ಮುದ್ದೇಬಿಹಾಳ : ಸಾವಿತ್ರಿ ವಣಕ್ಯಾಳಗೆ ‘ಸಾಧಕಿ’ ಪ್ರಶಸ್ತಿ ಪ್ರದಾನ

ಮುದ್ದೇಬಿಹಾಳ : ಸಾವಿತ್ರಿ ವಣಕ್ಯಾಳಗೆ ‘ಸಾಧಕಿ’ ಪ್ರಶಸ್ತಿ ಪ್ರದಾನ

ಮುದ್ದೇಬಿಹಾಳ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ಕೊಡಮಾಡುವ ಸಾಧಕಿ ಪ್ರಶಸ್ತಿಗೆ ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಮೇಲ್ವಿಚಾರಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸಾವಿತ್ರಿ ವಣಕ್ಯಾಳ ಅವರು ಸನ್ 2026 ನೇ ಸಾಲಿನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ವಿಜಯಪುರ ಜಿಲ್ಲಾಡಳಿತ ವತಿಯಿಂದ ಪ್ರತಿ ವರ್ಷ ನೀಡುವ ಈ ಪ್ರಶಸ್ತಿಗೆ ಮುದ್ದೇಬಿಹಾಳ ತಾಲೂಕಿನಿಂದ ಸಾವಿತ್ರಿ ವಣಕ್ಯಾಳ ಅವರನ್ನು ಶಿಸ್ತುಬದ್ಧ ಕರ್ತವ್ಯ ನಿರ್ವಹಣೆಯಿಂದ ಆಯ್ಕೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಡಿ ಅನುಷ್ಠಾನಗೊಳಿಸಿರುವ ಯೋಜನೆಗಳನ್ನು ಸಮರ್ಪಕವಾಗಿ ಫಲಾನುಭವಿಗಳಿಗೆ ಸೌಲಭ್ಯಗಳನ್ನು ಒದಗಿಸುವಲ್ಲಿ ಶ್ರಮಿಸಿದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನ ವಿಜಯಪುರ ಕಂದಗಲ್ಲ ಹಣಮಂತ್ರಾಯ ರಂಗ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಆನಂದ್,ಜಿಪo ಸಿಇಒ ರಿಷಿ ಆನಂದ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ ಅವರ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಲಾಗಿದೆ.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು