ಡಿ.21 ರಿಂದ 24 ರವರೆಗೆ ಅಭಿಯಾನ: MUDDEBIHAL : ಐದು ವರ್ಷದೊಳಗಿನ 39,370 ಮಕ್ಕಳಿಗೆ ಪೋಲಿಯೋ ಲಸಿಕೆ

ಡಿ.21 ರಿಂದ 24 ರವರೆಗೆ ಅಭಿಯಾನ: MUDDEBIHAL : ಐದು ವರ್ಷದೊಳಗಿನ 39,370 ಮಕ್ಕಳಿಗೆ ಪೋಲಿಯೋ ಲಸಿಕೆ

ಮುದ್ದೇಬಿಹಾಳ : ತಾಲ್ಲೂಕಿನಾದ್ಯಂತ ಡಿ.21ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ನಾಗರಿಕರು ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸುವಂತೆ ತಹಶೀಲ್ದಾರ್ ಕೀರ್ತಿ ಚಾಲಕ ಮನವಿ ಮಾಡಿದರು.

ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ಪಲ್ಸ್ ಪೋಲಿಯೋ ಲಸಿಕೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಡಿ.21ರಂದು ಬೂತ್ ಮಟ್ಟದಲ್ಲಿ ಪೋಲಿಯೋ ಲಸಿಕೆ ಹಾಕಲಾಗುತ್ತಿದ್ದು ನಂತರ ಮೂರು ದಿನ ಮನೆ ಮನೆಗೆ ತೆರಳಿ ಪೋಲಿಯೋ ಲಸಿಕೆ ಹಾಕಲಾಗುತ್ತದೆ ಎಂದರು.

ಲಸಿಕಾ ಅಭಿಯಾನದ ಎರಡು ದಿನ ಮುನ್ನ ಎಲ್ಲ ಲಸಿಕಾ ಕೇಂದ್ರಗಳಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಕ್ರಮವಹಿಸಲು ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಪ್ರತಿ ಗ್ರಾಮಗಳಲ್ಲಿ ಕರಪತ್ರ, ಡಂಗೂರ ಸಾರುವ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಹೇಳಿದರು.

ಶಾಲಾ ಮಕ್ಕಳಿಂದ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳುವಂತೆಯೂ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಕಾರ್ಯಕರ್ತೆಯರು ಮೇಲ್ವಿಚಾರಕರು ಅಭಿಯಾನದಲ್ಲಿ ಎಲ್ಲರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಲು ಸೂಚಿಸಿದರು.

ಪಲ್ಸ್ ಪೋಲಿಯೊ ಆಂದೋಲನ ಕುರಿತು ತಾಲ್ಲೂಕು ವೈದ್ಯಾಧಿಕಾರಿ ಡಾ. ಸತೀಶ ತಿವಾರಿ ಮಾತನಾಡಿ, ತಾಲ್ಲೂಕಿನಾದ್ಯಂತ 5 ವರ್ಷದೊಳಗಿನ ಒಟ್ಟು 39,370 ಮಕ್ಕಳು ಲಸಿಕೆ ಪಡೆಯಲಿದ್ದು, ಒಟ್ಟು 207 ಬೂತ್‌ಗಳನ್ನು ಸ್ಥಾಪಿಸಲಾಗಿದೆ. ಅಲ್ಲದೇ 6 ಮೊಬೈಲ್ ಟೀಮ್ ಗಳನ್ನೂ ಕೂಡ ಸ್ಥಾಪಿಸಲಾಗಿದೆ. ಪ್ರತಿ ಬೂತ್‌ಗೆ ಇಬ್ಬರು ಸದಸ್ಯರು, ಐದು ತಂಡಕ್ಕೆ ಒಬ್ಬ ಮೇಲ್ವಿಚಾರಕರು ಕಾರ್ಯನಿರ್ವಹಿಸಲಿದ್ದು, ಪ್ರತಿ ಬೂತ್ ಮಟ್ಟದ ವ್ಯಾಪ್ತಿಯ ಮನೆಗಳಿಗೆ ತೆರಳಿ ಪೋಲಿಯೋ ಹನಿ ಹಾಕಲಿದ್ದಾರೆ. ಲಸಿಕಾ ಕಾರ್ಯಕ್ರಮಕ್ಕೆ 414 ಸಿಬ್ಬಂದಿ,40 ಜನ ಮೇಲ್ವಿಚಾರಕರು ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.

ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪರಶುರಾಮ ವಡ್ಡರ,ಆರ್.ಬಿ.ಎಸ್.ಕೆ ವೈದ್ಯ ಡಾ. ಪ್ರವೀಣ್ ಸುಣಕಲ್, ಡಾ. ಭಾಗ್ಯಶ್ರೀ ಬಿರಾದಾರ, ಡಾ.ರೇಖಾ ಹಯ್ಯಾಳ, ಕೃಷಿ ಅಧಿಕಾರಿ ಸುರೇಶ್ ಭಾವಿಕಟ್ಟಿ, ಅಕ್ಷರ ದಾಸೋಹ ಅಧಿಕಾರಿ ಎಂ.ಎA.ಬೆಳಗಲ್,ಶಿಕ್ಷಣ ಇಲಾಖೆ ಅಧಿಕಾರಿ ಪಿ.ಎ.ಬಾಳಿಕಾಯಿ,ತಾಪಂ ಯೋಜನಾಧಿಕಾರಿ ಖೂಭಾಸಿಂಗ ಜಾಧವ,ಶಿಶು ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಲಕ್ಷಿö್ಮÃ ಬಡಿಗೇರ, ಪೊಲೀಸ್ ಇಲಾಖೆಯ ಎಎಸ್‌ಐ ಕೆ.ಎಸ್.ಅಸ್ಕಿ,ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಬಿ.ಜಿ.ಮಠ.ಪುರಸಭೆ ಸಮುದಾಯ ಸಂಘಟಕ ವಿನೋದ ಝಿಂಗಾಡೆ,ವಿನೋದ್ ಜಿಂಗಾಡೆ, ಬಾಲಾಜಿ ಶುಗರ್ಸ್ ಸಿಬ್ಬಂದಿ ವೀರಣ್ಣ ಹೆಬ್ಬಾಳ,ಆರೋಗ್ಯ ಇಲಾಖೆಯ ಸಿಬ್ಬಂದಿ ಎಂ.ಎಸ್.ಗೌಡರ ಮೊದಲಾದವರು ಇದ್ದರು.

Latest News

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಮುದ್ದೇಬಿಹಾಳ : ದೇಶ-ವಿದೇಶಗಳಲ್ಲಿ ಕೋಟ್ಯಂತರ ಭಕ್ತರನ್ನು ಹೊಂದಿರುವ ಶಕ್ತಿವಂತ ದೇವರೆಂದೇ ಪ್ರಸಿದ್ಧಿಯಾದ ಶ್ರೀ ವೀರಭದ್ರೇಶ್ವರ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ:                                 ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ: ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ಮುದ್ದೇಬಿಹಾಳ : ಸಂಪೂರ್ಣ ಬಂದ್ ಮಾಡಿ ಜನರು ಸಹಕರಿಸಿದ್ದಾರೆ.ಶಾಸಕ ನಾಡಗೌಡರ ಮಾತಿಗೆ ಜನರು ಬೆಲೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ ದಿನಗಳಲ್ಲಿಯೂ ಗುರುವಿಗೆ ಮಹತ್ವವಿದೆ. ಇದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಿದೆ ಎಂದು ಬಿ.ಎ.ಎಸ್ ಇಂಟರನ್ಯಾಶನ್ ಶಾಲೆಯ ಕಾರ್ಯದರ್ಶಿ ಎಸ್.ಎಸ್.ಬಿರಾದಾರ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿ.ಎ.ಎಸ್. ಇಂಟನ್ಯಾಷನಲ್ ಸ್ಕೂಲ್‌ನಲ್ಲಿ ಬುಧವಾರ ಶಿಕ್ಷಕರ ದಿನಾಚರಣೆ ಹಾಗೂ ಇತ್ತಿಚಿಗೆ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರ ಮಾತನಾಡಿದರು. ವಿದ್ಯಾರ್ಥಿಗಳಿಗೆ ಪಠ್ಯಯೊಂದೆ ಅಗತ್ಯವಲ್ಲ. ಪಠ್ಯತರ

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು ಲಕ್ಷಗಳವರೆಗಿನ ಸಾಲ ಮನ್ನಾ ಮಾಡಿ ರೈತರ ನೆರವಿಗೆ ಧಾವಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದಲ್ಲಿ ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆದಿರುವ ಧರಣಿ ಸತ್ಯಾಗ್ರಹದ ನಾಲ್ಕನೇ ದಿನದ ಹೋರಾಟದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಮುದ್ದೇಬಿಹಾಳ ತಾಲ್ಲೂಕು ಮಾತ್ರ ಬರಪಟ್ಟಿಗೆ ಸೇರ್ಪಡೆಯಾದರೆ ಸುಮ್ಮನಾಗುವುದಿಲ್ಲ.ಕ್ಷೇತ್ರದ ತಾಳಿಕೋಟಿ ತಾಲ್ಲೂಕು, ಜಿಲ್ಲೆಯ