ಮುದ್ದೇಬಿಹಾಳ ಪಿಕೆಪಿಎಸ್ ವಾರ್ಷಿಕ ಸಭೆ: ರೈತರು ಪಡೆದ ಸಾಲ ಸಕಾಲಕ್ಕೆ ಮರಳಿಸಿ-ಬಡದಾನಿ

ಮುದ್ದೇಬಿಹಾಳ ಪಿಕೆಪಿಎಸ್ ವಾರ್ಷಿಕ ಸಭೆ: ರೈತರು ಪಡೆದ ಸಾಲ ಸಕಾಲಕ್ಕೆ ಮರಳಿಸಿ-ಬಡದಾನಿ

ಮುದ್ದೇಬಿಹಾಳ : ರೈತರು ಕೃಷಿ ಚಟುವಟಿಕೆಗಳಿಗೆಂದು ಕಡಿಮೆ ಬಡ್ಡಿದರದಲ್ಲಿ ಪಡೆದುಕೊಂಡ ಸಾಲವನ್ನು ಸಕಾಲಕ್ಕೆ ಸಂಘಗಳಿಗೆ ತುಂಬಿದರೆ ಸಂಘದ ಆರ್ಥಿಕ ಸ್ಥಿತಿಯ ಜೊತೆಗೆ ಸಹಕಾರಿ ಸಂಘಗಳು ರೈತರ ಮೇಲಿನ ವಿಶ್ವಾಸ ಅಧಿಕಗೊಳಿಸುವಂತೆ ಮಾಡುತ್ತವೆ ಎಂದು ವಿಡಿಸಿಸಿ ಬ್ಯಾಂಕ್ ಕ್ಷೇತ್ರಾಧಿಕಾರಿ ಬಸವರಾಜ ಬಡದಾನಿ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಾಲ್ಲೂಕಿನ ಕುಂಟೋಜಿಯಲ್ಲಿ ಸೋಮವಾರ ಆಯೋಜಿಸಿದ್ದ ಮುದ್ದೇಬಿಹಾಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 49ನೇ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.

ವಿಡಿಸಿಸಿ ಬ್ಯಾಂಕಿನಿಂದ ರೈತರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಒದಗಿಸುತ್ತಿದ್ದು ಅದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ಮುದ್ದೇಬಿಹಾಳ ಪಿ.ಕೆ.ಪಿ.ಎಸ್‌ನ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿ.ಬಿ.ಅಗ್ಗಿಮಠ ಮಾತನಾಡಿ, 1976ರಲ್ಲಿ 150 ಸದಸ್ಯರಿಂದ 25 ಸಾವಿರ ರೂ. ಶೇರು ಬಂಡವಾಳದಿಂದ ವ್ಯವಸಾಯ ಸೇವಾ ಸಹಕಾರಿ ಸಂಘವೆಂದು ಆರಂಭಗೊಂಡು ಇಂದು 2278 ಸದಸ್ಯರನ್ನು ಹೊಂದಿದ್ದು ರೈತರಿಗೆ ಕೃಷಿ ಹಾಗೂ ಕೃಷಿಯೇತರ ಚಟುವಟಿಕೆಗಳಿಗೆ 706.72 ಲಕ್ಷ ರೂ.ಸಾಲ ಒದಗಿಸಿದೆ.

ಸಂಘವು 6.60 ಲಕ್ಷ ಲಾಭ ಗಳಿಸಿದ್ದು ಸಂಘದ ನಿರ್ದೇಶಕಿಯರಾದ ನಂದಾ ಮಲ್ಲಿಕಾರ್ಜುನ ಬಾಗೇವಾಡಿ ಅವರು ಸಂಘಕ್ಕೆ ಒಂದು ಟೇಬಲ್ ಹಾಗೂ 12 ಖುರ್ಚಿಗಳನ್ನು ದೇಣಿಗೆಯಾಗಿ ನೀಡಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ನಿರ್ದೇಶಕ ಎಂ.ಎಸ್.ಬಿರಾದಾರ ಮಾತನಾಡಿದರು.

ಸಂಘದ ಅಧ್ಯಕ್ಷ ಶಿವಾನಂದ ಹುಲಗಣ್ಣಿ ಅಧ್ಯಕ್ಷತೆ ವಹಿಸಿದ್ದರು.

ಉಪಾಧ್ಯಕ್ಷ ಈರಪ್ಪ ಬಿರಾದಾರ, ಪರಶುರಾಮ ಮಡಿವಾಳರ, ಅಪ್ಪಾಜಯ್ಯ ಕೊಡೇಕಲ್‌ಮಠ, ಗಂಗಾಬಾಯಿ ಬಿರಾದಾರ, ಈರಣ್ಣ ಪಣೇದಕಟ್ಟಿ, ಸೋಮಲಿಂಗಪ್ಪ ಗಸ್ತಿಗಾರ, ಪ್ರದೀಪ ಸುಧಾಕರ, ಶರಣಬಸ್ಸು ಪಲ್ಲೇದ, ಡಿಸಿಸಿ ಬ್ಯಾಂಕ್ ಕ್ಷೇತ್ರಾಧಿಕಾರಿ ಎಲ್.ಎಚ್.ರಾಠೋಡ, ಸಿಬ್ಬಂದಿ ಭಾರತಿ ನಾಟೇಕಾರ, ನಿಂಗಪ್ಪ ಮಡಿವಾಳರ ಹಾಗೂ ಸಂಘದ ವ್ಯಾಪ್ತಿಯ ಅಬ್ಬಿಹಾಳ, ಕುಂಟೋಜಿ, ಮುದ್ದೇಬಿಹಾಳ, ಶಿರೋಳ, ಹೊಕ್ರಾಣಿ ಗ್ರಾಮಗಳ ಜನರು ಪಾಲ್ಗೊಂಡಿದ್ದರು.

ಇದನ್ನೂ ಓದಿ: ಕುಸಿದ ಅಂಗನವಾಡಿ ಚಾವಣಿ ಅಪಾಯದಿಂದ ಪಾರದ ಮಕ್ಕಳು

Latest News

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮುದ್ದೇಬಿಹಾಳ : ಮಕ್ಕಳ ಮನಸ್ಸಿನಲ್ಲಿ ಬಾಲ್ಯದಿಂದಲೇ ದೇಶಪ್ರೇಮದ ಬೀಜ ಬಿತ್ತಿ ಅವರನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಮುದ್ದೇಬಿಹಾಳ : ಕುಲಶಾಸ್ತ್ರಿಯ ಅಧ್ಯಯನದ ಕೊರತೆ, ಬಲಗೈ ಸಮುದಾಯದ ವಿರುದ್ಧ ದ್ವೇಷಪೂರಿತ ನಿರ್ಧಾರವಾಗಿರುವ ಒಳಮೀಸಲಾತಿ ಕೊಡುವ ಹಿನ್ನೆಲೆಯಲ್ಲಿ ನ್ಯಾ. ನಾಗಮೋಹನದಾಸ್ ನೀಡಿರುವ ವರದಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ತಾಲ್ಲೂಕು ಒಕ್ಕೂಟದ ನೇತೃತ್ವದಲ್ಲಿ ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಿಂದ ಆರಂಭಗೊಂಡ ಪ್ರತಿಭಟನೆ ಸಂಗೊಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ವೃತ್ತ, ತಹಸೀಲ್ದಾರ್ ಕಚೇರಿಗೆ ಆಗಮಿಸಿತು. ಮುಖಂಡ ಹರೀಶ ನಾಟೀಕಾರ, ಚೆನ್ನಪ್ಪ ವಿಜಯಕರ್