Muddebihal news: Incomplete bridge work; Letter for sanction under MLA Regional Development Fund

Muddebihal news: ಅಪೂರ್ಣ ಸೇತುವೆ ಕಾಮಗಾರಿ; ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಅಡಿ ಮಂಜೂರಾತಿಗೆ ಪತ್ರ

Muddebihal news: ಅಪೂರ್ಣ ಸೇತುವೆ ಕಾಮಗಾರಿ; ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಅಡಿ ಮಂಜೂರಾತಿಗೆ ಪತ್ರ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮೀಪದಲ್ಲಿ ಬರುವ ಅಮರೇಶ್ವರ ದೇವಸ್ಥಾನ ಹತ್ತಿರ ಇರುವ ಚಿಮ್ಮಲಗಿ ಏತ ನೀರಾವರಿ ಯೋಜನೆಯ ಪೂರ್ವ ಕಾಲುವೆ ಅಡಿಯಲ್ಲಿ ಬರುವ ವಿತರಣಾ ಕಾಲುವೆ 13ಎ ಕಿ.ಮೀ.10.60ರಲ್ಲಿ ಕಾಲುವೆ ಬ್ರಿಡ್ಜ್ ನಿರ್ಮಾಣ ಮಾಡಲು ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಮಂಜೂರಾತಿ ನೀಡುವಂತೆ ಕೆಆರ್‌ಡಿಸಿಎಲ್ ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಜಿಲ್ಲಾಧಿಕಾರಿಗೆ ಬುಧವಾರ ಪತ್ರ ಬರೆದಿದ್ದಾರೆ.

Join Our Telegram: https://t.me/dcgkannada

ನಾಲ್ಕು ಹಳ್ಳಿಗಳ ರೈತಾಪಿ ಜನರಿಗೆ ನೀರಾವರಿಗೆ ಅನುಕೂಲ ಒದಗಿಸುವ ಈ ಯೋಜನೆಯ ಬಾಕಿ ಕಾಮಗಾರಿ ಆರಂಭಕ್ಕೆ ಅಗತ್ಯವಿರುವ 35 ಲಕ್ಷ ರೂ.ಗಳನ್ನು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿ ಮಂಜೂರಾತಿ ನೀಡಿ ಕೆ.ಆರ್.ಐ.ಡಿ.ಎಲ್ ವಿಭಾಗಕ್ಕೆ ವಹಿಸುವಂತೆ ಡಿಸಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಈ ವಿಷಯದ ಕುರಿತು ಪ್ರತಿಕ್ರಿಯೆ ನೀಡಿರುವ ಹೋರಾಟಗಾರ ಶಿವಾನಂದ ವಾಲಿ, ಸದರಿ ಕಾಮಗಾರಿಯ ಅಗತ್ಯತೆಯನ್ನು ಮನಗಂಡು ಸರ್ಕಾರದ ಅನುದಾನಕ್ಕೆ ಕಾಯದೇ ಶಾಸಕರು ಮುತುವರ್ಜಿ ವಹಿಸಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಬಳಸುವಂತೆ ಡಿಸಿಗೆ ಪತ್ರ ಬರೆದಿದ್ದಕ್ಕೆ ರೈತರ ಪರವಾಗಿ ಅಭಿನಂದಿಸಿದ್ದು ಶೀಘ್ರ ಜಿಲ್ಲಾಧಿಕಾರಿಗಳು ಈ ಕಾಮಗಾರಿಗೆ ಮಂಜೂರಾತಿ ನೀಡುವಂತೆ ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: HDK vs Siddaramaiah: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅರೆಸ್ಟ್? ಸ್ಫೋಟಕ ಬಾಂಬ್ ಸಿಡಿಸಿದ ಸಿಎಂ ಸಿದ್ದರಾಮಯ್ಯ‌!

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ