ಮುದ್ದೇಬಿಹಾಳ : ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಹಳೇ ಸರಕಾರಿ ಆಸ್ಪತ್ರೆಯ ಹಿಂಭಾಗದಲ್ಲಿ ಬುಧವಾರ ಬೆಳಕಿಗೆ ಬಂದಿದೆ.
ಆತ್ಮಹತ್ಯೆ ಮಾಡಿಕೊಂಡವನನ್ನು ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ ಗ್ರಾಮದ ಶರಣಬಸಪ್ಪ ಸಾಯಬಣ್ಣ ಗೋನಾಳ(45) ಎಂದು ಗುರುತಿಸಲಾಗಿದೆ.
ಕುಡಿದ ಮತ್ತಿನಲ್ಲಿ ಯಾವುದೋ ವಿಚಾರಕ್ಕೆ ಮಾನಸಿಕ ಮಾಡಿಕೊಂಡು ತನ್ನ ಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೃತನ ಪತ್ನಿ V.S ಗೋನಾಳ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ (ಬಿಎನ್‌ಎಸ್-194) ಪ್ರಕರಣ ದಾಖಲಾಗಿದೆ.







