ಮುದ್ದೇಬಿಹಾಳ : ದೈಹಿಕ ಶಿಕ್ಷಣ ಪರಿವೀಕ್ಷಕ ಬಿ.ವೈ.ಕವಡಿ ಅವರ ಸೇವಾ ನಿವೃತ್ತಿ ಪ್ರಯುಕ್ತ ಗೌರವ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ ನ.29 ರಂದು ಮದ್ಯಾಹ್ನ 12.30ಕ್ಕೆ ಪಟ್ಟಣದ ಹೇಮರಡ್ಡಿ ಕಲ್ಯಾಣಮಂಟಪದಲ್ಲಿ ನಡೆಯಲಿದೆ.
ಯತ್ನಟ್ಟಿ ವೇ.ಕಾಡಯ್ಯ ಹಿರೇಮಠ ಸಾನಿಧ್ಯ ವಹಿಸುವರು.ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸುವರು.ಬಿಇಒ ಬಿ.ಎಸ್.ಸಾವಳಗಿ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ,ತಹಶೀಲ್ದಾರ್ ಕೀರ್ತಿ ಚಾಲಕ, ತಾಳಿಕೋಟಿ ತಹಶೀಲ್ದಾರ ವಿನಯಾ ಹೂಗಾರ,ತಾಪಂ ಇಒ ವೆಂಕಟೇಶ ವಂದಾಲ, ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಬಿರಾದಾರ,ಬಿಆರ್‌ಸಿ ಆರ್.ಬಿ.ಧಮ್ಮೂರಮಠ,ಅಕ್ಷರ ದಾಸೋಹ ಅಧಿಕಾರಿ ಎಂ.ಎA.ಬೆಳಗಲ್ಲ,ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅರವಿಂದ ಹೂಗಾರ,ಪುರಸಭೆ ಅಧ್ಯಕ್ಷ ಕಾಮರಾಜ ಬಿರಾದಾರ, ಪ್ರಥಮ ದರ್ಜೆ ಗುತ್ತಿಗೆದಾರ ಸುರೇಶಗೌಡ ಪಾಟೀಲ ಇಂಗಳಗೇರಿ,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಚ್.ಮುದ್ನೂರ,ತಾಳಿಕೋಟಿ ಎನ್‌ಜಿಒ ಅಧ್ಯಕ್ಷ ಶಿವರಾಜ ಚೌದ್ರಿ, ತಾಳಿಕೋಟಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಟಿ.ವಜ್ಜಲ ಸೇರಿದಂತೆ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







