ಮುದ್ದೇಬಿಹಾಳ : ತಾಲೂಕಿನ ಹಿರೇಮುರಾಳ ಗ್ರಾಮದ ಶ್ರೀ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಲ್ಲನಗೌಡ ಪಾಟೀಲ್, ಉಪಾಧ್ಯಕ್ಷರಾಗಿ ಚಂದ್ರಶೇಖರ ರಾಮೋಡಗಿ ಅವರು ಅವಿರೋಧ ಆಯ್ಕೆಯಾದರು.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada
ತಾಲ್ಲೂಕಿನ ಹಿರೇಮುರಾಳದಲ್ಲಿ ಸಂಘದ ಕಚೇರಿಯಲ್ಲಿ ಸೋಮುವಾರ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ಇಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅಧ್ಯಕ್ಷ ಸ್ಥಾನಕ್ಕೆ ಮಲ್ಲನಗೌಡ ಪಾಟೀಲ್, ಉಪಾಧ್ಯಕ್ಷರಾಗಿ ಚಂದ್ರಶೇಖರ ರಾಮೋಡಗಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ಸಹಕಾರ ಅಭಿವೃದ್ಧಿ ಅಧಿಕಾರಿ ವಿಜಯಕುಮಾರ ಉತ್ನಾಳ ಘೋಷಿಸಿದರು.
ನೂತನ ಅಧ್ಯಕ್ಷ ಮಲ್ಲನಗೌಡ ಬಿ ಪಾಟೀಲ್ ಮಾತನಾಡಿ,ಸಂಘದ ಸ್ವಂತ ಕಟ್ಟಡದ ಕಾಮಗಾರಿ ಚಾಲನೆಯಲ್ಲಿದ್ದು ಕೆಲವೇ ತಿಂಗಳಲ್ಲಿ ನೂತನ ಕಟ್ಟಡ ಲೋಕಾರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.
ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಅಮರೇಶ ಬಿ.ಬಾಗೇವಾಡಿ ಮತ್ತು ಸಿಬ್ಬಂದಿ ಆಡಳಿತ ಮಂಡಳಿಯ ಪದಾಧಿಕಾರಿಗಳನ್ನು ಸನ್ಮಾನಿಸಿದರು.
ಇದನ್ನೂ ಓದಿ: ‘ಶಾಸಕರೇ ಉತ್ತರ ಕೊಡಲಿ, ಅವರ ಬಾಲಂಗೋಚಿಗಳಲ್ಲ’-ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರ ವಾಗ್ದಾಳಿ
ಸಂಘದ ನಿರ್ದೇಶಕರು, ಮುಖಂಡರಾದ ಗಿರೀಶಗೌಡ ಪಾಟೀಲ್, ನಾಗರಾಜ ರಾಮೋಡಗಿ, ರಮೇಶ ವಗ್ಗರ, ಮಲ್ಲಣ್ಣ ರಕ್ಕಸಗಿ, ಬಿ.ಬಿ.ಪಾಟೀಲ್ ಮೊದಲಾದವರು ಇದ್ದರು.