ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ ತೊಡಗಿಕೊಂಡಿದೆ ಎಂದು ಅಸ್ಕಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ರೈತರಿಗೆ ರಿಯಾಯಿತಿ ದರದಲ್ಲಿ ಜೆಸಿಬಿ ಸೇವೆ, ರೈತರ ಆತ್ಮಹತ್ಯೆ,ಅಪಘಾತದ ಪ್ರಕರಣಗಳಲ್ಲಿ ನೊಂದವರಿಗೆ ಫೌಂಡೇಶನ್‌ದಿoದ ಕಾರ್ಯ ಮಾಡುತ್ತಾ ಬಂದಿದ್ದೇವೆ ಎಂದರು.

ರಂಜಾನ್ ಮಾಸದ ನಿಮಿತ್ಯ ಮುಸ್ಲಿಂ ಬಾಂಧವರಿಗೆ ಇಫ್ತಾರಕೂಟಗಳನ್ನು ಆಯೋಜಿಸಿದ್ದು ಮಾ.9 ರಂದು ಮುದ್ದೇಬಿಹಾಳದ ಮಹೆಬೂಬ ನಗರದ ಉರ್ದು ಶಾಲೆಯಲ್ಲಿ, ನಾಲತವಾಡದಲ್ಲಿ ಜಾಮೀಯಾ ಮಸೀದಿಯಲ್ಲಿ, ಮಾ.11 ರಂದು ಕಾಳಗಿಯಲ್ಲಿ, ಮಾ.15 ರಂದು ಕಾಶಿನಕುಂಟಿ ಗ್ರಾಮಗಳಲ್ಲಿ ಇಫ್ತಾರಕೂಟಗಳನ್ನು ಆಯೋಜಿಸಿದ್ದೇವೆ ಎಂದು ಹೇಳಿದರು.

ಮೌಲಾನಾ ಅಲ್ಲಾಭಕ್ಷ ಖಾಜಿ ಮಾತನಾಡಿ, ಸಾಮಾಜಿಕ ಸೇವೆಗೆ ತಮ್ಮನ್ನು ತೊಡಗಿಸಿಕೊಂಡಿರುವ ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಮುದ್ದೇಬಿಹಾಳದ ಇಫ್ತಾರಕೂಟ ಕಾರ್ಯಕ್ರಮದಲ್ಲಿ ಎಲ್ಲ ಮುಸ್ಲಿಂ ಬಾಂಧವರು ಸಂಜೆ 5.30ಕ್ಕೆ ಆಗಮಿಸಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಮಾತನಾಡಿ, ಅಸ್ಕಿ ಫೌಂಡೇಶನ್‌ದಿoದ ಸಮಾಜ ಸೇವಾ ಚಟುವಟಿಕೆಗಳು ನಡೆಯುತ್ತಿವೆ.ಕಾರಣ ಈಗ ಯಾವ ಚುನಾವಣೆಗಳು ಇಲ್ಲ.ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಅವರ ಮಾನವೀಯ ಕಾರ್ಯವನ್ನು ಎಲ್ಲರು ಬೆಂಬಲಿಸೋಣ ಎಂದರು.

ಗೋವಾ ಕನ್ನಡಿಗರ ಸಂಘದ ಗೌರವಾಧ್ಯಕ್ಷ ಸಿದ್ಧಣ್ಣ ಮೇಟಿ,ಎಂ.ಜಿ.ಬಿರಾದಾರ(ಬಾoಬೆಗೌಡ) ಮಾತನಾಡಿದರು.ಜಮೇಯತೆ ಉಲಮಾ ಹಿಂದ್ ಘಟಕದ ಅಧ್ಯಕ್ಷ ಕಾರಿ ಇಸಾಕ್ ಮಾಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಮುಖಂಡರಾದ ನಾನಾಗೌಡ ಕೊಣ್ಣೂರ,ಕಲಾಂ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಹುಸೇನ್ ಮುಲ್ಲಾ,ಅಂಜುಮನ್ ಇಸ್ಲಾಂ ಕಮೀಟಿ ಮಾಜಿ ಉಪಾಧ್ಯಕ್ಷ ಜಬ್ಬಾರ ಗೋಲಂದಾಜ,ಗ್ಯಾರoಟಿ ಸಮೀತಿ ಸದಸ್ಯ ಸಂಗಣ್ಣ ಮೇಲಿನಮನಿ, ಮೊಹ್ಮದ್‌ರಫೀಕ ನಾಗರಾಳ, ಸರ್ಕಾರಿ ಆಸ್ಪತ್ರೆಆರೋಗ್ಯ ರಕ್ಷಾ ಸಮೀತಿ ನಾಮನಿರ್ದೇಶಿತ ಸದಸ್ಯ ಮಹ್ಮದರಫೀಕ ಶಿರೋಳ ಇದ್ದರು.

Latest News

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2025-26ನೇ ಸಾಲಿನ ಮಾರ್ಚ ಅಂತ್ಯಕ್ಕೆ ನಮ್ಮ ಸಂಘವು

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಮುದ್ದೇಬಿಹಾಳ : ಬರಪರಿಸ್ಥಿತಿ,ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಸಲು ಸೆ.9 ರಂದು ಬೆಳಗ್ಗೆ 9 ಕ್ಕೆ ಪಟ್ಟಣದ ಪ್ರವಾಸಿ ಮಂದಿರದ ಸಭಾಭವನದಲ್ಲಿ ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷರು, ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆಯಲ್ಲಿ ಟಾಸ್ಕಫೋರ್ಸ್ ಸಭೆ ನಿಗದಿಪಡಿಸಲಾಗಿದೆ. ಟಾಸ್ಕಫರ‍್ಸ್ ಸಭೆಗೆ ಎಲ್ಲ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಾಗುವಂತೆ ತಹಶೀಲ್ದಾರ್‌ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ಷೇತ್ರದ ಅವಳಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳು ಎಂದು ಘೋಷಣೆ ಮಾಡುವಂತೆ ಮಾಜಿ ಶಾಸಕ ಎ.ಎಸ್.ಪಾಟೀಲ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಮುದ್ದೇಬಿಹಾಳ : ಮತಕ್ಷೇತ್ರದ ರೈತರಿಂದ ಆಯ್ಕೆಯಾಗಿರುವ ನೀವು ಅವರ ಬದುಕಿಗೆ ಸಂಕಷ್ಟ ಎದುರಾದಾಗ ಸ್ಪಂದಿಸುವ ಕೆಲಸ ಮಾಡಬೇಕು.ಅದು ಬಿಟ್ಟು ಮೂವ್ವತ್ತು ವರ್ಷಗಳಿಂದ ಹಸಿ ಸುಳ್ಳುಗಳನ್ನೇ ಹೇಳುತ್ತಾ ರಾಜಕಾರಣ ಮಾಡಿಕೊಂಡು ಬಂದಿದ್ದೀರಿ.ಜನ ಇನ್ನು ಮುಂದೆ ನಿಮ್ಮನ್ನು ನಂಬುವುದಿಲ್ಲ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಬರ ಘೋಷಣೆಗೆ ಆಗ್ರಹಿಸಿ ನಡೆದಿರುವ ಬಿಜೆಪಿಯ ಎರಡನೇ ದಿನದ ಧರಣಿ ಸತ್ಯಾಗ್ರಹವನ್ನುದ್ದೇಶಿಸಿ ಅವರು