ಮುಧೋಳ : 77 ನೇ ಸ್ವಾತಂತ್ರೋತ್ಸವದ ನಿಮಿತ್ಯ ಹರ್ ಘರ್ ತಿರಂಗಾ (Har ghar tiranga) ಕಾರ್ಯಕ್ರಮದ ಅಂಗವಾಗಿ ಬಿಜೆಪಿ ಗ್ರಾಮೀಣ ಹಾಗೂ ನಗರ ಘಟಕದ ವತಿಯಿಂದ ಬೈಕ್ ರ್ಯಾಲಿ ಜರುಗಿತು.
Join Our Telegram: https://t.me/dcgkannada
ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಆರಂಭಗೊಂಡ ರ್ಯಾಲಿ (Hat ghar tiranga) ಜಡಗಣ್ಣ ಬಾಲಣ್ಣ ವೃತ್ತ, ಬರಗಿ ಮಸೀದಿ, ಗಾಂಧಿ ಸರ್ಕಲ್, ಶಿವಾಜಿ ಸರ್ಕಲ್ ಮಾರ್ಗವಾಗಿ ರನ್ನ ಸರ್ಕಲ್ ಗೆ ಬಂದು ಸಮಾರೋಪಗೊಂಡಿತು.
ಬಿಜೆಪಿ ಮುಖಂಡರಾದ ಅರುಣ ಕಾರಜೋಳ, ಕೆ.ಆರ್. ಮಾಚಪ್ಪನವರ, ಬಿಜೆಪಿ ಗ್ರಾಮೀಣ ಘಟಕ ಅಧ್ಯಕ್ಷ ಸಂಗಣ್ಣ ಕಾತರಕಿ, ನಗರಸಭೆ ಮಾಜಿ ಅಧ್ಯಕ್ಷ ಗುರುಪಾದ ಕುಳಲಿ, ಪ್ರಜ್ವಲ್ ಚಿಮ್ಮಡ, ಹನಮಂತ ತುಳಸಿಗೇರಿ, ರವಿ ನಂದಾಗಾವ, ತುಷಾರ ಭೋಪಳೆ, ಅನುಪ್ ಚವ್ಹಾಣ ಸೇರಿದಂತೆ ಇತರರು ಇದ್ದರು.
ಇದನ್ನೂ ಓದಿ: Mudhol: ಬೆಳಂಬೆಳಗ್ಗೆ ಪೌರಕಾರ್ಮಿಕರಿಂದ ಹರ್ ಘರ್ ತಿರಂಗಾ ಮ್ಯಾರಾಥಾನ್
ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು
ಶಿವಮೊಗ್ಗ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ದುರ್ಘಟನೆಯು ಶಿವಮೊಗ್ಗ ನಗರದ ಕ್ಲಾರ್ಕ್ ಪೇಟೆಯಲ್ಲಿ ಬೆಳಕಿಗೆ ಬಂದಿದೆ.
ಭುವನೇಶ್ವರಿ (52), ಭುವನೇಶ್ವರಿ ಸಹೋದರ ಮಾರುತಿ (28), ಭುವನೇಶ್ವರಿ ಮಗ ದರ್ಶನ್ (22) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.
ಭುವನೇಶ್ವರಿ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಅವರ ಸಹೋದರ ಮಾರುತಿ ಗುಜರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು. ಎಂದಿನಂತೆ ಎಲ್ಲರೂ ಮನೆಗೆ ಬಂದಿದ್ದರು. ಆದ್ರೆ, ರಾತ್ರಿ ವೇಳೆ ವಿಷ ಸೇವಿಸಿ ಸಾವಿಗೆ ಶರಣಾಗಿದ್ದಾರೆ.
ಕುಟುಂಬಸ್ಥರು ಇವರಿಗೆ ಕರೆ ಮಾಡಿದಾಗ ಯಾರೂ ಕರೆ ಸ್ವೀಕರಿಸಿರಲಿಲ್ಲ. ಹೀಗಾಗಿ, ಬೆಳಗ್ಗೆ ಭುವನೇಶ್ವರಿ ಅವರ ಇನ್ನೊಬ್ಬ ಸಹೋದರ ಬಂದು ಬಾಗಿಲು ತೆರೆದು ನೋಡಿದಾಗ ಮೂವರೂ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.
ಸಾವಿಗೆ ಶರಣಾಗಿರುವುದಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.