ಮುದ್ದೇಬಿಹಾಳ : ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆಯ ಅಂಗವಾಗಿ ನ.25ರಂದು ಬೆಳಿಗ್ಗೆ 9:30 ಗಂಟೆಗೆ ಮುದ್ದೇಬಿಹಾಳದ ಎಂ.ಜಿ.ವಿ.ಸಿ ಮಹಾವಿದ್ಯಾಲಯದಲ್ಲಿ ಬೃಹತ್ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ವಿಜಯಪುರ, ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಮುದ್ದೇಬಿಹಾಳ, ತಾಲೂಕು ಸಾರ್ವಜನಿಕ ಆಸ್ಪತ್ರೆ ಮುದ್ದೇಬಿಹಾಳ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಶಾಖೆ ವಿಜಯಪುರ, ಎಂ.ಜಿ.ವಿ.ಸಿ ಮಹಾವಿದ್ಯಾಲಯ ಹಾಗೂ ನಗರದ ವಿವಿಧ ಕಾಲೇಜುಗಳು ಮತ್ತು ಸಂಘ-ಸAಸ್ಥೆಗಳ ಸಹಯೋಗದಲ್ಲಿ ಈ ಶಿಬಿರವನ್ನು ಆಯೋಜಿಸಲಾಗಿದೆ.
ರಕ್ತದಾನವು ಅತ್ಯಂತ ಶ್ರೇಷ್ಠವಾದ ಮಾನವೀಯ ಸೇವೆಯಾಗಿದ್ದು, ತುರ್ತು ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆಯಿರುವ ರೋಗಿಗಳ ಜೀವ ಉಳಿಸಲು ಪ್ರತಿಯೊಬ್ಬರೂ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಬೇಕು. ವಿಶೇಷವಾಗಿ ಯುವಜನರು, ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಶಿಬಿರವನ್ನು ಯಶಸ್ವಿಗೊಳಿಸಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.
ತಾಲೂಕು ಆರೋಗ್ಯ ಅಧಿಕಾರಿ ಡಾ. ಸತೀಶ್ ತಿವಾರಿ ಹಾಗೂ ವಿಜಯಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ನಿರ್ದೇಶಕರಾದ ಆನಂದಗೌಡ ಬಿರಾದಾರ ಎಂ.ಜಿ.ವಿ.ಸಿ ಮಹಾವಿದ್ಯಾಲಯದ ವ್ಹಿ.ಎಸ್. ಲಮಾಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:9945789182, 9611464434, 9620783788, 9880246204, 9008237816, 6362847828 ಸಂಪರ್ಕಿಸಬಹುದಾಗಿದೆ.







