Muddebihal: ಶಿಕ್ಷಣ ಯಾರಿಂದಲೂ ಕಸಿದುಕೊಳ್ಳಲಾಗದ ಆಸ್ತಿ: ಪಲ್ಲವಿ

Muddebihal: ಶಿಕ್ಷಣ ಯಾರಿಂದಲೂ ಕಸಿದುಕೊಳ್ಳಲಾಗದ ಆಸ್ತಿ: ಪಲ್ಲವಿ


ಮುದ್ದೇಬಿಹಾಳ: ಸಂಘ, ಸಂಸ್ಥೆಗಳು ಎಲ್ಲರನ್ನೂ ಸೇರಿಸಿಕೊಂಡು, ಸರ್ವರ ಏಳ್ಗೆಗೆ ಶ್ರಮಿಸುವ ಕೆಲಸ ಮಾಡಬೇಕು ಎಂದು ದೇವಿಕಾ ಸುಬ್ಬರಾವ್ ಫೌಂಡೇಶನ್ ಅಧ್ಯಕ್ಷೆ, ಸಮಾಜ ಸೇವಕಿ ಪಲ್ಲವಿ ನಾಡಗೌಡ ಹೇಳಿದರು.

ಪಟ್ಟಣದ ಟಾಪ್ ಇನ್ ಟೌನ್ ಹಾಲ್ ನಲ್ಲಿ ಪ್ರಗತಿ ಜೆಸಿ ಸಂಸ್ಥೆಯ 2024-25 ನೇ ಸಾಲಿನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

Join Our Telegram: https://t.me/dcgkannada

ಸಮಾಜಮುಖಿ ಕೆಲಸಗಳು ಮತ್ತು ಪಾರದರ್ಶಕತೆ ಸಂಘ ಸಂಸ್ಥೆಗಳ ಮೇಲಿನ ನಂಬಿಕೆಗೆ ಮುಖ್ಯ ಕಾರಣವಾಗುತ್ತವೆ. ಜೆಸಿ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಶಿಕ್ಷಣ ಸಂಸ್ಥೆಯಿಂದ ಅತ್ಯುತ್ತಮ ಶಿಕ್ಷಣ ನೂರಾರು ಮಕ್ಕಳಿಗೆ ಲಭಿಸುತ್ತಿರುವುದು ಸಂತಸದ ವಿಷಯ. ಶಿಕ್ಷಣದಿಂದ ದೊರಕುವ ಶಕ್ತಿ ದೊಡ್ಡದು. ಎಂದರು.

ಅತಿಥಿಗಳಾಗಿದ್ದ ವಿಜಯಪುರ ಜಿಲ್ಲಾ ಬಿಜೆಪಿ ಅಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಮಾತನಾಡಿ, ಒಂದು ಸಂಸ್ಥೆಯ ನೇತೃತ್ವ ವಹಿಸಿಕೊಂಡ ಕೆಲವರು, ಕೆಲವೇ ದಿನಗಳಲ್ಲಿ ಆ ಇಡೀ ಸಂಸ್ಥೆಯನ್ನು ತಮ್ಮ ಕುಟುಂಬದ ಆಸ್ತಿಯನ್ನಾಗಿಸಿಕೊಂಡ ಜ್ವಲಂತ ಉದಾಹರಣೆಗಳು ನಮ್ಮ ಮುಂದೆ ಇವೆ. ಆದರೆ ಜೆಸಿ ಸಂಸ್ಥೆಯ ಸದಸ್ಯರು ಫಲಾಪೇಕ್ಷೆ ಇಲ್ಲದೇ ಸ್ವಂತಕ್ಕೆ ಸ್ವಲ್ಪ, ಸಮಾಜಕ್ಕೆ ಸರ್ವಸ್ವ ಎನ್ನುವ ತತ್ವದಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಸಭೆಯಲ್ಲಿ ಬೆಂಗಳೂರು ಮಹಾ ನಗರಸಭೆಯ ವಿಶೇಷ ಆಯುಕ್ತ ಶಿವಾನಂದ ಕಲಕೇರಿ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರ ಆಪ್ತ ಕಾರ್ಯದರ್ಶಿ ಶ್ರೀಶೈಲ ಬಿದರಕುಂದಿ ಮಾತನಾಡಿದರು.

ಅಹಲ್ಯಾದೇವಿ ಹೋಳ್ಕರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಮದರಿ, ಜೆಸಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರವಿ ತಡಸದ ಅಧ್ಯಕ್ಷರಾದ ಗುರುಲಿಂಗಪ್ಪಗೌಡ ಪಾಟೀಲ, ನಿಕಟಪೂರ್ವ ಅಧ್ಯಕ್ಷರಾದ ಮಹಾಬಲೇಶ್ವರ ಶಿ.ಗಡೇದ, ಕಾರ್ಯದರ್ಶಿ ಮುತ್ತು ಕಡಿ ವೇದಿಕೆಯಲ್ಲಿದ್ದರು.

ಇದನ್ನೂ‌ ಓದಿ: Murder case: ಶೆಡ್‌ನಲ್ಲಿ ನಡೀತು ಮತ್ತೊಂದು ಭೀಕರ ಹತ್ಯೆ..! ಇಲ್ಲಿ ಸ್ನೇಹಿತನೇ ಕೊಲೆಗಾರ

2024-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ಉದ್ಯಮಿ ಶರಣು ಅಯ್ಯಪ್ಪ ಸಜ್ಜನ ಹಾಗೂ ಕಾರ್ಯದರ್ಶಿಯಾಗಿ ಸುನೀಲ್ ಇಲ್ಲೂರ ಅಧಿಕಾರ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಜೆಸಿ ಸಂಸ್ಥೆಗೆ ಸಲಹಾ ಸಮಿತಿಯ ಸದಸ್ಯರನ್ನಾಗಿ ಬಾಲಾಜಿ ಶುಗರ್ಸನ ರಾಹುಲ ಪಾಟೀಲ ಹಾಗೂ ಆರ್.ಎಸ್.ಪಾಟೀಲ ಅವರನ್ನು ಸೇರಿಸಿಕೊಳ್ಳಲಾಯಿತು.

ಸಮಾರಂಭದಲ್ಲಿ ವಿವಿದ ಕ್ಷೇತ್ರಗಳಲ್ಲಿ ಸಾಧನೆ ತೋರಿದ ಜೆಸಿ ಸದಸ್ಯರನ್ನು ಹಾಗೂ ಮಕ್ಕಳನ್ನು ಸನ್ಮಾನಿಸಲಾಯಿತು.

ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದ ಕುಂಟೋಜಿಯ ಭಾವೈಕ್ಯತೆ ಹಿರೇಮಠದ ಡಾ.ಚನ್ನವೀರ ಶಿವಾಚಾರ್ಯರು ಆಶೀರ್ವಚನ ನೀಡಿ, ಸಂಘ, ಸಂಸ್ಥೆಗಳು ದೀನರ, ದಲಿತರ, ದುರ್ಬಲರ, ನೊಂದವರ ಜೀವನಾಡಿಯಾಗಿ ಬೆಳೆಯಬೇಕು. ಸಮಾಜದ ಸರ್ವರ ಕಲ್ಯಾಣಕ್ಕೆ ಸಮಾಜ ಸೇವಾದೀಕ್ಷೆ ಪಡೆಯಬೇಕು ಎಂದರು.

ಜೆಸಿ ಶಾಲೆಯ ಮಕ್ಕಳು ಪ್ರಾರ್ಥಿಸಿದರು. ಡಾ.ವೀರೇಶ ಪಾಟೀಲ ಸ್ವಾಗತಿಸಿದರು. ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಸಹಾಯಕ ಆಯುಕ್ತ ಅರವಿಂದ ಜಮಖಂಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ.ಎಸ್.ಎಸ್.ಹೂಗಾರ ಹಾಗೂ ಮಹಾಬಲೇಶ್ವರ ಗಡೇದ ನಿರೂಪಿಸಿದರು.

Latest News

PSI ಪತ್ನಿ ಆತ್ಮಹತ್ಯೆ!

PSI ಪತ್ನಿ ಆತ್ಮಹತ್ಯೆ!

ಬಳ್ಳಾರಿ: PSI ಪತಿ ಹಾಗೂ ಇಬ್ಬರು ಮಕ್ಕಳನ್ನ ರೆಡಿ ಮಾಡಿ, ಧ್ವಜಾರೋಹಣಕ್ಕೆ ಕಳಿಸಿದ ಬಳಿಕ

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಆಂತರಿಕ ಭಿನ್ನಭಿಪ್ರಾಯವೇ ದೇಶದ ನಾಗರಿಕರ ಮೇಲಿನ ದಾಳಿಗಳಂತಹ ಘಟನೆಗಳಿಗೆ ವೈರಿ ರಾಷ್ಟ್ರಗಳು ಕೈ ಹಾಕುತ್ತಿವೆ. ನಾವೆಲ್ಲ ಭಾರತ ಅಖಂಡವಾಗಿ ಉಳಿಯುವ ಸಂಕಲ್ಪವನ್ನು ಮಾಡಬೇಕಾಗಿದೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಸಮರ್ಥವಾಗಿ ಭಾರತದ ಸೇನಾಶಕ್ತಿ ಪ್ರತ್ಯುತ್ತರ ಕೊಟ್ಟಿದೆ ಎಂದು ಮೆಲಕು ಹಾಕಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಾಲ್ಲೂಕು ಆಡಳಿತ ಸೌಧ ಆವರಣದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ