ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ ; ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಅವರ ಸರ್ಕಾರದಲ್ಲಿ ಸಚಿವ ಸ್ಥಾನ ದೊರಕಲಿ.ಅವರ ಕಾರ್ಯಕರ್ತರು ತಮ್ಮ ಪಕ್ಷದ ಹೈಕಮಾಂಡ್ ಮೇಲೆ ಮನವಿ,ಆಗ್ರಹ ಮಾಡಲಿ.ಅದು ಬಿಟ್ಟು ಬಲವಂತದಿoದ ಮುದ್ದೇಬಿಹಾಳ ಬಂದ್ ಮಾಡುವುದರಿಂದ ಜನಸಾಮಾನ್ಯರ ಬದುಕಿನ ಮೇಲೆ ತೊಂದರೆಯುoಟಾಗುತ್ತದೆ ಎಂದು ವರ್ತಕ ಹಾಗೂ ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು.

ಪತ್ರಿಕೆಯೊಂದಿಗೆ ಮಾತನಾಡಿದ ಅವರು, ನಾಡಗೌಡರಿಗೆ ಸಚಿವ ಸ್ಥಾನ ಸಿಕ್ಕರೆ ಮುದ್ದೇಬಿಹಾಳದ ಅಭಿವೃದ್ಧಿಗೆ ವೇಗ ಸಿಗಬಹುದು ಎಂಬ ನಿರೀಕ್ಷೆ ನಮ್ಮದೂ ಆಗಿದೆ.ಆದರೆ ಈ ವಿಷಯದಲ್ಲಿ ಮುದ್ದೇಬಿಹಾಳ ಬಂದ್ ಮಾಡುವುದಾಗಿ ಅವರ ಕಾರ್ಯಕರ್ತರು ಹೇಳಿರುವ ವಿಚಾರ ಸರಿಯಾದದ್ದಲ್ಲ.ಒಂದು ಹೊತ್ತಿನ ಕೂಲಿ ನಂಬಿ ಬದುಕು ಜನರಿಗೆ ಈ ಬಂದ್‌ನಿoದ ಲಾಭಕ್ಕಿಂತ ತೊಂದರೆಯೇ ಅಧಿಕವಾಗಿದೆ.ಬಡವರು,ದಿನನಿತ್ಯದ ಕೂಲಿನಾಲಿ ನಂಬಿ ಜೀವನ ನಡೆಸುವವರಿಗೆ ಈ ಬಂದ್ ಕರೆ ಸಮಸ್ಯೆಯನ್ನು ಉಂಟು ಮಾಡುತ್ತದೆ.ಬಂದ್ ಕರೆ ಕೈ ಬಿಟ್ಟು ಬೇರೆ ರೀತಿಯಲ್ಲಿ ತಮ್ಮ ಹೈಕಮಾಂಡ್ ಮೇಲೆ ಒತ್ತಡ ಹೇರಲಿ ಎಂದು ಅವರು ತಿಳಿಸಿದ್ದಾರೆ.

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಜೂ.19 ರಂದು ಮುದ್ದೇಬಿಹಾಳ ಬಂದ್ ಕರೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,