ಮುದ್ದೇಬಿಹಾಳ : ವಿದ್ಯುತ್ ತಗುಲಿ ಕಂಬದಲ್ಲೇ ವ್ಯಕ್ತಿ ದುರ್ಮರಣ

ಮುದ್ದೇಬಿಹಾಳ : ವಿದ್ಯುತ್ ತಗುಲಿ ಕಂಬದಲ್ಲೇ ವ್ಯಕ್ತಿ ದುರ್ಮರಣ

ಮುದ್ದೇಬಿಹಾಳ : ಆಕಸ್ಮಿಕವಾಗಿ ವಿದ್ಯುತ್ ತಗುಲಿ ವ್ಯಕ್ತಿಯೊಬ್ಬ ವಿದ್ಯುತ್ ಕಂಬದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಹುಲ್ಲೂರ ಗ್ರಾಮದ ಕಾಲುವೆ ಪಕ್ಕದಲ್ಲಿರುವ ಬಸವೇಶ್ವರ ಗುಡಿಯ ಹತ್ತಿರ ಇರುವ ವಿದ್ಯುತ್ ಕಂಬದಲ್ಲಿ ಗುರುವಾರದಂದು ಸಂಜೆ ನಡೆದಿದೆ.

ಈ ಕುರಿತು ಮೃತನ ಪತ್ನಿ ರೇಣುಕಾ ಚಲವಾದಿ ಪೊಲೀಸರಿಗೆ ದೂರು (ಕಲಂ: 194 BNSS) ನೀಡಿದ್ದು ‘ನಮ್ಮೂರಲ್ಲಿ ಸಣ್ಣ ಪುಟ್ಟ ಎಲೆಕ್ಟಿಕಲ್ ಕೆಲಸಗಳನ್ನು ಮಾಡಿಕೊಂಡಿದ್ದ ನನ್ನ ಪತಿ ಗಣಪತಿ ಚಲವಾದಿ ಡಿ.18 ರಂದು ಸಾಯಂಕಾಲ 06-15 ಗಂಟೆ ಸುಮಾರಿಗೆ ನಮ್ಮೂರ ಕೆನಾಲ್ ಬಾಜು ಬಸವೇಶ್ವರ ಗುಡಿಯ ಹತ್ತಿರ ಇರುವ ಕರೆಂಟ್ ಕಂಬದ ಮೇಲೆ ಏನೋ ಕೆಲಸ ಮಾಡಲು ಹತ್ತಿದಾಗ ಆಕಸ್ಮಿಕವಾಗಿ ಕರಂಟ್ ತಗುಲಿ ಕರೆಂಟ್ ಶಾಕ ಹೊಡೆದು ತೀರಿಕೊಂಡಿರುತ್ತಾನೆ. ಹೊರತು ನನ್ನ ಗಂಡನ ಮರಣದಲ್ಲಿ ನನ್ನದಾಗಲಿ, ನಮ್ಮ ಮನೆಯವರದಾಗಲಿ ಯಾರ ಮೇಲೆಯೂ ಯಾವುದೇ ರೀತಿಯ ಸಂಶಯ ಇರುವುದಿಲ್ಲ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಸಿಪಿಐ ಮೊಹ್ಮದ ಫಸಿವುದ್ದೀನ,ಪಿಎಸ್‌ಐ ಸಂಜಯ ತಿಪರೆಡ್ಡಿ, ಹೆಸ್ಕಾಂ ಎಇಇ ಆರ್.ಎನ್.ಹಾದಿಮನಿ,ದಲಿತಪರ ಸಂಘಟನೆ ಮುಖಂಡರು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

Latest News

‘ಹೃದಯದ ಅಂತರoಗದ ಗೋಡೆಯಲ್ಲಿ ಕನ್ನಡ ಶಾಶ್ವತವಾಗಿ ನೆಲೆಸಲಿ’

‘ಹೃದಯದ ಅಂತರoಗದ ಗೋಡೆಯಲ್ಲಿ ಕನ್ನಡ ಶಾಶ್ವತವಾಗಿ ನೆಲೆಸಲಿ’

ಮುದ್ದೇಬಿಹಾಳ : ಇಂದಿನ ಆಧುನಿಕ ಕಾಲದಲ್ಲಿ ಇಂಗ್ಲಿಷ್ ಭಾಷೆಯ ಅವಶ್ಯಕತೆ ಇದೆ ಎಂಬುದನ್ನು ನಾವು

ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ:  ಕಾರ್ಖಾನೆಯವರು ಉಲ್ಟಾ ಹೊಡೆದಿದ್ದಾರೆ-ಶಾಂತಗೌಡ ಪಾಟೀಲ್

ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ: ಕಾರ್ಖಾನೆಯವರು ಉಲ್ಟಾ ಹೊಡೆದಿದ್ದಾರೆ-ಶಾಂತಗೌಡ ಪಾಟೀಲ್

ಮುದ್ದೇಬಿಹಾಳ : ಕಬ್ಬು ಬೆಳೆಗಾರರ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ

ಬೆಳೆ ಸರ್ವೆಯಲ್ಲಿ ಭಾರೀ ಲೋಪ; ಅಧಿಕಾರಿಗಳು,ಜನಪ್ರತಿನಿಧಿಗಳು ರೈತರ ಕತ್ತು ಕೊಯ್ಯಬೇಡಿ-ಶಾಂತಗೌಡ ಪಾಟೀಲ್

ಬೆಳೆ ಸರ್ವೆಯಲ್ಲಿ ಭಾರೀ ಲೋಪ; ಅಧಿಕಾರಿಗಳು,ಜನಪ್ರತಿನಿಧಿಗಳು ರೈತರ ಕತ್ತು ಕೊಯ್ಯಬೇಡಿ-ಶಾಂತಗೌಡ ಪಾಟೀಲ್

ಮುದ್ದೇಬಿಹಾಳ : ಕಳೆದ ಬಾರಿ ರೈತರಿಗೆ ಬೆಳೆ ವಿಮೆ ನೀಡುವ ಸಮಯದಲ್ಲಿ ಸಮೀಕ್ಷೆ ಸರಿಯಾಗಿ

ಅಸೂಯೆ,ಮತ್ಸರ ಬಿಟ್ಟು ಸಕಲರಿಗೆ ಲೇಸು ಬಯಸಿ-ಅಂಕಲಿಮಠ ಶ್ರೀ

ಅಸೂಯೆ,ಮತ್ಸರ ಬಿಟ್ಟು ಸಕಲರಿಗೆ ಲೇಸು ಬಯಸಿ-ಅಂಕಲಿಮಠ ಶ್ರೀ

ಮುದ್ದೇಬಿಹಾಳ : ಮಾನವ ಜನ್ಮದಲ್ಲಿ ಹುಟ್ಟಿ ಬಂದಿರುವ ಎಲ್ಲರೂ ಅಸೂಯೆ,ಮತ್ಸರದ ಭಾವನೆ ಬಿಟ್ಟು ಸಕಲರಿಗೆ

ಬರಗಾಲದಲ್ಲಿ ಸನ್ಮಾನ ಸಾಮಗ್ರಿ ತರಬೇಡಿ-ಶಾಸಕ ಸಿ.ಎಸ್.ನಾಡಗೌಡ

ಬರಗಾಲದಲ್ಲಿ ಸನ್ಮಾನ ಸಾಮಗ್ರಿ ತರಬೇಡಿ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವರು ತಮ್ಮ ರಾಜಕೀಯ ಲಾಭಕ್ಕೋಸ್ಕರ ಜನರಲ್ಲಿ ಇಲ್ಲಸಲ್ಲದ ವಿಚಾರಗಳನ್ನು ತುಂಬುವುದು.ಇರುವAತಹ ವಾತಾವರವನ್ನು ಹದಗೆಡಿಸುವುದು ಮಾಡುತ್ತಾರೆ.ಜನರು ಇಂತಹದ್ದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ತಾಲ್ಲೂಕಿನ ಹಿರೇಮುರಾಳದಲ್ಲಿ ಲೋಕೋಪಯೋಗಿ ಇಲಾಖೆಯಿಂದ 2025-26ನೇ ಸಾಲಿನ ಶಿರಾಡೋಣ ಲಿಂಗಸೂರ ರಾಜ್ಯ ಹೆದ್ದಾರಿ-41ರಲ್ಲಿ ಬರುವ ಸೇತುವೆಗಳ ಪುನರ್‌ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ನಾನು ಯಾವತ್ತೂ ಜನರಿಗೆ,ಶಾಲೆ,ಕಾಲೇಜು ಮಕ್ಕಳಿಗೆ ಡಾಬಾಗೆ ಹೋಗು,10 ಸಾವಿರ ರೂ.ತಗೆದಕೊಂಡು ಊಟ ಮಾಡು ಎಂದು ಹೇಳುವ ಅಭ್ಯಾಸ

ಸಿಜೆಪಿಯಿಂದ ದೇಶವನ್ನು ಅಸ್ಥಿರಗೊಳಿಸುವ ಹುನ್ನಾರ-ಎಸ್.ಕೆ.ಬೆಳ್ಳುಬ್ಬಿ

ಸಿಜೆಪಿಯಿಂದ ದೇಶವನ್ನು ಅಸ್ಥಿರಗೊಳಿಸುವ ಹುನ್ನಾರ-ಎಸ್.ಕೆ.ಬೆಳ್ಳುಬ್ಬಿ

ಮುದ್ದೇಬಿಹಾಳ : ಸರ್ವಾಧ್ಯಕ್ಷ ಆಡಳಿತವಿರುವ ದೇಶಗಳಲ್ಲಿ ಉಂಟಾಗಿರುವ ರಾಜಕೀಯ ಅಸ್ಥಿರತೆಯನ್ನು ಕಾಕ್ರೋಚ ಜನತಾ ಪಾರ್ಟಿ ನಮ್ಮ ದೇಶದಲ್ಲೂ ಗೊಂದಲ ಸೃಷ್ಟಿಸಲು ಹುನ್ನಾರ ನಡೆಸುತ್ತಿದ್ದು ಅದಕ್ಕೆ ಎಂದಿಗೂ ಯಶಸ್ಸು ದೊರೆಯುವುದಿಲ್ಲ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಹೇಳಿದರು. ತಾಲ್ಲೂಕಿನ ಯರಝರಿ ಯಲ್ಲಾಲಿಂಗೇಶ್ವರ ಮಠದಲ್ಲಿ ಭಾನುವಾರ ಆಯೋಜಿಸಿದ್ದ ಧರ್ಮಸಭೆ,ನವರಾತ್ರೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ದೇಶದ ಸಂಸ್ಕೃತಿ,ಸoಪತ್ತು ಲೂಟಿ ಮಾಡಿದವ ಅವನತಿ ತಾನಾಗಿಯೇ ಆಗಿದೆ.ಜಗತ್ತಿಗೆ ಗುರುವಾಗಿ ಹಿಂದೂ ಧರ್ಮ ನಿಲ್ಲಲಿದೆ.ಮುಸ್ಲಿಂರ ಪವಿತ್ರ