Muddebihal: ಚಿರತೆ ಹೆಜ್ಜೆ ಹೋಲುವ ಕಾಡುಪ್ರಾಣಿ ಹೆಜ್ಜೆ ಗುರುತು ಪತ್ತೆ? ಕಂದಗನೂರಿನಲ್ಲಿ ಆತಂಕ!

Muddebihal: ಚಿರತೆ ಹೆಜ್ಜೆ ಹೋಲುವ ಕಾಡುಪ್ರಾಣಿ ಹೆಜ್ಜೆ ಗುರುತು ಪತ್ತೆ? ಕಂದಗನೂರಿನಲ್ಲಿ ಆತಂಕ!

ಮುದ್ದೇಬಿಹಾಳ : ತಾಲ್ಲೂಕಿನ ಕಂದಗನೂರಿನ ಕಬ್ಬಿನ ಜಮೀನೊಂದರಲ್ಲಿ ಚಿರತೆಯಂತಹ ಕಾಡುಪ್ರಾಣಿಯದ್ದು ಎನ್ನಲಾದ ಹೆಜ್ಜೆ ಗುರುತು ಪತ್ತೆಯಾಗಿದ್ದು, ಈ ಭಾಗದ ಗ್ರಾಮಸ್ಥರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.

ಜು.29 ರಂದು ಕಂದಗನೂರ ಗ್ರಾಮದ ಬೀಯಪ್ಪ ಬೋಳಿ ಅವರ ಹೊಲದಲ್ಲಿ ಆಕಳು ಹಾಗೂ ಕರುವಿನ ಕಳೆಬರ ಪತ್ತೆಯಾಗಿದೆ. ಇದು ಕಾಡು ಪ್ರಾಣಿ ದಾಳಿಯಿಂದ ಎರಡು ಜಾನುವಾರುಗಳು ಮೃತಪಟ್ಟಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಏತನ್ಮಧ್ಯೆ, ಕಂದಗನೂರು ಭಾಗದಲ್ಲಿ ಚಿರತೆ ಬಂದಿದೆ ಎಂಬ ವಿಡಿಯೋ, ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು ಅವು ಈ ಭಾಗದ್ದಲ್ಲ ಎಂಬುದನ್ನು ಅರಣ್ಯಾಧಿಕಾರಿಗಳು ಖಚಿತಪಡಿಸಿದ್ದಾರೆ.

ಕಾಡುಪ್ರಾಣಿ ಸೆರೆಗೆ ಬಿ.ಎಸ್.ಬೋಳಿ ಅವರ ಹೊಲದಲ್ಲಿ ಬೋನು ಇರಿಸಲಾಗಿದೆ. ಆದರೆ ಜು.30 ರಂದು ಮೃತಪಟ್ಟ ಆಕಳ ಮಾಂಸ ತಿನ್ನುವುದಕ್ಕೆ ಕಾಡುಪ್ರಾಣಿ ಬಂದು ಹೋಗಿದೆ ಎಂದು ಪ್ರಾದೇಶಿಕ ಅರಣ್ಯ ಇಲಾಖೆಯ ಅಧಿಕಾರಿ ಬಸನಗೌಡ ಬಿರಾದಾರ ತಿಳಿಸಿದ್ದಾರೆ.

ಹೊಲದಲ್ಲಿ ಮಂಗಳವಾರ ಅವಲೋಕಿಸಿದಾಗ ಕಾಡುಪ್ರಾಣಿಯ ಹೆಜ್ಜೆಗಳು ಚಿರತೆಯದ್ದೆಂಬಂತೆ ಕಾಣುತ್ತಿವೆ.ಆದರೆ ಖಚಿತವಾಗಿ ಹೇಳಲು ಆಗದು.ಕತ್ತೆ ಕಿರುಬ ಕೂಡಾ ಜಾನುವಾರುಗಳನ್ನು ತಿಂದು ಹೋಗುತ್ತದೆ. ಮೇಲಧಿಕಾರಿಗಳ ಸೂಚನೆಯಂತೆ ಕಾಡುಪ್ರಾಣಿ ಸೆರೆ ಹಿಡಿಯಲು ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ. ಅದರಲ್ಲಿ ಸೆರೆಯಾದರೆ ಯಾವ ಪ್ರಾಣಿ ಎಂಬುದು ಖಚಿತವಾಗಿ ತಿಳಿದು ಬರಲಿದೆ ಎಂದು ಮಾಹಿತಿ ನೀಡಿದರು.

ಚಿರತೆ ಬಂದಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೋ ಫೋಟೊಗಳ ಮಾಹಿತಿಯಿಂದ ಗ್ರಾಮಸ್ಥರು ತೀವ್ರ ಆತಂಕಗೊಂಡರು. ಸಂಜೆಯವ ಹೊತ್ತಿಗೆ ಚಿರತೆ ಕಂದಗನೂರಿನಲ್ಲಿ ಕಾಣಿಸಿದ್ದಲ್ಲ ಬೇರೆ ಸ್ಥಳದ್ದು ಎಂದು ಗೊತ್ತಾದ ಬಳಿಕ ಅಲ್ಪ ನಿರಾಳರಾಗಿದ್ದಾರೆ. ಆದರೆ, ಚಿರತೆಯೇ ಬಂದಿದೆ ಎಂಬುದನ್ನು ಯಾರೊಬ್ಬರು ನೋಡಿಲ್ಲ ಎಂದು ಗ್ರಾಮಸ್ಥ ರಾಜಾಭಕ್ಷಿ ಮಕಾಶಿ ತಿಳಿಸಿದರು.

ಕೃಷಿ ಚಟುವಟಿಕೆ ಕೈಗೊಳ್ಳಲು ಗ್ರಾಮಸ್ಥರ ಹಿಂದೇಟು: ಚಿರತೆ ಕಾಣಿಸಿಕೊಂಡಿದೆ ಎಂಬ ವದಂತಿಯಿಂದ ಭೀತಿಗೊಳಗಾಗಿರುವ ಈ ಭಾಗದ ಕಂದಗನೂರು, ಕಾಳಗಿ, ಬಳಬಟ್ಟಿ ಗ್ರಾಮದ ರೈತಾಪಿ ವರ್ಗದವರಲ್ಲಿ ಕೃಷಿ ಚಟುವಟಿಕೆ ಗೆ ಹೋಗುವುದನ್ನು ಬಿಟ್ಟು ಮನೆಯಲ್ಲಿ ಕೂರುವಂತಾಗಿದೆ. ಆದಷ್ಟು ಬೇಗ ತಾಲ್ಲೂಕಾಡಳಿತದ ಅಧಿಕಾರಿಗಳು ಕಾಡುಪ್ರಾಣಿ ಪತ್ತೆ ಹಚ್ಚಿ ಸೆರೆ ಹಿಡಿದು ರೈತರಲ್ಲಿ ಉಂಟಾಗಿರುವ ಆತಂಕವನ್ನು ದೂರ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Latest News

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಇಳಕಲ್ಲ: ತಾಲೂಕಿನ ಗಡಿಸುಂಕಾಪುರ ಗ್ರಾಮದ ಹತ್ತಿರ ಇಳಕಲ್ ದತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿಯ ಜಾಗೆಯ ಕುರಿತು ಕಲಬುರ್ಗಿ ಉಚ್ಛ ನ್ಯಾಯಾಲಯ ಸರ್ವೆ ನಂ.98ಕ್ಕೆ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ ಪಟ್ಟಣದ ಶ್ರೀ ಅಭಿನವ ತಿರುಪತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ 11 ನೇ ರಾಜ್ಯ ಪೆಂಕಾಕ್ ಸಿಲಾಸ್ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಾದ ಶಕುಂತಲಾ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ )25 ರಿಂದ 30 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ವಿಕ್ರಾಂತ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ ) 20 ರಿಂದ 25 ಕೆಜಿ ವಿಭಾಗದಲ್ಲಿ ಕಂಚಿನ ಪದಕ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ