Had ghar tiranga BJP supporters bike rally in mudhol

Mudhol: ಹರ್ ಘರ್ ತಿರಂಗಾ ಅಭಿಯಾನ.. ಬಿಜೆಪಿಯಿಂದ ಬೈಕ್ ರ್ಯಾಲಿ

Mudhol: ಹರ್ ಘರ್ ತಿರಂಗಾ ಅಭಿಯಾನ.. ಬಿಜೆಪಿಯಿಂದ ಬೈಕ್ ರ್ಯಾಲಿ


ಮುಧೋಳ : 77 ನೇ ಸ್ವಾತಂತ್ರೋತ್ಸವದ ನಿಮಿತ್ಯ ಹರ್ ಘರ್ ತಿರಂಗಾ (Har ghar tiranga) ಕಾರ್ಯಕ್ರಮದ ಅಂಗವಾಗಿ ಬಿಜೆಪಿ‌ ಗ್ರಾಮೀಣ ಹಾಗೂ ನಗರ ಘಟಕದ‌ ವತಿಯಿಂದ ಬೈಕ್ ರ್ಯಾಲಿ ಜರುಗಿತು.

Join Our Telegram: https://t.me/dcgkannada

ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಆರಂಭಗೊಂಡ ರ್ಯಾಲಿ (Hat ghar tiranga) ಜಡಗಣ್ಣ ಬಾಲಣ್ಣ ವೃತ್ತ, ಬರಗಿ ಮಸೀದಿ, ಗಾಂಧಿ ಸರ್ಕಲ್, ಶಿವಾಜಿ ಸರ್ಕಲ್ ಮಾರ್ಗವಾಗಿ ರನ್ನ ಸರ್ಕಲ್ ಗೆ ಬಂದು ಸಮಾರೋಪಗೊಂಡಿತು.

ಬಿಜೆಪಿ ಮುಖಂಡರಾದ ಅರುಣ ಕಾರಜೋಳ, ಕೆ.ಆರ್. ಮಾಚಪ್ಪನವರ, ಬಿಜೆಪಿ‌ ಗ್ರಾಮೀಣ ಘಟಕ ಅಧ್ಯಕ್ಷ ಸಂಗಣ್ಣ ಕಾತರಕಿ, ನಗರಸಭೆ ಮಾಜಿ ಅಧ್ಯಕ್ಷ ಗುರುಪಾದ ಕುಳಲಿ, ಪ್ರಜ್ವಲ್ ಚಿಮ್ಮಡ, ಹನಮಂತ ತುಳಸಿಗೇರಿ, ರವಿ‌ ನಂದಾಗಾವ, ತುಷಾರ ಭೋಪಳೆ, ಅನುಪ್ ಚವ್ಹಾಣ ಸೇರಿದಂತೆ ಇತರರು ಇದ್ದರು.

ಇದನ್ನೂ ಓದಿ: Mudhol: ಬೆಳಂಬೆಳಗ್ಗೆ ಪೌರಕಾರ್ಮಿಕರಿಂದ ಹರ್ ಘರ್ ತಿರಂಗಾ ಮ್ಯಾರಾಥಾನ್

ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ಶಿವಮೊಗ್ಗ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ದುರ್ಘಟನೆಯು ಶಿವಮೊಗ್ಗ ನಗರದ ಕ್ಲಾರ್ಕ್ ಪೇಟೆಯಲ್ಲಿ ಬೆಳಕಿಗೆ ಬಂದಿದೆ.

ಭುವನೇಶ್ವರಿ (52), ಭುವನೇಶ್ವರಿ ಸಹೋದರ ಮಾರುತಿ (28), ಭುವನೇಶ್ವರಿ ಮಗ ದರ್ಶನ್ (22) ವಿಷ ಸೇವಿಸಿ‌ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ಭುವನೇಶ್ವರಿ ಹೋಟೆಲ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಅವರ ಸಹೋದರ ಮಾರುತಿ ಗುಜರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು. ಎಂದಿನಂತೆ ಎಲ್ಲರೂ ಮನೆಗೆ ಬಂದಿದ್ದರು. ಆದ್ರೆ, ರಾತ್ರಿ ವೇಳೆ ವಿಷ ಸೇವಿಸಿ ಸಾವಿಗೆ ಶರಣಾಗಿದ್ದಾರೆ.

ಕುಟುಂಬಸ್ಥರು ಇವರಿಗೆ ಕರೆ ಮಾಡಿದಾಗ ಯಾರೂ ಕರೆ ಸ್ವೀಕರಿಸಿರಲಿಲ್ಲ. ಹೀಗಾಗಿ, ಬೆಳಗ್ಗೆ ಭುವನೇಶ್ವರಿ ಅವರ ಇನ್ನೊಬ್ಬ ಸಹೋದರ ಬಂದು ಬಾಗಿಲು ತೆರೆದು ನೋಡಿದಾಗ ಮೂವರೂ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

ಸಾವಿಗೆ ಶರಣಾಗಿರುವುದಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

Latest News

PSI ಪತ್ನಿ ಆತ್ಮಹತ್ಯೆ!

PSI ಪತ್ನಿ ಆತ್ಮಹತ್ಯೆ!

ಬಳ್ಳಾರಿ: PSI ಪತಿ ಹಾಗೂ ಇಬ್ಬರು ಮಕ್ಕಳನ್ನ ರೆಡಿ ಮಾಡಿ, ಧ್ವಜಾರೋಹಣಕ್ಕೆ ಕಳಿಸಿದ ಬಳಿಕ

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಆಂತರಿಕ ಭಿನ್ನಭಿಪ್ರಾಯವೇ ದೇಶದ ನಾಗರಿಕರ ಮೇಲಿನ ದಾಳಿಗಳಂತಹ ಘಟನೆಗಳಿಗೆ ವೈರಿ ರಾಷ್ಟ್ರಗಳು ಕೈ ಹಾಕುತ್ತಿವೆ. ನಾವೆಲ್ಲ ಭಾರತ ಅಖಂಡವಾಗಿ ಉಳಿಯುವ ಸಂಕಲ್ಪವನ್ನು ಮಾಡಬೇಕಾಗಿದೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಸಮರ್ಥವಾಗಿ ಭಾರತದ ಸೇನಾಶಕ್ತಿ ಪ್ರತ್ಯುತ್ತರ ಕೊಟ್ಟಿದೆ ಎಂದು ಮೆಲಕು ಹಾಕಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಾಲ್ಲೂಕು ಆಡಳಿತ ಸೌಧ ಆವರಣದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ