡರು ಮುಖಭಂಗ ಅನುಭವಿಸುವಂತೆ ಮಾಡಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಪುರಸಭೆಯಲ್ಲಿ ಬುಧವಾರ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಮಹೆಬೂಬ ಗೊಳಸಂಗಿ, ಕಾಂಗ್ರೆಸ್ ಬೆಂಬಲಿತ ಪಕ್ಷೇತರ ಸದಸ್ಯ ರಿಯಾಜ್ ಢವಳಗಿ,ಬಿಜೆಪಿಯಿಂದ ಬಸವರಾಜ ಮುರಾಳ ನಾಮಪತ್ರ ಸಲ್ಲಿಸಿದ್ದರು.

ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಪ್ರೀತಿ ದೇಗಿನಾಳ, ಭಾರತಿ ಪಾಟೀಲ್ ಹಾಗೂ ಬಿಜೆಪಿಯಿಂದ ಸಹನಾ ಬಡಿಗೇರ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂದಕ್ಕೆ ಪಡೆಯುವ ಸಮಯ ಪೂರ್ಣಗೊಂಡಾಗ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ್ದ ಬಸವರಾಜ ಮುರಾಳ ತಮಗೆ ಸಂಖ್ಯಾ ಬಲ ಇಲ್ಲವೆಂಬುದನ್ನು ಅರಿತು ನಾಮಪತ್ರ ವಾಪಸ್ ಪಡೆದುಕೊಂಡರು. ಉಪಾಧ್ಯಕ್ಷ ಸ್ಥಾನಕ್ಕೆ ಮೂವರು, ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ಕಣದಲ್ಲಿ ಉಳಿದಿದ್ದರು.

ಚುನಾವಣಾಧಿಕಾರಿಯೂ ಆಗಿರುವ ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಕೈ ಎತ್ತುವ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಿದರು.

ಅಧ್ಯಕ್ಷ ಸ್ಥಾನಕ್ಕೆ ಮಹೆಬೂಬ ಗೊಳಸಂಗಿ ಅವರಿಗೆ ಶಾಸಕರ ಮತ ಸೇರಿ ಒಟ್ಟು 16 ಮತಗಳಿಂದ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಬಲರಾಮ ಕಟ್ಟಿಮನಿ ಘೋಷಿಸಿದರು.

ಅಧ್ಯಕ್ಷ ಸ್ಥಾನಕ್ಕೆ ಸ್ವಪಕ್ಷಿಯ ಸದಸ್ಯ ಮಹೆಬೂಬ ಗೊಳಸಂಗಿ ಅವರ ವಿರುದ್ಧ ಕೊನೆಯ ಕ್ಷಣದವರೆಗೂ ತೀವ್ರ ಪೈಪೋಟಿ ಒಡ್ಡಿದ್ದ ಕಾಂಗ್ರೆಸ್ ಬೆಂಬಲಿತ ಪಕ್ಷೇತರ ಸದಸ್ಯ ರಿಯಾಜ್ ಢವಳಗಿ ಸೋಲು ಅನುಭವಿಸಿದರು.

ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಸದಸ್ಯೆ ಪ್ರೀತಿ ದೇಗಿನಾಳ ಪರ ಹಾಜರಿದ್ದ 16 ಸದಸ್ಯರು ಕೈ ಎತ್ತುವ ಮೂಲಕ ಆಯ್ಕೆ ಮಾಡಿದ್ದಾರೆ ಎಂದು ಚುನಾವಣಾಧಿಕಾರಿ ಬಲರಾಮ ಕಟ್ಟಿಮನಿ ತಿಳಿಸಿದರು.

ಗೆಲುವಿನ ನಂತರ ಮಾತನಾಡಿದ ಪುರಸಭೆ ನೂತನ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಉಪಾಧ್ಯಕ್ಷೆ ಪ್ರೀತಿ ದೇಗಿನಾಳ,ಶಾಸಕರ ಆಶೀರ್ವಾದ ಸದಸ್ಯರ ಸಹಕಾರದಿಂದ ನಾವು ಈ ಸ್ಥಾನಕ್ಕೆ ಕೂತಿದ್ದೇವೆ.ಪಟ್ಟಣದ ಜನರ ಬೇಕು ಬೇಡಿಕೆಗಳಿಗೆ ಸ್ಪಂದನೆ ನೀಡುತ್ತೇವೆ. ಪಟ್ಟಣದ ಸಮಸ್ಯೆಗಳಿಗೆ ಧ್ವನಿಯಾಗುತ್ತೇವೆ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಕೆಪಿಸಿಸಿ ಸದಸ್ಯ ಬಾಪುರಾವ ದೇಸಾಯಿ, ಮುಖಂಡರಾದ ಎಂ.ಬಿ.ನಾವದಗಿ,ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ, ಸಂಗನಗೌಡ ಬಿರಾದಾರ, ಕಾಮರಾಜ ಬಿರಾದಾರ,ಸಿಕಂದರ ಜಾನ್ವೇಕರ ಮೊದಲಾದವರು ಇದ್ದರು.

ಇದನ್ನೂ ಓದಿ: Heart attack: ‘ಲೋ ಬಿಪಿ’ಯಿಂದ 8ನೇ ತರಗತಿ ಬಾಲಕನಿಗೆ ಹೃದಯಾಘಾತ, ಸಾವು

ಪಟಾಕಿ ಸಿಡಿಸಿ ಗುಲಾಲು ಎರಚಿ ವಿಜಯೋತ್ಸವ ಆಚರಿಸಲಾಯಿತು.

Latest News

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ