ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಸ್ಥಳೀಯ ಕ್ಷತ್ರೀಯ ಮರಾಠಾ ಸಮಾಜದ ವತಿಯಿಂದ ಫೆ. 19 ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಆಚರಣೆ ಕುರಿತು ಸಮಾಜದ ಶ್ರೀ ಅಂಬಾಭವಾನಿ ಮಂದಿರದ ಆವರಣದಲ್ಲಿ ಶುಕ್ರವಾರರಂದು ಜರುಗಿದ ಪೂರ್ವಭಾವಿ ಸಭೆಯಲ್ಲಿ ಕೆಳಗೆ ನೀಡಿದಂತ ವಿವರಣೆಯಂತೆ ನಿರ್ಧರಿಸಲಾಯಿತು.

ಅಂದು ಬೆಳಗಿನ ಜಾವ ಶ್ರೀ ಅಂಬಾಭವಾನಿ ಮೂರ್ತಿಗೆ ಮಹಾಭಿಷೇಕ, ಪುಷ್ಪಾರ್ಚನೆ, ಮಹಾಮಂಗಳಾರತಿ ಕಾರ್ಯಕ್ರಮ ಜರುಗುವದಲ್ಲದೇ ನಂತರ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರ ಮೆರವಣಿಗೆ ಕುರಿತು ಬಜಾರ್ ಶ್ರೀ ಹನುಮಾನ್ ಮಂದಿರದಿAದ ಮೆರವಣಿಗೆ ಪ್ರಾರಂಭಗೊAಡು ಶಿವಾಜಿ ಸರ್ಕಲ್ ನಲ್ಲಿ ಧ್ವಜಾರೋಹಣ ನೆರವೇರಿಸಲಾಗುವದಲ್ಲದೇ ಬಸವೇಶ್ವರ ಸರ್ಕಲ್ ಮಾರ್ಗವಾಗಿ, ಕಿತ್ತೂರ ರಾಣಿ ಚನ್ನಮ್ಮ ಸರ್ಕಲ್, ಡಾ. ಅಂಬೇಡ್ಕರ್ ಸರ್ಕಲ್, ಹುಡ್ಕೋ ಮಾರ್ಗವಾಗಿ ತಹಶೀಲ್ದಾರ ಕಚೇರಿಗೆ ತೆರಳಿ ಅಲ್ಲಿಯೂ ಕೂಡಾ ಸರ್ಕಾರದ ವತಿಯಿಂದ ಶಿವಾಜಿ ಮಹಾರಾಜರ ಜಯಂತಿಯನ್ನು ಆಚರಿಸಲಾಗುವದಲ್ಲದೇ ಇದೇ ಸಮಯದಲ್ಲಿ ಉಪನ್ಯಾಸವನ್ನು ರಾಜನಾರಾಯಣ ನಲವಡೆ ಹಾಗೂ ಉದಯ ರಾಯಚೂರ ಅವರು ಆಗಮಿಸಿ ಉಪನ್ಯಾಸ ನೀಡಲಿದ್ದಾರೆಂದು ಕ್ಷತ್ರೀಯ ಮರಾಠಾ ಸಮಾಜದ ಅಧ್ಯಕ್ಷರಾದ ನೇತಾಜಿ ನಲವಡೆ ಅವರು ಹೇಳಿದರು.

ಸಭೆಯಲ್ಲಿ ಕ್ಷತ್ರೀಯ ಮರಾಠಾ ಸಮಾಜದ ಉಪಾಧ್ಯಕ್ಷರಾದ ಅಣ್ಣಾಜಿ ಪವಾರ, ರಾಘವೇಂದ್ರ ಘಾಟಗೆ, ಪ್ರಧಾನ ಕಾರ್ಯದರ್ಶಿ ಡಾ. ಕೃಷ್ಣಾಜಿ ಪವಾರ, ಸಹ ಕಾರ್ಯದರ್ಶಿ ಹಣಮಂತ ನಲವಡೆ ಹಾಗೂ ಸಮಾಜದ ಪದಾಧಿಕಾರಿಗಳಾದ ಅನೀಲ್ ಜಾಧವ, ಅನೀಲ್ ಪವಾರ್, ಸುನೀಲ್ ಜಾಧವ, ಅಂಬಾಜಿ ಘಾಟಗೆ, ರಾಘವೇಂದ್ರ ನಲವಡೆ, ಅಶೋಕ ಘಾಟಗೆ, ಸಂತೋಷ ಜಾಧವ, ಸಚೀನ್ ಸಾಳುಂಕೆ, ಗಜಾನನ ನಲವಡೆ, ಕಿರಣ್ ಪವಾರ, ಭೀಮಾಜಿ ಘಾಟಗೆ, ಸಂತೋಷ ಚವ್ಹಾಣ, ಶಿವಾಜಿ ಘಾಟಗೆ, ಜೀಜಾಮಾತಾ ಮಹಿಳಾ ಮಂಡಳದ ಪದಾಧಿಕಾರಿಗಳಾದ ಶೋಭಾ ಘಾಟಗೆ, ಶಿಲ್ಪಾ ಜಾಧವ, ಸುನೀತಾ ಘಾಟಗೆ, ಶಾರದಾ ಘಾಟಗೆ, ಶಾರದಾ ಪವಾರ, LAXMI ನಲವಡೆ, ಅಂಬು ಘಾಟಗೆ, ಅನುಶ್ರೀ ಜಾಧವ, ಸಂಗೀತಾ ಘಾಟಗೆ, ಅಂಬಿಕಾ ಜಾಧವ, ದ್ರಾಕ್ಷಾಯಣಿ ಪವಾರ, ಭವಾನಿ ಘಾಟಗೆ, ಜ್ಯೋತಿ ಘಾಟಗೆ ಮೊದಲಾದವರು ಉಪಸ್ತಿತರಿದ್ದರು. ಸಮಾಜದ ವಿನಾಯಕ ಘಾಟಗೆ ಸ್ವಾಗತಿಸಿ ವಂದಿಸಿದರು.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ