ಮುದ್ದೇಬಿಹಾಳ : ಸಾಂಪ್ರದಾಯಿಕ ಕೃಷಿಯೊಂದಿಗೆ ವೈಜ್ಞಾನಿಕ ಪದ್ಧತಿಯನ್ನು ಅಳವಡಿಸಿಕೊಂಡು ಕೃಷಿ ಚಟುವಟಿಕೆ ಕೈಗೊಂಡಿದ್ದಲ್ಲಿ ಆರ್ಥಿಕವಾಗಿ ಸಬಲರಾಗಲು ಸಾಧ್ಯವಿದೆ ಎಂದು ಕೃಷಿ ಅಧಿಕಾರಿ ರಾಜೇಶ್ವರಿ ನಾಡಗೌಡ್ರ ಹೇಳಿದರು.
ತಾಲ್ಲೂಕಿನ ನೇಬಗೇರಿ ಗ್ರಾಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಹಮ್ಮಿಕೊಂಡಿದ್ದ ಎನ್.ಎಸ್.ಎಸ್. ಶಿಬಿರದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಹುನಗುಂದ ಸರಕಾರಿ ಆಸ್ಪತ್ರೆಯ ಲ್ಯಾಬ್ ಟೆಕ್ನಿಷಿಯನ್ ಶಾಂತು ಶಿವಯೋಗಿಮಠ ಅವರಿಂದ ವಿದ್ಯಾರ್ಥಿಗಳ ರಕ್ತ ಪರೀಕ್ಷೆ ಮತ್ತು ಆರೋಗ್ಯ ತಪಾಸಣೆಯನ್ನು ನಡೆಸಿದರು.
ಪ್ರಾಚಾರ್ಯ ಸಿಕಂದರ ಧನ್ನೂರ, ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಎಚ್.ಎ.ಕಟಗೂರ, ಎಲ್.ಎಚ್.ಮಮದಾಪೂರ, ಎಂ.ಎಂ.ಲಕ್ಷ್ಮಿಶ, ಮುಸ್ತಾಕ್ ಬಾಗವಾನ ಇದ್ದರು.
ಅಧಿಕಾರಿ ರಾಜೇಶ್ವರಿ ನಾಡಗೌಡ್ರ ಹಾಗೂ ಶಿಕ್ಷಕಿ ಗಂಗಾ ಪಾಟೀಲ್ ಅವರನ್ನು ಸನ್ಮಾನಿಸಲಾಯಿತು.