ಮುದ್ದೇಬಿಹಾಳ : ಮಾ.12 ರಂದು ಪದ್ಮಾವತಿ ಅಮ್ಮನವರ ಮಹಾರಥೋತ್ಸವ

ಮುದ್ದೇಬಿಹಾಳ : ಮಾ.12 ರಂದು ಪದ್ಮಾವತಿ ಅಮ್ಮನವರ ಮಹಾರಥೋತ್ಸವ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಪದ್ಮಾವತಿ ಅಮ್ಮನವರ ಜಾತ್ರಾ ಮಹೋತ್ಸವ ಮಾ.12,13 ರಂದು ನಡೆಯಲಿದ್ದು ಇದರಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಮಾ.12 ರಂದು ಬೆಳಗ್ಗೆ ಮಂಗಲವಾದ್ಯ ಘೋಷಣೆ,8ಕ್ಕೆ ಪದ್ಮಾವತಿ ದೇವಿಯ ಕಳಸ,ಪಲ್ಲಕ್ಕಿ,ರಥದ ಹಗ್ಗದ ಮೆರವಣಿಗೆ,ಪಂಚಾಮೃತ ಅಭಿಷೇಕ ಪೂಜೆ ನಡೆಯಲಿದೆ.

ಮದ್ಯಾಹ್ನ 12ಕ್ಕೆ ಚಡಾವು ಸವಾಲು.ಮದ್ಯಾಹ್ನ 1ಕ್ಕೆ ಉತ್ಸವ ಮೂರ್ತಿಗಳ ರಥಾರೋಹಣ ನಂತರ ಅನ್ನಸಂತರ್ಪಣೆ ನಡೆಯಲಿದೆ.ಮದ್ಯಾಹ್ನ 2ಕ್ಕೆ ಧರ್ಮಸಭೆ ಮತ್ತು ಸಾಧಕರ ಸನ್ಮಾನ ಜರುಗಲಿದೆ.

ಸಭೆಯ ಅಧ್ಯಕ್ಷತೆಯನ್ನು ಪದ್ಮಾವತಿ ಟ್ರಸ್ಟ್ ಕಮಿಟಿ ಅಧ್ಯಕ್ಷ ಅಭಿನಂದನ ಗೋಗಿ ವಹಿಸುವರು.ಮುಖ್ಯ ಅತಿಥಿಗಳಾಗಿ ಶಾಸಕ ಸಿ.ಎಸ್.ನಾಡಗೌಡ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ,ಬೆಂಗಳೂರಿನ ಸ್ವಸ್ತಿಶ್ರೀ ದೇವೇಂದ್ರ ಕೀರ್ತಿ ಪುಸ್ತಕ ದತ್ತಿ ಪ್ರಶಸ್ತಿ ಪುರಸ್ಕೃತ ಪದ್ಮರಾಜ ದಂಡಾವತಿ,ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಅರವಿಂದ ಹೂಗಾರ, ಪದ್ಮಾವತಿ ಟ್ರಸ್ಟ್ ಉಪಾಧ್ಯಕ್ಷ ಗೊಮ್ಮಟೇಶ್ವರ ಸಗರಿ,ಹಡಲಗೇರಿ ಪಿಡಿಒ ಮುತ್ತು ಗಣಾಚಾರಿ ಆಗಮಿಸುವರು.ಕಾರ್ಕಳದ ವಾಗ್ಮಿ ಮುನಿರಾಜ ರೇಂಜಾಲ ಉಪನ್ಯಾಸ ನೀಡುವರು.

ಇದೇ ವೇಳೆ ವಿವಿಧ ಸಾಧಕರನ್ನು ಸನ್ಮಾನಿಸಲಾಗುವುದು.ಸಂಜೆ 6ಕ್ಕೆ ಪದ್ಮಾವತಿ ಅಮ್ಮನವರ ಮಹಾರಥೋತ್ಸವ,7ಕ್ಕೆ ಪದ್ಮಾವತಿ ಅಮ್ಮನವರಿಗೆ ಅಷ್ಟಾವಧಾನ ಪೂಜೆ,ಮಹಾಮಂಗಳಾರತಿ,ಸಾoಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.ಮಾ.13 ರಂದು ಮಹಾಮಂಗಳಾರತಿ ಕಾರ್ಯಕ್ರಮ ನಡೆಯಲಿದೆ ಎಂದು ಪದ್ಮಾವತಿ ದೇವಸ್ಥಾನ ಟ್ರಸ್ಟ್ ಕಮೀಟಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ