ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ,ಜನಪದ ಕರಗ ಕೃತಿ ಲೋಕಾರ್ಪಣೆ ಹಾಗೂ ಸಾಧಕ ಕಲಾವಿದರಿಗೆ ಗೌರವ ಸನ್ಮಾನ ಕಾರ್ಯಕ್ರಮ ಆ.22 ರಂದು ಬೆಳಗ್ಗೆ 10.30ಕ್ಕೆ ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.

ಕುಂಟೋಜಿ ಭಾವೈಕ್ಯತೆ ಮಠದ ಚೆನ್ನವೀರ ಶಿವಾಚಾರ್ಯರು ದಿವ್ಯ ಸಾನಿಧ್ಯ ವಹಿಸುವರು.ಬಸರಕೋಡ ಪವಾಡ ಬಸವೇಶ್ವರ ಕಮೀಟಿ ಅಧ್ಯಕ್ಷ ಕೆ.ವಾಯ್.ಬಿರಾದಾರ ಉದ್ಘಾಟಿಸುವರು.ಎಸ್.ಜಿ.ವಿ.ಸಿ ಕಾಲೇಜಿನ ಕಾರ್ಯದರ್ಶಿ ಅಶೋಕ ತಡಸದ ಕೃತಿ ಲೋಕಾರ್ಪಣೆ ಮಾಡುವರು.ಕರ್ನಾಟಕ ಜಾನಪದ ಪರಿಷತ್ ವಿಜಯಪುರ ಜಿಲ್ಲಾಧ್ಯಕ್ಷ ಬಿ.ಎನ್.ಪಾಟೀಲ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೂತನ ಪದಾಧಿಕಾರಿಗಳು :
ಅಶೋಕ ತಡಸದ (ಗೌರವಾಧ್ಯಕ್ಷರು), ಎ.ಆರ್.ಮುಲ್ಲಾ (ಅಧ್ಯಕ್ಷರು), ಪ್ರಕಾಶ ನರಗುಂದ (ಉಪಾಧ್ಯಕ್ಷರು), ಎಸ್.ಬಿ.ಕಂಚಾಣಿ (ಕಾರ್ಯಾಧ್ಯಕ್ಷರು), ಎಸ್.ಕೆ.ಘಾಟಿ (ಜಂಟಿ ಕಾರ್ಯದರ್ಶಿಗಳು), ಎಲ್.ಎಂ.ಚಲವಾದಿ (ಪ್ರಧಾನ ಕಾರ್ಯದರ್ಶಿಗಳು), ಎಸ್.ವಾಯ್.ವಗ್ಗರ (ಖಜಾಂಚಿ), ಎಂ.ಎನ್.ಮಾಗಿ (ಸಂಘಟನಾ ಕಾರ್ಯದರ್ಶಿ), ಸರಸ್ವತಿ ಪೀರಾಪೂರ (ಸಂಚಾಲಕಿ), ಚೇತನ ಶಿವಶಿಂಪಿ (ಕಾನೂನು ಸಲಹೆಗಾರರು), ಹುಸೇನ ಮುಲ್ಲಾ (ಪತ್ರಿಕಾ ಸಲಹೆಗಾರರು), ಸದಸ್ಯರುಗಳಾಗಿ ಚಂದ್ರಶೇಖರ ಕಲಾಲ, ರಮೇಶ ಇಂಗಳಗಿ, ಪರಶುರಾಮ ಚೌಡಕೇರ, ಎಂ.ವ್ಹಿ.ಬಿಳೇಭಾವಿ, ಎಸ್.ಆರ್.ಪಾಟೀಲ, ರೂಪರಾಣಿ ಪಟೆಗಾರ, ನರಸಮ್ಮ ಗುಬಚಿ, ವಿಜಯ ಸೋನಾರ

Latest News

‘ಕಾಲುವೆಗೆ ನೀರು ಬಿಡಿ,ಇಲ್ಲವೇ ಸಾಯಲು ವಿಷ ಕೊಡಿ’

‘ಕಾಲುವೆಗೆ ನೀರು ಬಿಡಿ,ಇಲ್ಲವೇ ಸಾಯಲು ವಿಷ ಕೊಡಿ’

ಮುದ್ದೇಬಿಹಾಳ : ಬರಗಾಲ ಬಿದ್ದಿದೆ.ಹೊಲದಲ್ಲಿ ಬಿತ್ತಿರುವ ಬೆಳೆಗಳು ಒಣಗಿ ಹೋಗುತ್ತಿವೆ.ದನ-ಕರುಗಳಿಗೆ ಕುಡಿಯಲು ನೀರಿಲ್ಲ. ಹೊಲಕ್ಕೆ

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ  ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಮುದ್ದೇಬಿಹಾಳ : ಹಾಸ್ಯ ಕಲಾವಿದ ,ಶಿಕ್ಷಕ ಗೋಪಾಲ ಎನ್.ಹೂಗಾರ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸುವ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು:       ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು: ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯ ಫಲಿತಾಂಶ

ಮುದ್ದೇಬಿಹಾಳ ;ಅಂಜುಮನ್‌ಗೆ 92.95% ರಷ್ಟು ಮತದಾನ

ಮುದ್ದೇಬಿಹಾಳ ;ಅಂಜುಮನ್‌ಗೆ 92.95% ರಷ್ಟು ಮತದಾನ

ಮುದ್ದೇಬಿಹಾಳ : ತೀವ್ರ ತುರುಸಿನಿಂದ ಕೂಡಿದ ಇಲ್ಲಿನ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ಸೋಮವಾರ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು ಸರ್ಕಾರದ ಹೆಸರಿಗೆ ಕೆಟ್ಟ ಹೆಸರು ತರಲು ಹುನ್ನಾರ ನಡೆಸುತ್ತಿದ್ದಾರೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ದೇವರ ದಯೆಯಿಂದ ಮಹಾರಾಷ್ಟçದಲ್ಲಿ ಮಳೆಯಾಗಿ ಆಲಮಟ್ಟಿ ಡ್ಯಾಂಗೆ ನೀರು ಬಂದಿದೆ. ಕುಡಿಯಲು, ಜಾನುವಾರುಗಳಿಗೆ,ಸ್ವಲ್ಪ ಬೆಳೆಗಳಿಗೆ ಬಳಸಿಕೊಳ್ಳಲು ಅನುಕೂಲವಾಗಿದೆ.ಆದರೆ ಕೆಲವರು ನೆಪಕ್ಕೋಸ್ಕರ ಆಡಳಿತ

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ ಮಾರ್ಗದರ್ಶನ ಸಿಬ್ಬಂದಿ ವರ್ಗದವರ ನಿರಂತರ ಪರಿಶ್ರಮದಿಂದ ಬ್ಯಾಂಕಿಗೆ 1.15 ಕೋಟಿ ರೂ.ಲಾಭ ಗಳಿಸಿದೆ ಎಂದು ನಾಲತವಾಡದ ಶ್ರೀ ಶರಣ ವೀರೇಶ್ವರ ಪಟ್ಟಣ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಎಂ.ಎಸ್.ಪಾಟೀಲ ಹೇಳಿದರು. ಇಲ್ಲಿಯ ರತ್ನ ಸಂಗಮ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ಸಂಘದ 30ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಂಘವು ಸುಮಾರು ಇಲ್ಲಿಯವರೆಗೆ