Muddebihal: eviction of poor shed, demand for money from PDO for GPS- allegation

Muddebihal: ಬಡವರ ಶೆಡ್ ತೆರವು, ಜಿಪಿಎಸ್‌ಗೆ ಪಿಡಿಒಯಿಂದ ಹಣಕ್ಕೆ ಬೇಡಿಕೆ- ಆರೋಪ

Muddebihal: ಬಡವರ ಶೆಡ್ ತೆರವು, ಜಿಪಿಎಸ್‌ಗೆ ಪಿಡಿಒಯಿಂದ ಹಣಕ್ಕೆ ಬೇಡಿಕೆ- ಆರೋಪ

ಮುದ್ದೇಬಿಹಾಳ : ತಾಲ್ಲೂಕಿನ ಯರಝರಿ ಗ್ರಾಪಂ ಪಿಡಿಒ ವಿಜಯಾ ಮುದಗಲ್ ಹಾಗೂ ಕಾರ್ಯದರ್ಶಿ ವಿಲಾಸ ಚವ್ಹಾಣ ಬಡವರ ಮೇಲೆ ದೌರ್ಜನ್ಯ ನಡೆಸುತ್ತಿದ್ದು ಮನೆಗಳ ಜಿಪಿಎಸ್ ಮಾಡಲು ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಆರೋಪಿಸಿ ಯರಝರಿ ಪಂಚಾಯಿತಿ ವ್ಯಾಪ್ತಿಯ ಹಂಡರಗಲ್ ಗ್ರಾಮಸ್ಥರು ತಾಪಂ ಇಒಗೆ ಸೋಮವಾರ ದೂರು ಸಲ್ಲಿಸಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಇಲ್ಲಿನ ತಾಲ್ಲೂಕಾ ಪಂಚಾಯಿತಿ ಕಚೇರಿಗೆ ಆಗಮಿಸಿದ್ದ ಹಂಡರಗಲ್ಲ ಗ್ರಾಮದ ಹುಲ್ಲಪ್ಪ ಕೇಸಾಪೂರ ಮಾತನಾಡಿ, ಯರಝರಿ ಗ್ರಾಪಂನ ವ್ಯಾಪ್ತಿಯಲ್ಲಿ ಹಂಡರಗಲ್ಲ ಗ್ರಾಮದಲ್ಲಿ ಸೆ.6 ರಂದು ಪೊಲೀಸರ ಬಲದೊಂದಿಗೆ ಪಿಡಿಒ, ಕಾರ್ಯದರ್ಶಿಗಳು ಬಂದು ನಮ್ಮ ಮನೆಯ ಪಕ್ಕದಲ್ಲಿ ಬುದ್ಧಿಮಾಂದ್ಯಳು, ವಿಕಲಚೇತನಳು ಇರುವ ಮರಗಮ್ಮ ಕೇಸಾಪುರ ಹಾಕಿಕೊಂಡು ಉಪಜೀವನ ನಡೆಸುತ್ತಿದ್ದ ಶೆಡ್‌ನ್ನು ತೆರವುಗೊಳಿಸಿದ್ದಾರೆ. ಗಾಂವಠಾಣ ಜಾಗೆ ಎಂದು ಅದನ್ನು ಪಿಡಿಒ, ಕಾರ್ಯದರ್ಶಿಗಳು ತೆರವುಗೊಳಿಸಿದ್ದಾರೆ.

ಗ್ರಾಮದಲ್ಲಿ ಇನ್ನೂ ಹಲವಾರು ಕಡೆ ಗಾಂವಠಾಣಾ ಜಾಗೆ ಇದ್ದರೂ ನಮ್ಮ ಮಗಳಿದ್ದ ಶೆಡ್ ತೆರವುಗೊಳಿಸಿ ಅನ್ಯಾಯ ಮಾಡಿದ್ದಾರೆ ಎಂದು ತಾಪಂ ಇಒಗೆ ದೂರಿದರು.

ಇದಕ್ಕೆ ಉತ್ತರಿಸಿದ ಯರಝರಿ ಗ್ರಾಪಂ ಕಾರ್ಯದರ್ಶಿ ವಿಲಾಸ ಚವ್ಹಾಣ, ಸದರಿ ಜಾಗೆ ಗ್ರಾಮ ಪಂಚಾಯಿತಿಗೆ ಸೇರಿದ ಗಾಂವಠಾಣೆ ಜಾಗೆ ಆಗಿದ್ದು ಅಲ್ಲಿ ಅಂಗನವಾಡಿ ಕಟ್ಟಡ ಕಟ್ಟಲು ಜಾಗೆ ಗುರುತಿಸಲಾಗಿದೆ.ಹೀಗಾಗಿ ಅಲ್ಲಿನ ಅತಿಕ್ರಮಣ ತೆರವುಗೊಳಿಸಲಾಗಿದೆ. ಸರಕಾರದ ಜಾಗೆಯನ್ನು ಯಾರೊಬ್ಬರೂ ಅತಿಕ್ರಮಣ ಮಾಡಲು ಬರುವುದಿಲ್ಲ ಎಂದು ತಿಳಿಸಿದರು.

ತಾಪಂ ಇಒ ನಿಂಗಪ್ಪ ಮಸಳಿ ಮಾತನಾಡಿ, ಗ್ರಾಪಂ ಜಾಗೆ ಅತಿಕ್ರಮಿಸಲು ಅವಕಾಶ ಇಲ್ಲ.ಆದರೂ ಹಂಡರಗಲ್ಲ ಗ್ರಾಮದಲ್ಲಿನ ಗಾಂವಠಾಣೆ ಜಾಗೆ ಎಷ್ಟಿದೆ ಎಂಬುದನ್ನು ಪರಿಶೀಲನೆ ನಡೆಸಿ ಸದರಿ ವಿವಾದದ ಕುರಿತು ವರದಿ ನೀಡಲು ತಾಪಂ ವ್ಯವಸ್ಥಾಪಕರನ್ನು ನಿಯೋಜಿಸಲಾಗುತ್ತದೆ ಎಂದು ತಿಳಿಸಿದರು.

ಪಿಡಿಒ ಅವರಿಂದ ಹಣಕ್ಕೆ ಬೇಡಿಕೆ ಆರೋಪ

ಗ್ರಾಮ ಪಂಚಾಯಿತಿ ಪಿಡಿಒ ವಿಜಯಾ ಮುದಗಲ್ ಜಿಪಿಎಸ್ ಮಾಡಲು ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ಈಗಾಗಲೇ ಮನೆಗಳ ಜಿಪಿಎಸ್ ಮಾಡಲು 8 ಸಾವಿರ ರೂಪಾಯಿ ಹಣ ಕೊಟ್ಟಿದ್ದೇನೆ ಎಂದು ಗ್ರಾಮದ ದಾವಲಸಾಬ ಗುಡೂರ ಆರೋಪಿಸಿದರು.

ಸನ್ 2021ನೇ ಸಾಲಿನಲ್ಲಿ ಬಸವ ವಸತಿ ಯೋಜನೆಯಡಿ ನನ್ನ ಪತ್ನಿಯ ಹೆಸರಿನಲ್ಲಿ ಮನೆ ಮಂಜೂರಾಗಿದ್ದು ಮೂರನೇ ಹಂತಕ್ಕೆ ಮನೆ ಬಂದು ನಿಂತಿದೆ.ಜಿಪಿಎಸ್ ಮಾಡಿಸಲು ಹಣವನ್ನು ಕೊಟ್ಟಿದ್ದೇನೆ. ಆದರೆ ಜಿಪಿಎಸ್ ಮಾಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಮುಖಂಡ ಇಬ್ರಾಹಿಂ ಮಾಗಿ ಮಾತನಾಡಿ, ಯರಝರಿ ಗ್ರಾಪಂ ಕಾರ್ಯದರ್ಶಿ ವಿಲಾಸ ಚವ್ಹಾಣ ಗ್ರಾಮೀಣ ಭಾಗದ ಸಮಸ್ಯೆಗಳನ್ನು ತೆಗೆದುಕೊಂಡು ಹೋದರೆ ಜನರೊಂದಿಗೆ ಉಡಾಫೆಯೊಂದಿಗೆ ಮಾತನಾಡುತ್ತಾರೆ. ಅಲ್ಲದೇ ತಮ್ಮದೇ ಒಂದು ಗುಂಪು ಕಟ್ಟಿಕೊಂಡಿದ್ದು ಧ್ವನಿ ಎತ್ತುವವರ ಮೇಲೆ ಹೊಡೆಸುವ ಬೆದರಿಕೆ ಹಾಕುತ್ತಾರೆ. ಸೌಜನ್ಯದಿಂದ ವರ್ತಿಸುವುದೇ ಇಲ್ಲ ಎಂದು ಆರೋಪಿಸಿದರು.

ಇದನ್ನೂ ಓದಿ: ಹುಟ್ಟಿದ ಮಗು ಹೆಣ್ಣೆಂಬ ಕಾರಣಕ್ಕೆ ಪ್ರೇಯಸಿಗೆ ಕೈಕೊಟ್ಟು ಪರಾರಿಯಾದ ಪ್ರಿಯಕರ!

ಜಿಪಿಎಸ್‌ಗೆ ಪಿಡಿಒ ಹಣ ಪಡೆದುಕೊಳ್ಳುತ್ತಾರೆ ಎನ್ನುವ ಆರೋಪ ಬಂದಾಗ ತಾಪಂ ಇಒ ಎದುರಿನಲ್ಲೇ ದೂರುದಾರರನ್ನು ಬೆದರಿಸುವ ಧಾಟಿಯಲ್ಲಿ ಕಾರ್ಯದರ್ಶಿ ವಿಲಾಸ ಚವ್ಹಾಣ ಅವರು ನಡೆದುಕೊಂಡಿದ್ದು ಕಂಡು ಬಂದಿತು.

Latest News

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ನೂತನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳು ಹಾಗೂ ಮನೆ ಕೆಲಸದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಕಾರ್ಮಿಕರ ಸಮಸ್ಯೆ ಚರ್ಚೆ:ಕರ್ನಾಟಕ ಜನರಲ್ ಲೇಬರ್ ಯೂನಿಯನ್ ಬೆಂಗಳೂರು ಇವರ ಮನವಿ ಮೇರೆಗೆ ಮೆ. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಲಿಮಿಟೆಡ್.. ಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಮುದ್ದೇಬಿಹಾಳ : ಜೂ.27 ರಿಂದ ಮೊಹರಂ ಹಬ್ಬದ ಆಚರಣೆ ಆರಂಭಗೊಳ್ಳಲಿದ್ದು ಶಾಂತಿಯುತವಾಗಿ ಆಚರಿಸುವಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೊಹರಂ ಶಾಂತಿಸಭೆಯಲ್ಲಿ ಅವರು ಮಾತನಾಡಿದರು. ಜೂ.27 ರಂದು ಮೊಹರಂ ಹಬ್ಬದ ಆಚರಣೆ ಆರಂಭಗೊಂಡು 29 ರಂದು ದಫನ್ ಮಾಡಲಾಗುತ್ತದೆ. ಈ ಸಮಯದಲ್ಲಿ ಅಲಾಯ್ ದೇವರುಗಳನ್ನು ಪ್ರತಿಷ್ಠಾಪಿಸುವ ಸಮಿತಿಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಮೊಹರಂ ಹಬ್ಬ ಭಾವೈಕ್ಯತೆಯ ಸಂಕೇತವಾಗಿದ್ದು ಉಭಯ