ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ ಬಂದಿರುವ ಕೆಲವರು ಅನಧಿಕೃತವಾಗಿ ರಾತ್ರಿ ಸಮಯದಲ್ಲಿ ನದಿಗೆ ಇಳಿದು ಅಕ್ರಮ ಮೀನುಗಾರಿಕೆಯಲ್ಲಿ ತೊಡಗಿದ್ದು ಕಳೆದ ಭಾನುವಾರ ದಿಢೀರ್ ದಾಳಿ ನಡೆಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶರಣಗೌಡ ಬಿರಾದಾರ ತಿಳಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಕೆಡಿಪಿ ಸಭೆಯಲ್ಲಿ ಇಲಾಖೆಯ ಪ್ರಗತಿ ವರದಿ ನೀಡುವ ಸಮಯದಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದರು.ಆAಧ್ರದ ಮೀನುಗಾರರು ಸಣ್ಣ ಮೀನುಗಳನ್ನು ಬಲೆ ಬೀಸಿ ಹಿಡಿದುಕೊಂಡು ಹೋಗುತ್ತಿದ್ದಾರೆ.ಇದರಿಂದ ಈ ಭಾಗದಲ್ಲಿ ಮೀನುಗಳ ಸಂತತಿ ಗಣನೀಯವಾಗಿ ಕುಸಿತವಾಗುವ ಭೀತಿ ಎದುರಾಗಿತ್ತು.ವಿಷಯ ತಿಳಿದು ಮೀನುಗಾರಿಕೆ ಇಲಾಖೆಯ ಬೆಳಗಾವಿಯ ಜಂಟಿ ನಿರ್ದೇಶಕರ ಜೊತೆಗೂಡಿ ಅಕ್ರಮ ಅಡ್ಡೆಗಳ ಮೇಲೆ ದಾಳಿ ಮಾಡಲಾಗಿದೆ.ಈ ಸಮಯದಲ್ಲಿ ಹಲವರ ಮೇಲೆ ದೂರು ದಾಖಲಿಸಲಾಗಿದೆ ಎಂದು ಹೇಳಿದರು.

ಅಕ್ರಮವಾಗಿ ನದಿ ತೀರದಲ್ಲಿ ಶೆಡ್, ಟೆಂಟ್ ಹಾಕುವುದಕ್ಕೆ ಕಡಿವಾಣ ಹಾಕಲು ಸ್ಥಳೀಯ ಗ್ರಾಮ ಪಂಚಾಯಿತಿ ಪಿಡಿಒಗಳಿಗೆ ಮೇಲಧಿಕಾರಿಗಳು ಸೂಚನೆ ನೀಡಬೇಕು ಎಂದು ವಿನಂತಿಸಿದರು.ಇದಕ್ಕೆ ಉತ್ತರಿಸಿದ ತಾಪಂ ಇಒ ವೆಂಕಟೇಶ ವಂದಾಲ , ಸಂಬAಧಿಸಿದ ಗ್ರಾಮ ಪಂಚಾಯಿತಿ ಪಿಡಿಒಗಳಿಗೆ ತಕ್ಷಣ ಈ ಕುರಿತು ಸೂಚನೆ ನೀಡಲಾಗುತ್ತದೆ ಎಂದು ತಿಳಿಸಿದರು.

ಶಿಕ್ಷಣ ಇಲಾಖೆಯ ಮೇಲಿನ ಚರ್ಚೆಗೆ ಸಂಬAಧಿಸಿದAತೆ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿಯೂ ಆಗಿರುವ ಜಂಟಿ ಕೃಷಿ ನಿರ್ದೇಶಕರಾದ ಶಿವನಗೌಡ ಪಾಟೀಲ ಬಿಇಒಗೆ ಸೂಚನೆ ನೀಡಿದರು. ಖಾಸಗಿ ಶಾಲೆಗಳಲ್ಲಿ ನುರಿತ ಶಿಕ್ಷಕರು ಇರುವುದಿಲ್ಲ.ಆದರೂ ಅಲ್ಲಿ ಫಲಿತಾಂಶ ಗುಣಮಟ್ಟದಿಂದ ಕೂಡಿರುತ್ತದೆ.ಆದರೆ ಸರ್ಕಾರಿ ಶಾಲೆಗಳಿಗೆ ನೇಮಕವಾಗುವ ಶಿಕ್ಷಕರ ವಿದ್ಯಾರ್ಹತೆ ಗುಣಮಟ್ಟದಿಂದ ಕೂಡಿದ್ದರೂ ವಿದ್ಯಾರ್ಥಿಗಳ ಫಲಿತಾಂಶ ಮಾತ್ರ ಕಳಪೆಯಾಗುವುದಕ್ಕೆ ಏತಕ್ಕೆ ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಬಿಇಒ ಬಿ.ಎಸ್.ಸಾವಳಗಿ , ಜಿಲ್ಲೆಯ ಫಲಿತಾಂಶದಲ್ಲಿ ತಾಲ್ಲೂಕು ಎರಡನೇ ಸ್ಥಾನದಲ್ಲಿದೆ.ಫಲಿತಾಂಶದ ಸುಧಾರಣೆಗಾಗಿ ಹಲವು ಕ್ರಮಗಳನ್ನು ಇಲಾಖೆಯಿಂದ ಕೈಗೊಳ್ಳಲಾಗಿದೆ.ಫೋನ್ ಇನ್, ಪಾಸಿಂಗ್ ಪ್ಯಾಕೇಜ್, ಮನೆ ಸಂದರ್ಶನ ಸೇರಿದಂತೆ ಹಲವು ಕ್ರಮಗಳನ್ನು ಅನುಸರಿಸಲಾಗುತ್ತದೆ ಎಂದು ಹೇಳಿದರು.
ಎಸ್.ಎಸ್.ಎಲ್.ಸಿಯಲ್ಲಿ ಇಂಟರ್ನಲ್ ಅಂಕಗಳನ್ನು ಪಡೆದುಕೊಳ್ಳಬೇಕಾದರೆ ವಿದ್ಯಾರ್ಥಿಗಳಿಂದ ವಿದ್ಯಾಭ್ಯಾಸ ಮಾಡಿಸಿ ಅಂಕಗಳನ್ನು ಕಡಿತಗೊಳಿಸದೇ ಪೂರ್ಣರೂಪದಲ್ಲಿ ನೀಡಲು ತಿಳಿಸಲಾಗಿದ್ದು ಥಿಯರಿ ಅಂಕಗಳಲ್ಲಿ 80ಕ್ಕೆ 13 ಅಂಕ ಪಡೆದರೆ ಆ ವಿದ್ಯಾರ್ಥಿ ಉತ್ತೀರ್ಣರಾಗುವ ಅವಕಾಶಗಳಿವೆ.ವಿದ್ಯಾರ್ಥಿಯೊಬ್ಬರು 33 ಅಂಕಗಳನ್ನು ಉತ್ತೀರ್ಣತೆಗೆ ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.ಅನುದಾನಿತ ಶಾಲೆಗಳಲ್ಲಿ ಫಲಿತಾಂಶ ಇಳಿಮುಖವಾಗಿದ್ದು ಶಿಕ್ಷಕರ ಭರ್ತಿ ಇಲ್ಲದ್ದಕ್ಕೆ ಶಿಕ್ಷಣ ಕುಂಠಿತಗೊಳ್ಳುತ್ತಿದೆ ಎಂದು ಮಾಹಿತಿ ನೀಡಿದರು.

ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ದೇಶಪಾಂಡೆ ಮಾತನಾಡಿ, ದ್ರಾಕ್ಷಿ,ನಿಂಬೆ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ಮಾಡಲಾಗಿದೆ.ಮೆಣಸಿಣಕಾಯಿ ದರ ಏರಿಕೆಯಾಗಿದ್ದು ಬಿತ್ತನೆ ಕ್ಷೇತ್ರ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಆಗಿದೆ.ಕ್ವಿಂಟಾಲ್‌ಗೆ 50-60 ಸಾವಿರ ರೂ.ದರ ಮೆಣಸಿಣಕಾಯಿ ಮಾರಾಟವಾಗುತ್ತಿದೆ ಎಂದು ತಿಳಿಸಿದರು.

ನಮ್ಮ ಭಾಗದ ರೈತರು 250 ಹೆಕ್ಟೇರ್ ಪ್ರದೇಶದಲ್ಲಿ ಅಜವಾನ ಬೆಳೆ ಬಿತ್ತನೆ ಮಾಡಿದ್ದು ಅದಕ್ಕೆ ಮಾರುಕಟ್ಟೆ ದೊರೆಯದ ಕಾರಣ ಆಸಕ್ತಿ ತೋರಿಸುತ್ತಿಲ್ಲ.ಕರ್ನೂಲ್‌ಗೆ ಅಜವಾನ ಮಾರಾಟಕ್ಕೆ ರೈತರೇ ತೆಗೆದುಕೊಂಡು ಹೋಗಬೇಕಾಗಿದೆ ಎಂದು ಮಾಹಿತಿ ನೀಡಿದರು.

ಜಂಟಿ ಕೃಷಿ ನಿರ್ದೇಶಕ,ತಾಪಂ ಆಡಳಿತಾಧಿಕಾರಿಯೂ ಆಗಿರುವ ಶಿವನಗೌಡ ಪಾಟೀಲ ಮಾತನಾಡಿ, ಕೆಡಿಪಿ ಸಭೆಯಲ್ಲಿ ಅಧಿಕಾರಿಗಳು ಸಮರ್ಪಕ ಮಾಹಿತಿ ಒದಗಿಸಬೇಕು.ಭೌತಿಕ ಪ್ರಗತಿಯನ್ನು ಇಲಾಖಾವಾರು ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ಆದ್ಯತೆ ನೀಡಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಶಿವಲೀಲಾ ಕೊಣ್ಣೂರ ಅವರಿಗೆ ಅಧಿಕಾರಿಗಳು ಸೂಚಿಸಿದರು.ಕೃಷಿ,ಆರೋಗ್ಯ,ಶಿಶು ಅಭಿವೃದ್ಧಿ,ಪಿಆರ್‌ಇಡಿ,ಸಹಕಾರ,ಸಮಾಜ ಕಲ್ಯಾಣ,ಅಬಕಾರಿ ಸೇರಿದಂತೆ ಹಲವು ಇಲಾಖೆಯ ಅಧಿಕಾರಿಗಳು ಇಲಾಖೆಯ ಪ್ರಗತಿ ಮಾಹಿತಿ ಸಭೆಗೆ ಒದಗಿಸಿದರು.ಇಒ ವೆಂಕಟೇಶ ವಂದಾಲ ವಂದಿಸಿದರು.

ಸಭೆಯಲ್ಲಿ ತಾಳಿಕೋಟಿ ತಾಪಂ ಇಒ ಅನಸೂಯಾ ಚಲವಾದಿ, ಯೋಜನಾಧಿಕಾರಿ ಪಿ.ಎಸ್.ಕಸನಕ್ಕಿ, ವೀರೇಶ ಹೂಗಾರ , ವಿವಿಧ ಇಲಾಖೆಯ ಅಧಿಕಾರಿಗಳಾದ ವಿ.ಎಸ್.ಉತ್ನಾಳ, ಬಸಂತಿ ಮಠ, ಎಸ್.ಡಿ.ಭಾವಿಕಟ್ಟಿ, ಉಮೇಶ ಕೆಲೂರ,ಡಾ.ಸತೀಶ ತಿವಾರಿ ಮೊದಲಾದವರು ಇದ್ದರು.

ಪ್ರತಿನಿಧಿಗಳನ್ನು ಕಳಿಸಬೇಡಿ:
ತಾಪಂ ಸಾಮಾನ್ಯ ಸಭೆಗೆ ಇಲಾಖೆಯ ಅಧಿಕಾರಿಗಳು ಪ್ರತಿನಿಧಿಗಳನ್ನು ಕಳುಹಿಸದೇ ಅಧಿಕಾರಿಗಳೇ ಹಾಜರಾಗಬೇಕು.ಕಡ್ಡಾಯವಾಗಿ ಮಾಹಿತಿಯನ್ನು ಮುಂಚಿತವಾಗಿ ತಾಪಂಗೆ ಒದಗಿಸಬೇಕು.ಮುಂದಿನ ಸಭೆಗಳಲ್ಲಿ ಇಲಾಖೆಯ ಪ್ರತಿನಿಧಿಗಳಿಗೆ ಅವಕಾಶ ಕಲ್ಪಿಸುವುದಿಲ್ಲ ಎಂದು ತಾಪಂ ಇಒ ವೆಂಕಟೇಶ ವಂದಾಲ ತಿಳಿಸಿದರು.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,